ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷಶನ್ ವಾಟ್ಸ್‌ಆ್ಯಪ್ (WhatsApp) ಅನ್ನು ಇಂದು ಬಳಸುತ್ತಿರುವವರ ಸಂಖ್ಯೆ ಕೋಟಿ ಗಟ್ಟಲೆಯಿದೆ. ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಫೀಚರ್ಗಳನ್ನು ಬಿಡುತ್ತಿರುವ ವಾಟ್ಸ್‌ಆ್ಯಪ್ ಪ್ರೈವಸಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. 2021 ರಲ್ಲಿ ನೂತನ ಐಟಿ ನಿಯಮ (IT Rule 2021) ಬಂದ ಮೇಲಂತು ಸುರಕ್ಷತೆ ಬಗ್ಗೆ ಗಮನ ಹರಿಸುತ್ತಿರುವ ವಾಟ್ಸ್ಆ್ಯಪ್ನಲ್ಲಿ ಒಂದು ಚಿಕ್ಕ ತಪ್ಪಾದರು ನಿಮ್ಮ ಅಕೌಂಟ್ ನಿಷೇಧಕ್ಕೆ (WhatsApp Ban) ಒಳಗಾಗುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಪ್ರತಿ ತಿಂಗಳು ಮಿಲಿಯನ್ ವಾಟ್ಸ್‌ಆ್ಯಪ್ ಅಕೌಂಟ್ ನಿಷೇಧವಾಗುತ್ತದೆ.
ನೀವು ತಿಳಿಯದೆ ಮಾಡುವ ಸಣ್ಣ ತಪ್ಪು ಕೂಡ ನಿಮ್ಮ ವಾಟ್ಸ್‌ಆ್ಯಪ್ ಖಾತೆ ನಿಷೇಧಕ್ಕೆ ಗುರಿಯಾಗಬಹುದು. ಫಾರ್ವರ್ಡ್ ಆಗಿ ಬಂದ ಸುಳ್ಳು ಸುದ್ದಿಗಳನ್ನು ಅರಿಯದೆ ಅದನ್ನು ಇತರರಿಗೆ ಫಾರ್ವರ್ಡ್ ಮಾಡುವುದು ಅಥವಾ ಬ್ರಾಡ್ಕಾಸ್ಟ್ ಲಿಸ್ಟ್ ಅನ್ನು ಅತಿಯಾಗಿ ಉಪಯೋಗಿಸುವುದರಿಂದಲೂ ನಿಮ್ಮ ಖಾತೆ ನಿಷೇಧಕ್ಕೆ ಒಳಗಾಗುತ್ತದೆ. ಗುಡ್ ಮಾರ್ನಿಂಗ್ ಮೆಸೇಜ್ ಅನ್ನು ಬ್ರಾಡ್ಕಾಸ್ಟ್ ಮೂಲಕ ಹೆಚ್ಚು ಹೆಚ್ಚು ಜನರಿಗೆ ಕಳುಹಿಸಿದರೆ ಅದು ಸ್ಪ್ಯಾಮ್ ಮೆಸೇಜ್ ಆಗಬಹುದು. ಇದರಿಂದ ವಾಟ್ಸ್‌ಆ್ಯಪ್ ಅಕೌಂಟ್ ಬ್ಯಾನ್ ಆಗುವ ಸಾಧ್ಯತೆ ಇರುತ್ತದೆ.
ಕಳೆದ ಅಗಸ್ಟ್ ತಿಂಗಳಲ್ಲಿ ಭಾರತದಲ್ಲಿ 2.3 ಮಿಲಿಯನ್ ಭಾರತೀಯರ ವಾಟ್ಸ್‌ಆ್ಯಪ್ ಖಾತೆ ನಿಷೇಧಿಸಲಾಗಿತ್ತು. ಇದಕ್ಕೆ ಮುಖ್ಯ ಕಾರಣ ತಪ್ಪು ಮಾಹಿತಿಗಳನ್ನು ಶೇರ್ ಮಾಡಿರುವುದು, ಸ್ಕ್ಯಾಮ್ ಮೆಸೇಜ್ಗಳನ್ನು ಫಾರ್ವರ್ಡ್ ಮಾಡಿದ್ದು ಮುಖ್ಯವಾದವು. ಯಾವುದೇ ಅಹಿತಕರ ಚಟುವಟಿಕೆ ಕಂಡುಬಂದಲ್ಲಿ ನಿಮ್ಮ ಖಾತೆ ಬ್ಯಾನ್ ಆಗುತ್ತದೆ.
ವಾಟ್ಸ್‌ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್‌ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್–ಟು–ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ. ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.
ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು. ಹೀಗಾಗಿ ಎಚ್ಚರದಿಂದಿರಿ.
ವಾಟ್ಸ್‌ಆ್ಯಪ್ ಖಾತೆ ನಿಷೇಧವಾದರೆ ರಿಕವರಿ ಮಾಡುವುದು ಹೇಗೆ?:
Published On - 2:24 pm, Sun, 23 October 22