Tech Tips: ನಿಮ್ಮ ಇನ್​ಸ್ಟಾಗ್ರಾಮ್ ಖಾತೆಯನ್ನು ಬೇರೆಯವರು ಬಳಸುತ್ತಿದ್ದಾರಾ?: ಈ ಟ್ರಿಕ್ ಮೂಲಕ ಕಂಡುಹಿಡಿಯಿರಿ

Instagram Tricks: ನೀವು ಇನ್​ಸ್ಟಾಗ್ರಾಮ್ ಅನ್ನು ಬಳಸುತ್ತಿದ್ದರೆ ನಿಮ್ಮ ಖಾತೆಯ ಗೌಪ್ಯತೆಯನ್ನು ನೋಡಿಕೊಳ್ಳುವುದು ಬಹಳ ಮುಖ್ಯ. ಬೇರೊಬ್ಬರು ನಿಮ್ಮ ಖಾತೆಯನ್ನು ಉಪಯೋಗಿಸುತ್ತಿದ್ದಾರೆಯೆ ಎಂದು ಪರಿಶೀಲಿಸಲಬೇಕು. ನಿಮ್ಮ ಇನ್​ಸ್ಟಾಗ್ರಾಮ್ ಖಾತೆಯು ಅಪರಿಚಿತ ಸಾಧನದಲ್ಲಿ ರನ್ ಆಗುತ್ತಿದ್ದರೆ, ತಕ್ಷಣವೇ ಅದನ್ನು ಲಾಗ್ ಔಟ್ ಮಾಡಬೇಕು.

Tech Tips: ನಿಮ್ಮ ಇನ್​ಸ್ಟಾಗ್ರಾಮ್ ಖಾತೆಯನ್ನು ಬೇರೆಯವರು ಬಳಸುತ್ತಿದ್ದಾರಾ?: ಈ ಟ್ರಿಕ್ ಮೂಲಕ ಕಂಡುಹಿಡಿಯಿರಿ
Instagram
Follow us
Vinay Bhat
|

Updated on:Feb 12, 2024 | 10:53 AM

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಖಾತೆ ಹ್ಯಾಕ್ ಆಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇದರಲ್ಲಿ ಇನ್​ಸ್ಟಾಗ್ರಾಮ್ (Instagram) ಖಾತೆಗಳನ್ನು ಹ್ಯಾಕ್ ಮಾಡುವುದು ಕೂಡ ಕಂಡು ಬರುತ್ತಿದೆ. ಮೆಟಾ ಈ ಬಗ್ಗೆ ಮೇಲ್ ಮಾಡಿ ಬಳಕೆದಾರರನ್ನು ಎಚ್ಚರಿಸುತ್ತಲೇ ಇರುತ್ತದೆ. ಒಂದುವೇಳೆ ಖಾತೆ ಹ್ಯಾಕ್ ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಮರುಪಡೆಯುವುದು ಸುಲಭದ ಕೆಲಸವಲ್ಲ. ಇದು ನಿಮಗೆ ಸಂಭವಿಸುವುದನ್ನು ತಡೆಯಲು, ನಿಮ್ಮ ಖಾತೆಯು ಎಲ್ಲೆಲ್ಲಿ ಲಾಗ್ ಇನ್ ಆಗಿದೆ ಎಂಬುದನ್ನು ತಿಳಿಯುವುದು ಮುಖ್ಯ.

ನಿಮ್ಮ ಇನ್​ಸ್ಟಾಗ್ರಾಮ್ ಖಾತೆಯು ಅಪರಿಚಿತ ಸಾಧನದಲ್ಲಿ ರನ್ ಆಗುತ್ತಿದ್ದರೆ, ತಕ್ಷಣವೇ ಅದನ್ನು ಲಾಗ್ ಔಟ್ ಮಾಡಬೇಕು. ಇದಕ್ಕಾಗಿ ನೀವು ನಿಮ್ಮ ಖಾತೆಯಲ್ಲಿ ಕೆಲವು ಸೆಟ್ಟಿಂಗ್‌ಗಳನ್ನು ಸಹ ಬದಲಾಯಿಸಬೇಕಾಗುತ್ತದೆ.

10,000 ರೂ. ಒಳಗಿನ ಸೂಪರ್ ಸ್ಮಾರ್ಟ್​ಫೋನ್ಸ್: ಈ ಪ್ರೇಮಿಗಳ ದಿನಕ್ಕೆ ಇದೇ ಬೆಸ್ಟ್ ಗಿಫ್ಟ್

ಮೊದಲಿಗೆ ನೀವು ನಿಮ್ಮ ಇನ್​ಸ್ಟಾಗ್ರಾಮ್ ಖಾತೆಗೆ ಹೋಗಿ ಮತ್ತು “ಸೆಟ್ಟಿಂಗ್‌ಗಳು” ಆಯ್ಕೆಯನ್ನು ಕ್ಲಿಕ್ ಮಾಡಿ. ಇದರ ನಂತರ “ಭದ್ರತೆ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು “ಲಾಗಿನ್ ಚಟುವಟಿಕೆ” ಮೇಲೆ ಕ್ಲಿಕ್ ಮಾಡಿ. ನಿಮ್ಮ ಖಾತೆಗೆ ಲಾಗ್ ಇನ್ ಆಗಿರುವ ಎಲ್ಲಾ ಸಾಧನಗಳು ಮತ್ತು ಸ್ಥಳಗಳ ಪಟ್ಟಿಯನ್ನು ಇದು ನಿಮಗೆ ತೋರಿಸುತ್ತದೆ. ನೀವು ಇನ್​ಸ್ಟಾಗ್ರಾಮ್ ಅನ್ನು ಬಳಸದ ಸಾಧನ ಅಥವಾ ಸ್ಥಳವನ್ನು ಗಮನಿಸಿದರೆ, ನಿಮ್ಮ ಅನುಮತಿಯಿಲ್ಲದೆ ಬೇರೊಬ್ಬರು ನಿಮ್ಮ ಖಾತೆಯನ್ನು ಉಪಯೋಗಿಸುತ್ತಿರುವ ಸಾಧ್ಯತೆಯಿದೆ.

ನಿಮ್ಮ ಅನುಮತಿಯಿಲ್ಲದೆ ಬೇರೊಬ್ಬರು ನಿಮ್ಮ ಖಾತೆಯನ್ನು ಉಪಯೋಗಿಸುತ್ತಿರುವ ಅನುಮಾನ ನಿಮಗೆ ಇದ್ದರೆ ಪಾಸ್‌ವರ್ಡ್ ಅನ್ನು ಬದಲಾಯಿಸುವ ಮೂಲಕ ಹೆಚ್ಚುವರಿ ಭದ್ರತೆಯನ್ನು ಪಡೆದುಕೊಳ್ಳಬಹುದು. ಹೀಗೆ ಮಾಡುವುದರಿಂದ ಯಾರಾದರೂ ನಿಮ್ಮ ಖಾತೆಯನ್ನು ಹ್ಯಾಕ್ ಮಾಡಲು ಪ್ರಯತ್ನಿಸಿದಾಗ, ಪಾಸ್‌ವರ್ಡ್ ಇಲ್ಲದೆ ಲಾಗಿನ್ ಮಾಡಲು ಸಾಧ್ಯವಾಗುವುದಿಲ್ಲ.

ನಿಮ್ಮ ಲವ್ವರ್ ಫೋನ್ ದಿನವಿಡೀ ಬ್ಯುಸಿ ಬರುತ್ತಾ?: ಕಾಲ್ ಹಿಸ್ಟರಿ ತೆಗೆಯುವ ಟ್ರಿಕ್ ಇಲ್ಲಿದೆ ನೋಡಿ

ಇನ್ನು ಟು-ಸ್ಟೆಪ್ ವೆರಿಫಿಕೇಷನ್ ಸಕ್ರಿಯಗೊಳಿಸುವ ಮೂಲಕ ನಿಮ್ಮ ಖಾತೆಯನ್ನು ಸುರಕ್ಷಿತವಾಗಿಸಬಹುದು. ಹೀಗೆ ಮಾಡಿದರೆ ನಿಮ್ಮ ಖಾತೆಗೆ ಲಾಗ್ ಇನ್ ಆಗಲು ಪ್ರಯತ್ನಿಸಿದಾಗ ಫೋನ್‌ಗೆ OTP ಬರುತ್ತದೆ. ಅದನ್ನು ನಮೋದಿಸಿದರೆ ಮಾತ್ರ ಮುಂದುವರೆಯಲು ಸಾಧ್ಯವಾಗುತ್ತಿದೆ.

ಅಂತೆಯೆ ನಿಮ್ಮ ಖಾತೆಗೆ ನೀವು ಬಲವಾದ ಪಾಸ್‌ವರ್ಡ್ ಅನ್ನು ರಚಿಸಬೇಕು. ಖಾತೆಯನ್ನು ಸುರಕ್ಷಿತವಾಗಿಡುವ ಮಾರ್ಗವೆಂದರೆ ಅದಕ್ಕೆ ಬಲವಾದ ಪಾಸ್‌ವರ್ಡ್ ಹಾಕುವುದು. ಇದು ಕನಿಷ್ಠ 12 ಅಕ್ಷರಗಳನ್ನು ಒಳಗೊಂಡಿರಬೇಕು. ಅಕ್ಷರಗಳು, ಸಂಖ್ಯೆಗಳು ಮತ್ತು ವಿಶೇಷ ಅಕ್ಷರಗಳಿಂದ ಕೂಡಿರಬೇಕು.

ನಿಮ್ಮ ಖಾತೆಯಲ್ಲಿನ ಯಾವುದೇ ಬದಲಾವಣೆಗಳನ್ನು ಪರಿಶೀಲಿಸಿ, ಉದಾಹರಣೆಗೆ ನಿಮ್ಮ ಪ್ರೊಫೈಲ್ ಚಿತ್ರ ಅಥವಾ ಬಯೋ ಬದಲಾವಣೆಗಳು. ನೀವು ಮಾಡದ ಬದಲಾವಣೆಯನ್ನು ಕಂಡಿರೆ, ನಿಮ್ಮ ಖಾತೆಯನ್ನು ಬೇರೊಬ್ಬರು ನಿಯಂತ್ರಿಸುತ್ತಿದ್ದಾರೆ ಎಂದರ್ಥ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 am, Mon, 12 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್