AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಆನ್​ಲೈನ್​ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಅರ್ಜಿ ಸಲ್ಲಿಸಿ: ಮನೆಗೇ ಬರುತ್ತೆ ಕಾರ್ಡ್

Voter ID Online: ಭಾರತೀಯ ಚುನಾವಣೆಗಳಲ್ಲಿ ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಮುಖ್ಯ. ಇದಿಲ್ಲದೆ ಮತದಾನ ಮಾಡಲು ಸಾಧ್ಯವಿಲ್ಲ. ಎಲ್ಲಾದರು ನಿಮ್ಮ ಗುರುತಿನ ಚೀಟಿ ಕಳೆದುಹೋದರೆ ಅಥವಾ ಹಾನಿಗೊಳಗಾದರೆ, ಫಾರ್ಮ್ 8 ಅನ್ನು ಭರ್ತಿ ಮಾಡುವ ಮೂಲಕ ಮತದಾರರ ಗುರುತಿನ ಚೀಟಿಯನ್ನು ಮನೆಯಲ್ಲೇ ಕುಳಿತು ಪಡೆಯಬಹುದು.

Tech Tips: ಆನ್​ಲೈನ್​ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಅರ್ಜಿ ಸಲ್ಲಿಸಿ: ಮನೆಗೇ ಬರುತ್ತೆ ಕಾರ್ಡ್
Voter ID Online
Vinay Bhat
|

Updated on:Feb 19, 2024 | 1:12 PM

Share

ಲೋಕಸಭೆ ಚುನಾವಣೆ (Lok Sabha Election 2024) ದಿನಾಂಕವನ್ನು ಇನ್ನೇನು ಕೆಲವೇ ದಿನಗಳಲ್ಲಿ ಘೋಷಿಸಲಾಗುತ್ತದೆ. ಚುನಾವಣಾ ಆಯೋಗವು ಮತದಾನಕ್ಕೆ ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸಿದೆ. ಇದು ಇಲ್ಲದಿದ್ದರೆ ಚುನಾವಣೆಯಲ್ಲಿ ಮತ ಹಾಕುವಂತಿಲ್ಲ. ಈಗ ನಿಮ್ಮಲ್ಲಿ ಮತದಾರರ ಗುರುತಿನ ಚೀಟಿ ಇಲ್ಲ ಎಂದಾದರೆ ಸರ್ಕಾರಿ ಕಚೇರಿಯ ಹೊಸ್ತಿಲಲ್ಲಿ ಅಲೆಯುವ ಅಗತ್ಯವಿಲ್ಲ. ಮತದಾರರ ಕಾರ್ಡ್ ಬೇಕಾಗಿದ್ದರೆ ಅಥವಾ ತಿದ್ದುಪಡಿ ಮಾಡಬೇಕಿದ್ದರೆ ಆನ್‌ಲೈನ್​ನಲ್ಲೇ ಸುಲಭವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಇದಕ್ಕಾಗಿ ನೀವು ಗೂಗಲ್ ಪ್ಲೇ ಸ್ಟೋರ್‌ನಿಂದ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕಷ್ಟೆ. ಇದರಲ್ಲಿ ನಿಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ಮನೆಯ ವಿಳಾಸಕ್ಕೆ ಹೊಸ ಮತದಾರರ ಚೀಟಿ ಬರುತ್ತದೆ.

ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಆನ್‌ಲೈನ್ ಮತದಾರರ ಗುರುತಿನ ಚೀಟಿಯನ್ನು ರಚಿಸಲು ಆಂಡ್ರಾಯ್ಡ್ ಮತ್ತು ಐಒಎಸ್ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪ್ ಸ್ಟೋರ್​ನಿಂದ ಭಾರತದ ಚುನಾವಣಾ ಆಯೋಗದ Voter Helpline ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ಈ ಅಪ್ಲಿಕೇಶನ್ ಸಹಾಯದಿಂದ, ನೀವು ಆನ್‌ಲೈನ್ ಮತದಾರರ ಗುರುತಿನ ಚೀಟಿ ಮತ್ತು ತಿದ್ದುಪಡಿಯನ್ನು ಮಾಡಬಹುದು.

ಲ್ಯಾಪ್​ಟಾಪ್ ಇರುವವರು ಕೂಡಲೇ ಈ ತಪ್ಪು ಮಾಡುವುದನ್ನು ನಿಲ್ಲಿಸಿ: ಇಲ್ಲದಿದ್ದರೆ ಅಪಾಯ ಖಚಿತ

ಮೊದಲು ಮೊಬೈಲ್‌ನಲ್ಲಿ ಮತದಾರರ ಸಹಾಯವಾಣಿ ಆ್ಯಪ್‌ ಇನ್​ಸ್ಟಾಲ್ ಮಾಡಿ. ನಂತರ ಅಪ್ಲಿಕೇಶನ್ ತೆರೆಯಿರಿ. ಮತದಾರರ ನೋಂದಣಿ ಮೇಲೆ ಕ್ಲಿಕ್ ಮಾಡಿ. ಬಳಿಕ ಮತದಾರರ ನೋಂದಣಿಗೆ ಅಗತ್ಯವಿರುವ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅನ್ನು ಭರ್ತಿ ಮಾಡಿ. ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿದ ನಂತರ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ಉಳಿದ ಪ್ರಕ್ರಿಯೆಯನ್ನು BLO ಪರಿಶೀಲಿಸುತ್ತದೆ. ಬಳಿಕ ನಿಮ್ಮ ಮನೆಗೇ ಹೊಸ ಮತದಾರರ ಗುರುತಿನ ಚೀಟಿ ಬರುತ್ತದೆ.

ಬಿಡುಗಡೆಗೆ ಸಜ್ಜಾದ ಒಪ್ಪೋದ ಹೊಸ F25 ಸ್ಮಾರ್ಟ್​ಫೋನ್: ಹೇಗಿದೆ?, ಬೆಲೆ ಎಷ್ಟು?

ಹಳೆಯ ವೋಟಾರ್ ಐಡಿಯನ್ನು ಹೇಗೆ ತಿದ್ದುಪಡಿ ಮಾಡುವುದು?

ಮತದಾರರ ಸಹಾಯವಾಣಿ ಆ್ಯಪ್‌ ಮೂಲಕ ಹಳೆಯ ಮತದಾರರ ಗುರುತಿನ ಚೀಟಿಯನ್ನು ಕೂಡ ಸರಿಪಡಿಸಬಹುದು. ಅದಕ್ಕಾಗಿ, ಈ ಅಪ್ಲಿಕೇಶನ್‌ನ ಕೊನೆಯಲ್ಲಿ ದೂರು ಮತ್ತು ನೋಂದಣಿ ಆಯ್ಕೆಯು ಕಾಣಿಸಿಕೊಳ್ಳುತ್ತದೆ. ನೀವು ಈ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಅದರಲ್ಲಿ ಸರಿಯಾದ ಮಾಹಿತಿಯನ್ನು ಸಲ್ಲಿಸಬೇಕು. ಈ ಮಾಹಿತಿಯನ್ನು ಸಲ್ಲಿಸಿದ ನಂತರ, ಕೆಲವೇ ದಿನಗಳಲ್ಲಿ ನಿಮ್ಮ ಮನೆಗೆ ಹೊಸ ಮತದಾರರ ಗುರುತಿನ ಚೀಟಿಯನ್ನು ನೀವು ಸ್ವೀಕರಿಸುತ್ತೀರಿ. ಆ್ಯಪ್ ಇನ್‌ಸ್ಟಾಲ್ ಮಾಡುವಾಗ ಮೊದಲು ಅದು ಚುನಾವಣಾ ಆಯೋಗದ ಅಧಿಕೃತ ಆ್ಯಪ್ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 19 February 24

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ