Tech Tips: ಎರಡು ಮೊಬೈಲ್​ಗಳಲ್ಲಿ ಒಂದೇ ನಂಬರ್​ನ ವಾಟ್ಸ್​ಆ್ಯಪ್ ಖಾತೆ ಬಳಸಲು ಸಾಧ್ಯವೇ?

WhatsApp Tricks: ಫೇಸ್​ಬುಕ್, ಇನ್​ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್​ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್​ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೀಗ ವರದಿಯ ಪ್ರಕಾರ ವಾಟ್ಸ್​ಆ್ಯಪ್ ಕಂಪ್ಯಾನಿಯನ್‌ ಮೋಡ್‌ ಆಯ್ಕೆ ನೀಡಲಾಗಿದೆ.

Tech Tips: ಎರಡು ಮೊಬೈಲ್​ಗಳಲ್ಲಿ ಒಂದೇ ನಂಬರ್​ನ ವಾಟ್ಸ್​ಆ್ಯಪ್ ಖಾತೆ ಬಳಸಲು ಸಾಧ್ಯವೇ?
ವಾಟ್ಸ್​ಆ್ಯಪ್
Follow us
TV9 Web
| Updated By: Vinay Bhat

Updated on:Jan 24, 2023 | 9:17 AM

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷ ಸಾಕಷ್ಟು ಬೆಳವಣಿಗೆ ಕಂಡಿದೆ. ಅತಿ ಹೆಚ್ಚು ನೂತನ ಫೀಚರ್​ಗಳನ್ನು 2022 ರಲ್ಲಿ ಬಿಡುಗಡೆ ಮಾಡಿದೆ. ಈ ವರ್ಷ ಕೂಡ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಅನೇಕ ಅಪ್ಡೇಟ್ ನೀಡುವಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​​ಆ್ಯಪ್ (WhatsApp) ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಆದರೆ, ಫೇಸ್​ಬುಕ್, ಇನ್​ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್​ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್​ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೀಗ ವರದಿಯ ಪ್ರಕಾರ ವಾಟ್ಸ್​ಆ್ಯಪ್ ಕಂಪ್ಯಾನಿಯನ್‌ ಮೋಡ್‌ (Companion Mode) ಆಯ್ಕೆ ನೀಡಲಾಗಿದೆ.

ವಾಟ್ಸ್​ಆ್ಯಪ್​ನ ಈ ಹೊಸ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್‌ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್​ಆ್ಯಪ್​​ ಬಳಸಬಹುದು. ಅಂದರೆ ನಿಮ್ಮ ವಾಟ್ಸ್​ಆ್ಯಪ್​​ ಆಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್‌ ಸ್ಕ್ಯಾನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್‌ ಲಿಂಕ್‌ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.

ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್‌ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಯನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ ಐಒಎಸ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಇದನ್ನೂ ಓದಿ
Image
iPhone 15 Series: ಐಫೋನ್ 15 ಸರಣಿಯ ಬಗ್ಗೆ ಹೊರಬಿತ್ತು ಮತ್ತೊಂದು ವಿಚಾರ: ಏನು ನೋಡಿ
Image
Best Smartphones: 15,000 ರೂ. ಒಳಗೆ ಸಿಗುತ್ತಿರುವ 50MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ
Image
WhatsApp: ವಾಟ್ಸ್​ಆ್ಯಪ್​ನಲ್ಲಿ ಬಹುಬೇಡಿಕೆಯ ಫೀಚರ್: ಇನ್ಮುಂದೆ ಫೋಟೋ ಕಳುಹಿಸಲು ಟೆನ್ಶನ್ ಬೇಡ
Image
Xiaomi 13: ಭಾರತಕ್ಕೆ ಬರುತ್ತಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಶವೋಮಿ 13 ಸರಣಿ: ಇದರ ಫೀಚರ್ಸ್ ಕೇಳಿದ್ರೆ ದಂಗಾಗ್ತೀರ

BSNL: ಬರೋಬ್ಬರಿ 9 ಒಟಿಟಿ ಸೌಲಭ್ಯ: ಬಿಎಸ್​ಎನ್​ಎಲ್ ಹೊಸ ಪ್ಲಾನ್ ಕಂಡು ದಂಗಾದ ಜಿಯೋ, ಏರ್ಟೆಲ್

ಹೈ-ಕ್ವಾಲಿಟಿ ಫೋಟೋ ಕಳುಹಿಸಿ:

ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫೋಟೋ ಸೆಂಡ್‌ ಮಾಡುವಾಗ ವಿಶೇಷವಾದ ಆಯ್ಕೆಯೊಂದು ಕಾಣಿಸಲಿದ್ದು, ಇದರ ಮೂಲಕ ಮೂಲ ಗುಣಮಟ್ಟದಲ್ಲೇ ಆ ಫೋಟೋ ಸೆಂಡ್ ಆಗಲಿದೆ. ವಾಟ್ಸ್​ಆ್ಯಪ್​ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿ ಸಿಗುವುದಿಲ್ಲ. ಇದಕ್ಕಾಗಿ ವಾಟ್ಸ್​ಆ್ಯಪ್​ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲ ಗುಣಮಟ್ಟದ ಫೋಟೋಗಳನ್ನು ಸೆಂಡ್‌ ಮಾಡಲು ಅನುಮತಿಸುವ ಹೊಸ ಫೀಚರ್ಸ್‌ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ.

ವಾಟ್ಸ್​ಆ್ಯಪ್​ಪರಿಚಯಿಸಲಿರುವ ಹೊಸ ಫೀಚರ್ಸ್‌ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್‌ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು. ಇದರಿಂದ ನಿಮ್ಮ ಫೋಟೋದ ಒರಿಜಿನಲ್ ಕ್ವಾಲಿಟಿಯಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ಸೆಂಡ್‌ ಮಾಡುತ್ತದೆ. ಸದ್ಯ ಆಂಡ್ರಾಯ್ಡ್‌ ಬೇಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿದ್ದು ಆದಷ್ಟು ಬೇಗ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 am, Tue, 24 January 23

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ