AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಸ್ಮಾರ್ಟ್‌ಫೋನ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುತ್ತೀರಾ? ಈಗಲೇ ನಿಲ್ಲಿಸಿ

Should You Charge Your Phone To 100%?: ನೀವು ನಿಮ್ಮ ಸ್ಮಾರ್ಟ್​ಫೋನ್ ಅನ್ನು ಶೇ. 100 ರಷ್ಟು ಚಾರ್ಜ್ ಮಾಡುವುದರಿಂದ ಮುಂದೆ ದೊಡ್ಡ ಸಮಸ್ಯೆಗೆ ಒಳಗಾಗಬಹುದು. ಇದರಿಂದ ಮೊಬೈಲ್ ಬೇಗನೆ ಹಾಳಾಗುತ್ತದೆ. ಹಾಗಾದರೆ ಸ್ಮಾರ್ಟ್​ಫೋನನ್ನು ಎಷ್ಟು ಚಾರ್ಜ್ ಮಾಡಬೇಕು?. ಸ್ಮಾರ್ಟ್‌ಫೋನ್ ಚಾರ್ಜಿಂಗ್‌ಗಾಗಿ ಯಾವಾಗಲೂ 80-20 ಸೂತ್ರವನ್ನು ಬಳಸಿdರೆ ಉತ್ತಮ.

ನೀವು ಸ್ಮಾರ್ಟ್‌ಫೋನ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುತ್ತೀರಾ? ಈಗಲೇ ನಿಲ್ಲಿಸಿ
Mobile Charge
Follow us
Vinay Bhat
|

Updated on: Sep 10, 2023 | 12:28 PM

ಪ್ರತಿಯೊಬ್ಬರ ಜೀವನದಲ್ಲಿ ಸ್ಮಾರ್ಟ್‌ಫೋನ್ (Smartphone) ಒಂದು ವಿಶೇಷವಾದ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರಯಾಣದಿಂದ ಹಿಡಿದು ಪ್ರತಿಯೊಂದು ಖರ್ಚಿಗೂ ನಾವು ಸ್ಮಾರ್ಟ್‌ಫೋನ್‌ಗಳನ್ನು ಬಳಸುತ್ತೇವೆ. ಪ್ರಯಾಣದ ವೇಳೆ ಟಿಕೆಟ್ ಖರೀದಿಸುವುದಾಗಲಿ ಅಥವಾ ಯಾವುದೇ ವಸ್ತುವಿನ ಬಿಲ್ ಪಾವತಿಗಾಗಲಿ ಮೊಬೈಲ್ ಮೂಲಕವೇ ಎಲ್ಲ ವಹಿವಾಟು ನಡೆಸುತ್ತೇವೆ. ಆದ್ದರಿಂದ, ಮೊಬೈಲ್ ಫೋನ್‌ಗಳಲ್ಲಿ ಚಾರ್ಜಿಂಗ್ ಒಂದು ಪ್ರಮುಖ ಅಂಶವಾಗಿದೆ.

ಈಗಂತು ಮನೆಯಿಂದ ಹೊರಡುವಾಗ ಪರ್ಸ್ ಇಲ್ಲದಿದ್ದರೂ ತೊಂದರೆಯಿಲ್ಲ, ಮೊಬೈಲ್ ಫೋನ್‌ನಲ್ಲಿ 100 ಪ್ರತಿಶತ ಚಾರ್ಜಿಂಗ್ ಇದ್ದರೆ ಸಾಕು ಎಂದು ಅನೇಕರು ಭಾವಿಸುತ್ತಾರೆ. ನೀವೂ ಸಹ ನಿಮ್ಮ ಸ್ಮಾರ್ಟ್‌ಫೋನ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುತ್ತಿದ್ದರೆ, ಈ ಸುದ್ದಿ ನಿಮಗಾಗಿ.

ಬರೋಬ್ಬರಿ 120W ಹೈಪರ್‌ ಚಾರ್ಜರ್ ಇರುವ ಶವೋಮಿ 12 ಪ್ರೊ ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ

ಇದನ್ನೂ ಓದಿ
Image
ಜಿಯೋ 7ನೇ ವಾರ್ಷಿಕೋತ್ಸವ: ಪ್ರಿಪೇಯ್ಡ್ ಬಳಕೆದಾರರಿಗೆ ಧಮಾಕ ಆಫರ್
Image
ಬಿಡುಗಡೆಗೂ ಮುನ್ನ ಧೂಳೆಬ್ಬಿಸುತ್ತಿದೆ ನೋಕಿಯಾ G42 5G ಸ್ಮಾರ್ಟ್​ಫೋನ್
Image
ಒಂದು ವಾಟ್ಸ್​ಆ್ಯಪ್ ಖಾತೆಯನ್ನು ಎಷ್ಟು ​ಫೋನ್​ಗಳಲ್ಲಿ ಉಪಯೋಗಿಸಬಹುದು?
Image
ನಥಿಂಗ್ ಫೋನ್ 2 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್

ನೀವು ನಿಮ್ಮ ಸ್ಮಾರ್ಟ್​ಫೋನ್ ಅನ್ನು ಶೇ. 100 ರಷ್ಟು ಚಾರ್ಜ್ ಮಾಡುವುದರಿಂದ ಮುಂದೆ ದೊಡ್ಡ ಸಮಸ್ಯೆಗೆ ಒಳಗಾಗಬಹುದು. ಇದರಿಂದ ಮೊಬೈಲ್ ಬೇಗನೆ ಹಾಳಾಗುತ್ತದೆ. ಹಾಗಾದರೆ ಸ್ಮಾರ್ಟ್​ಫೋನನ್ನು ಎಷ್ಟು ಚಾರ್ಜ್ ಮಾಡಬೇಕು?. ಸ್ಮಾರ್ಟ್‌ಫೋನ್ ಚಾರ್ಜಿಂಗ್‌ಗಾಗಿ ಯಾವಾಗಲೂ 80-20 ಸೂತ್ರವನ್ನು ಬಳಸಿದರೆ ಉತ್ತಮ. ಏಕೆಂದರೆ, ಈ ಸೂತ್ರವು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಅಲ್ಲದೆ, ಹೀಗೆ ಮಾಡುವುದರಿಂದ ನಿಮ್ಮ ಫೋನ್ ಯಾವುದೇ ಹಾನಿಯಾಗದೆ ಸುರಕ್ಷಿತವಾಗಿರುತ್ತದೆ.

80-20 ಸೂತ್ರ ಯಾವುದು?:

80-20 ಸೂತ್ರ ಯಾವುದು ಎಂದರೆ, ಸ್ಮಾರ್ಟ್‌ಫೋನ್‌ನಲ್ಲಿನ ಚಾರ್ಜಿಂಗ್ ಶೇಕಡಾ 20 ಕ್ಕೆ ಇಳಿಯಲು ಬಿಡಬಾರದು. ಅಂದರೆ, 20 ಪ್ರತಿಶತ ಬ್ಯಾಟರಿ ಉಳಿದಿದ್ದರೆ, ಸ್ಮಾರ್ಟ್‌ಫೋನ್ ಅನ್ನು ಕೂಡಲೆ ಚಾರ್ಜಿಂಗ್‌ನಲ್ಲಿ ಇರಿಸಿ, ಇದು ಬ್ಯಾಟರಿಯ ಮೇಲೆ ಒತ್ತಡವನ್ನು ಹಾಕುವುದಿಲ್ಲ ಮತ್ತು ಬ್ಯಾಟರಿ ಅವಧಿಯನ್ನು ಹೆಚ್ಚಿಸುತ್ತದೆ.

ಮೊಬೈಲ್ ಫೋನ್ ಅನ್ನು ಎಷ್ಟು ಚಾರ್ಜ್ ಮಾಡಬೇಕು?:

ಮೊಬೈಲನ್ನು ಚಾರ್ಜ್ ಮಾಡುವಾಗ ಗಮನಿಸಬೇಕಾದ ಅಂಶವೆಂದರೆ, 100 ಪರ್ಸೆಂಟ್ ಚಾರ್ಜ್ ಆಗುವ ವರೆಗೆ ಬಿಡಬಾರದು. ಮೊಬೈಲ್ ಅನ್ನು 100 ಪ್ರತಿಶತದಷ್ಟು ಚಾರ್ಜ್ ಮಾಡುವುದರಿಂದ ಸ್ಮಾರ್ಟ್‌ಫೋನ್ ಬಿಸಿಯಾಗುತ್ತದೆ ಮತ್ತು ಬ್ಯಾಟರಿಯ ಮೇಲೆ ಒತ್ತಡ ಉಂಟಾಗುತ್ತದೆ, ಇದು ಬ್ಯಾಟರಿ ಸ್ಫೋಟಗೊಳ್ಳಲು ಕಾರಣವಾಗಬಹುದು. ಅಷ್ಟೇ ಅಲ್ಲ, ಬ್ಯಾಟರಿ ಬಾಳಿಕೆ ಕಡಿಮೆಯಾಗುವ ಅಪಾಯವೂ ಇದೆ. ಆದ್ದರಿಂದ, ಸ್ಮಾರ್ಟ್​ಫೋನನ್ನು ಗರಿಷ್ಠ 80 ಪ್ರತಿಶತದಷ್ಟು ಚಾರ್ಜ್ ಮಾಡಿದರೆ ಉತ್ತಮ. ಹೀಗೆ ಮಾಡುವುದರಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್