AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

X Trending: ಸಾಮಾಜಿಕ ತಾಣಗಳಲ್ಲಿ ಟ್ರೆಂಡ್ ಆದ ರಾಮಮಂದಿರ ಪ್ರಾಣ ಪ್ರತಿಷ್ಠಾ: ಎಲ್ಲೆಲ್ಲೂ ರಾಮನದ್ದೇ ಸುದ್ದಿ

Pran Pratishtha: ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿದರು. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಹ್ಯಾಶ್​ಟ್ಯಾಗ್ ಮೊದಲ ಸಾಲಿನಲ್ಲೇ ಟ್ರೆಂಡ್​ನಲ್ಲಿದೆ.

X Trending: ಸಾಮಾಜಿಕ ತಾಣಗಳಲ್ಲಿ ಟ್ರೆಂಡ್ ಆದ ರಾಮಮಂದಿರ ಪ್ರಾಣ ಪ್ರತಿಷ್ಠಾ: ಎಲ್ಲೆಲ್ಲೂ ರಾಮನದ್ದೇ ಸುದ್ದಿ
Ram Mandir X Trend
Vinay Bhat
|

Updated on: Jan 22, 2024 | 2:42 PM

Share

ಅಯೋಧ್ಯೆಯಲ್ಲಿ ಅದ್ಧೂರಿ ಆಚರಣೆಗಳ ನಡುವೆ ರಾಮಮಂದಿರ ಪ್ರಾಣ ಪ್ರತಿಷ್ಠಾ (Pran Pratishtha) ಸಮಾರಂಭ ನಡೆದಿದೆ. ಇಡೀ ಭಾರತವೇ ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ನೆರವೇರಿಸಿದರು. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ದೇಶದ ದೊಡ್ಡ ಸೆಲೆಬ್ರಿಟಿಗಳು ಪಾಲ್ಗೊಂಡರು. ಸಮಾರಂಭಕ್ಕೆ 1000 ಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಖತ್ ಟ್ರೆಂಡ್ ಸೃಷ್ಟಿಸಿದೆ.

ಪ್ರಸಿದ್ಧ ಜಾಲತಾಣ ಎಕ್ಸ್ (ಟ್ವಿಟ್ಟರ್) ನಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಹ್ಯಾಶ್​ಟ್ಯಾಗ್ ಮೊದಲ ಸಾಲಿನಲ್ಲೇ ಟ್ರೆಂಡ್​ನಲ್ಲಿದೆ. #RamMandirPranPrathistha, #RamLallaVirajman, श्री राम, #राम_का_भव्य_धाम, #जय_सियाराम, #BabriZindaHai, प्रभु राम, Jai Siya Ram, जीवन धन्य, राजा राम, Lord Ram ಸೇರಿದಂತೆ ಅನೇಕ ಹ್ಯಾಶ್​ಟ್ಯಾಗ್ ಟ್ರೆಂಡಿಂಗ್​ನಲ್ಲಿದೆ.

First Look of Ram Lalla: ಅಯೋಧ್ಯೆ ರಾಮಮಂದಿರದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದ ರಾಮಲಲ್ಲಾ ಪ್ರಾಣ ಪ್ರತಿಷ್ಠೆ

Ram Mandir Twitter Trend

Ram Mandir Twitter Trend

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗತ್ ಹಾಗೂ ನೂರಾರು ಗಣ್ಯರ ಸಮ್ಮುಖದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭ ನೆರವೇರಿತು. ಚಿನ್ನ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟ 51 ಇಂಚಿನ ರಾಮಲಲ್ಲಾ ವಿಗ್ರಹವನ್ನು ಇಂದು ಅಯೋಧ್ಯೆ ದೇವಸ್ಥಾನದಲ್ಲಿ ಭವ್ಯವಾದ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಸ್ವಲ್ಪ ಮೊದಲಷ್ಟೆ ಬಹಿರಂಗಪಡಿಸಲಾಯಿತು. ತಲೆಯಿಂದ ಪಾದದವರೆಗೆ ರಾಮಲಲ್ಲಾನನ್ನು ಆಭರಣಗಳಿಂದ ಶೃಂಗರಿಸಲಾಗಿದೆ. ರಾಮಲಲ್ಲಾ ಕೈಯಲ್ಲಿ ಚಿನ್ನದ ಬಿಲ್ಲು ಮತ್ತು ಬಾಣವಿದೆ. ಹಣೆಗೆ ಬೆಳ್ಳಿ ಮತ್ತು ಕೆಂಪು ತಿಲಕದಿಂದ ಅಲಂಕರಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ