ಸಖತ್ ಸೈಲಿಶ್ ಆಗಿರುವ ನಥಿಂಗ್ ಫೋನ್ 2 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್

Nothing Phone 2 Offer: ನಥಿಂಗ್ ಫೋನ್ 2 ಮೇಲೆ ಸದ್ಯ 5000 ರೂ. ರಿಯಾಯಿತಿ ಘೋಷಿಸಲಾಗಿದೆ. ಈ ಫೋನ್ ಡ್ಯುಯಲ್ ರಿಯರ್ ಸೆಟಪ್ ಅನ್ನು ಒಳಗೊಂಡಿದೆ. ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುವ Sony IMX890 ಸಂವೇದಕದ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಅಳವಡಿಸಲಾಗಿದೆ.

ಸಖತ್ ಸೈಲಿಶ್ ಆಗಿರುವ ನಥಿಂಗ್ ಫೋನ್ 2 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್
Nothing Phone 2

Updated on: Sep 09, 2023 | 2:10 PM

ವಿದೇಶದ ಪ್ರಸಿದ್ಧ ನಥಿಂಗ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ ಎರಡನೇ ಸ್ಮಾರ್ಟ್​ಫೋನ್ ನಥಿಂಗ್ ಫೋನ್ 2 (Nothing Phone 2) ಅನ್ನು ಬಿಡುಗಡೆ ಮಾಡಿತ್ತು. ತನ್ನ ಸೈಲಿಶ್ ಲುಕ್​ನಿಂದಲೇ ಮೊಬೈಲ್ ಪ್ರಿಯರ ಹುಬ್ಬೇರಿಸಿದ ಈ ಸ್ಮಾರ್ಟ್​ಫೋನ್ ಇದೀಗ ಬಂಪರ್ ಡಿಸ್ಕೌಂಟ್​ನಲ್ಲಿ, ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ. ಮಧ್ಯಮ ಬೆಲೆಗೆ ನೀವು ಒಂದೊಳ್ಳೆ ಪ್ರೀಮಿಯಂ ಅನುಭವ ನೀಡುವ ಫೋನನ್ನು ಖರೀದಿಸಬೇಕು ಎಂದಿದ್ದಲ್ಲಿ ನಥಿಂಗ್ ಫೋನ್ 2 ಅನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಕಡಿಮೆ ಬೆಲೆಗೆ ಖರೀದಿಸಬಹುದು. ನಥಿಂಗ್ ಫೋನ್ 2 ಮೇಲೆ ಸದ್ಯ 5000 ರೂ. ರಿಯಾಯಿತಿ ಘೋಷಿಸಲಾಗಿದೆ.

ನಥಿಂಗ್ ಫೋನ್ (2) 8 GB RAM + 128 GB ಸ್ಟೋರೇಜ್ ಸಾಮರ್ಥ್ಯಕ್ಕೆ ಫ್ಲಿಪ್​ಕಾರ್ಟ್​ನಲ್ಲಿ ಮೂಲಬೆಲೆ 49,999 ರೂ. ಇದೆ. ಇದೀಗ ಶೇ. 10 ರಷ್ಟು ಡಿಸ್ಕೌಂಟ್ ಪಡೆದುಕೊಂಡು 44,999 ರೂ. ಗೆ ಸೇಲ್ ಆಗುತ್ತಿದೆ. ಇದರ ICICI, Kotak ಮತ್ತು HDFC ಬ್ಯಾಂಕ್ ಕಾರ್ಡ್‌ದಾರರಿಗೆ ಆಕರ್ಷಕ ಆಫರ್ ಕೂಡ ನೀಡಲಾಗಿದೆ.

ನಥಿಂಗ್ ಫೋನ್ (2) ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್ ಅನ್ನು ಹೊಂದಿದೆ. ಇದು ಮೂರು ಪ್ರಮುಖ ಆಂಡ್ರಾಯ್ಡ್ ಓಎಸ್ ನವೀಕರಣಗಳನ್ನು ಮತ್ತು ನಾಲ್ಕು ವರ್ಷಗಳ ಭದ್ರತಾ ಪ್ಯಾಚ್‌ಗಳನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್ 13 OS ನಲ್ಲಿ ಕಾರ್ಯನಿರ್ವಹಿಸುತ್ತದೆ, ಪ್ರಸ್ತುತ Android 14ನ ಇತ್ತೀಚಿನ ಆವೃತ್ತಿಯನ್ನು ಬಿಡುಗಡೆ ಮಾಡಬೇಕಿದೆ.

ಇದನ್ನೂ ಓದಿ
ಮಲಗುವಾಗ ಮೊಬೈಲ್ ಅನ್ನು ಎಷ್ಟು ದೂರ ಇಟ್ಟುಕೊಳ್ಳಬೇಕು?
ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ಹುವೈ ​ಫೋನ್: ಯಾವುದು?, ಬೆಲೆ ಎಷ್ಟು?
ಶವೋಮಿ 12 ಪ್ರೊ ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ
ಭಾರತದಲ್ಲಿ ಒಪ್ಪೋ A38 ಫೋನ್ ಬಿಡುಗಡೆ: ಬೆಲೆ ಕೇವಲ 12,999 ರೂ.

ತಯಾರಾಗಿ: ಮುಂದಿನ ವಾರ ಭಾರತಕ್ಕೆ ಅಪ್ಪಳಿಸುತ್ತಿದೆ ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್

ಈ ಸಾಧನವು ವಿವಿಧ ಚಾರ್ಜಿಂಗ್ ಆಯ್ಕೆಗಳನ್ನು ಬೆಂಬಲಿಸುವ 4,700mAh ಬ್ಯಾಟರಿಯನ್ನು ಹೊಂದಿದೆ. 45W ವೇಗದ ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆ ಇದೆ.

ಇದು 6.7-ಇಂಚಿನ ಪೂರ್ಣ-HD+ OLED ಡಿಸ್ ಪ್ಲೇಯನ್ನು ಹೊಂದಿದೆ. LTPO ಪ್ಯಾನೆಲ್ ಅನ್ನು ಒಳಗೊಂಡಿರುವ ಈ ಡಿಸ್‌ಪ್ಲಯು ರಿಫ್ರೆಶ್ ದರವನ್ನು 1Hz ನಿಂದ 120Hz ವರೆಗೆ ನೀಡಲಾಗಿದೆ.

ಕ್ಯಾಮೆರಾ ವಿಷಯಕ್ಕೆ ಬಂದರೆ, ಡ್ಯುಯಲ್ ರಿಯರ್ ಸೆಟಪ್ ಅನ್ನು ಒಳಗೊಂಡಿದೆ. ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಅನ್ನು ಬೆಂಬಲಿಸುವ Sony IMX890 ಸಂವೇದಕದ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಅಳವಡಿಸಲಾಗಿದೆ.

ಇನ್ನು 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಸಹ ಇದೆ. ಇದು ಸ್ಯಾಮ್‌ಸಂಗ್ JN1 ಸಂವೇದಕದ EIS ಅನ್ನು ಹೊಂದಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 32-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ