WhatsApp: ಬ್ಯಾನ್ ಆದ ವಾಟ್ಸ್​ಆ್ಯಪ್ ಅಕೌಂಟ್ ಅನ್ನು ರಿಕವರಿ ಮಾಡೋದು ಹೇಗೆ?

WhatsApp Ban: ಫಾರ್ವರ್ಡ್ ಆಗಿ ಬಂದ ಸುಳ್ಳು ಸುದ್ದಿಗಳನ್ನು ಅರಿಯದೆ ಅದನ್ನು ಇತರರಿಗೆ ಫಾರ್ವರ್ಡ್ ಮಾಡುವುದು ಅಥವಾ ಬ್ರಾಡ್​ಕಾಸ್ಟ್ ಲಿಸ್ಟ್ ಅನ್ನು ಅತಿಯಾಗಿ ಉಪಯೋಗಿಸುವುದರಿಂದಲೂ ನಿಮ್ಮ ಖಾತೆ ನಿಷೇಧಕ್ಕೆ ಒಳಗಾಗುತ್ತದೆ.

WhatsApp: ಬ್ಯಾನ್ ಆದ ವಾಟ್ಸ್​ಆ್ಯಪ್ ಅಕೌಂಟ್ ಅನ್ನು ರಿಕವರಿ ಮಾಡೋದು ಹೇಗೆ?
Whatsapp Tricks
Follow us
TV9 Web
| Updated By: Vinay Bhat

Updated on:Oct 23, 2022 | 2:24 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷಶನ್ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಬಳಸುತ್ತಿರುವವರ ಸಂಖ್ಯೆ ಕೋಟಿ ಗಟ್ಟಲೆಯಿದೆ. ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಫೀಚರ್​ಗಳನ್ನು ಬಿಡುತ್ತಿರುವ ವಾಟ್ಸ್​ಆ್ಯಪ್ ಪ್ರೈವಸಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. 2021 ರಲ್ಲಿ ನೂತನ ಐಟಿ ನಿಯಮ (IT Rule 2021) ಬಂದ ಮೇಲಂತು ಸುರಕ್ಷತೆ ಬಗ್ಗೆ ಗಮನ ಹರಿಸುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಒಂದು ಚಿಕ್ಕ ತಪ್ಪಾದರು ನಿಮ್ಮ ಅಕೌಂಟ್ ನಿಷೇಧಕ್ಕೆ (WhatsApp Ban) ಒಳಗಾಗುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಪ್ರತಿ ತಿಂಗಳು ಮಿಲಿಯನ್ ವಾಟ್ಸ್​ಆ್ಯಪ್ ಅಕೌಂಟ್ ನಿಷೇಧವಾಗುತ್ತದೆ.

ನೀವು ತಿಳಿಯದೆ ಮಾಡುವ ಸಣ್ಣ ತಪ್ಪು ಕೂಡ ನಿಮ್ಮ ವಾಟ್ಸ್​ಆ್ಯಪ್ ಖಾತೆ ನಿಷೇಧಕ್ಕೆ ಗುರಿಯಾಗಬಹುದು. ಫಾರ್ವರ್ಡ್ ಆಗಿ ಬಂದ ಸುಳ್ಳು ಸುದ್ದಿಗಳನ್ನು ಅರಿಯದೆ ಅದನ್ನು ಇತರರಿಗೆ ಫಾರ್ವರ್ಡ್ ಮಾಡುವುದು ಅಥವಾ ಬ್ರಾಡ್​ಕಾಸ್ಟ್ ಲಿಸ್ಟ್ ಅನ್ನು ಅತಿಯಾಗಿ ಉಪಯೋಗಿಸುವುದರಿಂದಲೂ ನಿಮ್ಮ ಖಾತೆ ನಿಷೇಧಕ್ಕೆ ಒಳಗಾಗುತ್ತದೆ. ಗುಡ್​ ಮಾರ್ನಿಂಗ್ ಮೆಸೇಜ್ ಅನ್ನು ಬ್ರಾಡ್​ಕಾಸ್ಟ್ ಮೂಲಕ ಹೆಚ್ಚು ಹೆಚ್ಚು ಜನರಿಗೆ ಕಳುಹಿಸಿದರೆ ಅದು ಸ್ಪ್ಯಾಮ್ ಮೆಸೇಜ್ ಆಗಬಹುದು. ಇದರಿಂದ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ ಆಗುವ ಸಾಧ್ಯತೆ ಇರುತ್ತದೆ.

ಕಳೆದ ಅಗಸ್ಟ್ ತಿಂಗಳಲ್ಲಿ ಭಾರತದಲ್ಲಿ 2.3 ಮಿಲಿಯನ್ ಭಾರತೀಯರ ವಾಟ್ಸ್​ಆ್ಯಪ್ ಖಾತೆ ನಿಷೇಧಿಸಲಾಗಿತ್ತು. ಇದಕ್ಕೆ ಮುಖ್ಯ ಕಾರಣ ತಪ್ಪು ಮಾಹಿತಿಗಳನ್ನು ಶೇರ್ ಮಾಡಿರುವುದು, ಸ್ಕ್ಯಾಮ್ ಮೆಸೇಜ್​ಗಳನ್ನು ಫಾರ್ವರ್ಡ್ ಮಾಡಿದ್ದು ಮುಖ್ಯವಾದವು. ಯಾವುದೇ ಅಹಿತಕರ ಚಟುವಟಿಕೆ ಕಂಡುಬಂದಲ್ಲಿ ನಿಮ್ಮ ಖಾತೆ ಬ್ಯಾನ್ ಆಗುತ್ತದೆ.

ಇದನ್ನೂ ಓದಿ
Image
Tech Tips: ಆಂಡ್ರಾಯ್ಡ್​ನಿಂದ ಐಫೋನ್​ಗೆ ಫೋಟೋ, ವಿಡಿಯೋ, ಚಾಟ್ಸ್​ ಟ್ರಾನ್ಫರ್ ಮಾಡುವುದು ಹೇಗೆ?
Image
Tech Tips: ಕಿರಿ ಕಿರಿ ಎನಿಸುವ ಅನಗತ್ಯ ಕರೆಗಳನ್ನು ಬ್ಲಾಕ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ ಸಿಂಪಲ್ ಟ್ರಿಕ್
Image
PDF File: ಪಿಡಿಫ್ ಫೈಲ್​ಗಳ ಪಾಸ್‌ವರ್ಡ್ ಮರೆತು ಹೋಗಿದ್ದರೆ ಈ ಟ್ರಿಕ್ ಮೂಲಕ ಓಪನ್ ಮಾಡಿ
Image
iQoo Neo 7: 120W ಫಾಸ್ಟ್ ಚಾರ್ಜರ್​ನ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್ಟುಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ. ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು. ಹೀಗಾಗಿ ಎಚ್ಚರದಿಂದಿರಿ.

ವಾಟ್ಸ್​ಆ್ಯಪ್​​ ಖಾತೆ ನಿಷೇಧವಾದರೆ ರಿಕವರಿ ಮಾಡುವುದು ಹೇಗೆ?:

  • ವಾಟ್ಸ್​ಆ್ಯಪ್​ ಅನ್ನು ಇಮೇಲ್ ಮಾಡಿ ಅಥವಾ ಆ್ಯಪ್​ನಲ್ಲಿ ರಿವ್ಯೂ ರಿಕ್ವೆಸ್ಟ್ ಆಯ್ಕೆಯನ್ನು ಟ್ಯಾಪ್ ಮಾಡಿ.
  • ರಿವ್ಯೂ ರಿಕ್ವೆಸ್ಟ್ ನೀಡಿದ ನಂತರ ಇದು ನಿಮ್ಮ ಸಮಸ್ಯೆಯನ್ನು ಪರಿಶೀಲಿಸಿ ಮತ್ತೆ ನಿಮಗೆ ಮುಂದಿನ ಹಂತದ ಮಾಹಿತಿಯನ್ನು ಒದಗಿಸುತ್ತದೆ.
  • ಈಗ ವಾಟ್ಸ್​ಆ್ಯಪ್​ ನಿಮ್ಮ ಬಗ್ಗೆ ಬಂದಿರುವ ದೂರುಗಳನ್ನು ಪರಿಶೀಲಿಸಿ ಬಳಿಕ ನಿಮ್ಮನ್ನು ಸಂಪರ್ಕಿಸುತ್ತದೆ.
  • ವಾಟ್ಸ್​ಆ್ಯಪ್​ನಲ್ಲಿ ರಿವ್ಯೂ ರಿಕ್ವೆಸ್ಟ್​ ನೀಡಿದಾಗ ನಿಮಗೆ SMS ಮೂಲಕ ಕಳುಹಿಸಲಾದ 6-ಅಂಕಿಯ ನೋಂದಣಿ ಕೋಡ್ ಅನ್ನು ನಮೂದಿಸಿ.
  • ಕೋಡ್ ನಮೂದಿಸಿದ ನಂತರ ನಿಮಗೆ ರಿವ್ಯೂ ಬರೆಯಲು ಅನುಮತಿ ಸಿಗುತ್ತದೆ ಜೊತೆಗೆ ನಿಮ್ಮ ಬಗ್ಗೆ ಬಂದ ದೂರಿನ ಬಗ್ಗೆ ಮಾತನಾಡಬಹುದು.

Published On - 2:24 pm, Sun, 23 October 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ