ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಕಳೆದ ವರ್ಷ ಸಾಕಷ್ಟು ಬೆಳವಣಿಗೆ ಕಂಡಿದೆ. ಅತಿ ಹೆಚ್ಚು ನೂತನ ಫೀಚರ್ಗಳನ್ನು 2022 ರಲ್ಲಿ ಬಿಡುಗಡೆ ಮಾಡಿದೆ. ಈ ವರ್ಷ ಕೂಡ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಅನೇಕ ಅಪ್ಡೇಟ್ ನೀಡುವಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್ಆ್ಯಪ್ (WhatsApp) ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಆದರೆ, ಫೇಸ್ಬುಕ್, ಇನ್ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೀಗ ವರದಿಯ ಪ್ರಕಾರ ವಾಟ್ಸ್ಆ್ಯಪ್ ಕಂಪ್ಯಾನಿಯನ್ ಮೋಡ್ (Companion Mode) ಆಯ್ಕೆ ನೀಡಲಾಗಿದೆ.
ವಾಟ್ಸ್ಆ್ಯಪ್ನ ಈ ಹೊಸ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್ಆ್ಯಪ್ ಬಳಸಬಹುದು. ಅಂದರೆ ನಿಮ್ಮ ವಾಟ್ಸ್ಆ್ಯಪ್ ಆಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್ ಸ್ಕ್ಯಾನ್ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್ ಲಿಂಕ್ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.
ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್ ಟು ಎಂಡ್ ಎನ್‌ಕ್ರಿಪ್ಯನ್ ಮೂಲಕ ಕಾರ್ಯನಿರ್ವಹಿಸಲಿದೆ. ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ ಐಒಎಸ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
BSNL: ಬರೋಬ್ಬರಿ 9 ಒಟಿಟಿ ಸೌಲಭ್ಯ: ಬಿಎಸ್ಎನ್ಎಲ್ ಹೊಸ ಪ್ಲಾನ್ ಕಂಡು ದಂಗಾದ ಜಿಯೋ, ಏರ್ಟೆಲ್
ಸದ್ಯದಲ್ಲೇ ವಾಟ್ಸ್ಆ್ಯಪ್ನಲ್ಲಿ ಫೋಟೋ ಸೆಂಡ್ ಮಾಡುವಾಗ ವಿಶೇಷವಾದ ಆಯ್ಕೆಯೊಂದು ಕಾಣಿಸಲಿದ್ದು, ಇದರ ಮೂಲಕ ಮೂಲ ಗುಣಮಟ್ಟದಲ್ಲೇ ಆ ಫೋಟೋ ಸೆಂಡ್ ಆಗಲಿದೆ. ವಾಟ್ಸ್ಆ್ಯಪ್ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿ ಸಿಗುವುದಿಲ್ಲ. ಇದಕ್ಕಾಗಿ ವಾಟ್ಸ್ಆ್ಯಪ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲ ಗುಣಮಟ್ಟದ ಫೋಟೋಗಳನ್ನು ಸೆಂಡ್ ಮಾಡಲು ಅನುಮತಿಸುವ ಹೊಸ ಫೀಚರ್ಸ್ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ.
ವಾಟ್ಸ್ಆ್ಯಪ್ಪರಿಚಯಿಸಲಿರುವ ಹೊಸ ಫೀಚರ್ಸ್ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು. ಇದರಿಂದ ನಿಮ್ಮ ಫೋಟೋದ ಒರಿಜಿನಲ್ ಕ್ವಾಲಿಟಿಯಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ಸೆಂಡ್ ಮಾಡುತ್ತದೆ. ಸದ್ಯ ಆಂಡ್ರಾಯ್ಡ್ ಬೇಟಾ ವರ್ಷನ್ನಲ್ಲಿ ಈ ಆಯ್ಕೆ ಕಾಣಿಸಿದ್ದು ಆದಷ್ಟು ಬೇಗ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:06 am, Tue, 24 January 23