Tech Tips: ವಾಟ್ಸ್ಆ್ಯಪ್ನಲ್ಲಿ ಡಿಲೀಟ್ ಆದ ಮೆಸೇಜ್ ನೋಡಲು ಈ ಸುಲಭ ಟ್ರಿಕ್ ಫಾಲೋ ಮಾಡಿ
WhatsApp Tricks: ತಪ್ಪಿ ಏನನ್ನಾದರು ಮೆಸೇಜ್ ಮಾಡಿದರೆ ಅದನ್ನು ಡಿಲೀಟ್ ಮಾಡುವಂತಹ ಆಯ್ಕೆ ವಾಟ್ಸ್ಆ್ಯಪ್ನಲ್ಲಿ ನೀಡಲಾಗಿದೆ. ಆದರೆ, ಆ ಡಿಲೀಟ್ ಆದ ಮೆಸೆಜ್ ಏನು ಎಂಬುದನ್ನು ನೋಡಲು ಸಾಧ್ಯವಿಲ್ಲ. ಇದಕ್ಕಾಗಿ ಥರ್ಡ್ ಪಾರ್ಟಿ ಆ್ಯಪ್ಗಳು ಹುಟ್ಟುಕೊಂಡಿವೆ.
ವಿಶ್ವದಲ್ಲಿ 2000 ಮಿಲಿಯನ್ಗೂ ಅಧಿಕ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆಯನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ (WhatsApp) ಈಗಾಗಲೇ ಅನೇಕ ಫೀಚರ್ಗಳನ್ನು ಪರಿಚಯಿಸಿ ಗ್ರಾಹಕರ ನೆಚ್ಚಿನ ಆ್ಯಪ್ ಎನಿಸಿಕೊಂಡಿದೆ. ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ಪರೀಕ್ಷಾ ಹಂತದಲ್ಲಿದೆ. ಆದರೆ ಬಳಕೆದಾರರಿಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಲು ವಾಟ್ಸ್ಆ್ಯಪ್ ಅನುವುಮಾಡಿಕೊಟ್ಟಿಲ್ಲ.
ಇದಕ್ಕಾಗಿಯೆ ಅನೇಕ ಥರ್ಡ್ ಪಾರ್ಟಿ ಆ್ಯಪ್ಗಳು ಹುಟ್ಟಿಕೊಂಡಿವೆ. ಅದು ಡಿಲೀಟ್ ಆದ ಮೆಸೇಜುಗಳನ್ನು ನೋಡುವುದರಿಂದ ಹಿಡಿದು ನಮ್ಮ ಡಿಪಿ ಯಾರೆಲ್ಲ ವೀಕ್ಷಿಸಿದ್ದಾರೆ ಎಂಬುದರ ವರೆಗೆ ಎನ್ನಬಹುದು.
ನಮ್ಮ ಸ್ನೇಹಿತರು ನಮಗೆ ತಪ್ಪಿ ಏನನ್ನಾದರು ಮೆಸೇಜ್ ಮಾಡಿದರೆ ಅದನ್ನು ಡಿಲೀಟ್ ಮಾಡುವಂತಹ ಆಯ್ಕೆ ವಾಟ್ಸ್ಆ್ಯಪ್ನಲ್ಲಿ ನೀಡಲಾಗಿದೆ. ಆದರೆ, ಆ ಡಿಲೀಟ್ ಆದ ಮೆಸೇಜ್ ಏನು ಎಂಬುದನ್ನು ನೋಡಲು ಸಾಧ್ಯವಿಲ್ಲ. ಇದಕ್ಕಾಗಿ ಥರ್ಡ್ ಪಾರ್ಟಿ ಆ್ಯಪ್ಗಳು ಹುಟ್ಟುಕೊಂಡಿವೆ.
ಗೂಗಲ್ ಪ್ಲೇ ಸ್ಟೋರ್ನಲ್ಲಿರುವ ಆ್ಯಪ್ಗಳ ಮೂಲಕ ವಾಟ್ಸ್ಆ್ಯಪ್ನಲ್ಲಿ ಡಿಲೀಟ್ ಆದ ಮೆಸೇಜ್ಗಳನ್ನು ನೋಡಬಹುದಾಗಿದೆ. WAMR, WhatsDeleted, Deleted Whatsappmessage ಥರ್ಡ್ ಪಾರ್ಟಿ ಆ್ಯಪ್ಗಳ ಮೂಲಕ ಡಿಲಿಟ್ ಆದ ಮೆಸೇಜ್ಗಳು ಏನು ಎಂಬುದನ್ನು ನೋಡಬಹುದು.
- ಗೂಗಲ್ ಪ್ಲೇ ಸ್ಟೋರ್ ನಿಂದ whatsapp Removed ಅಪ್ಲಿಕೇಶನನ್ನು ಡೌನ್ ಲೋಡ್ ಮಾಡಿ.
- ಅಪ್ಲಿಕೇಶನ್ನ ಸೆಟ್ಟಿಂಗ್ಸ್ ಅನ್ನು ಪೂರ್ಣಗೊಳಿಸಿ ಅನುಮತಿ ನೀಡಿ.
- ಬಳಿಕ ಯಾವ ಅಪ್ಲಿಕೇಶನ್ ನೋಟಿಫಿಕೇಶನ್ ಅನ್ನು ಸೇವ್ ಮಾಡಬೇಕೋ ಅದನ್ನು ಸೆಲೆಕ್ಟ್ ಮಾಡಿ. ಅಂದರೇ, ವಾಟ್ಸ್ಆ್ಯಪ್ ನೋಟಿಫಿಕೇಶನ್ ಸೇವ್ ಮಾಡಬೇಕು ಎಂದಿದ್ದರೇ, ವಾಟ್ಸ್ಆ್ಯಪ್ ಮೇಲೆ ಕ್ಲಿಕ್ ಮಾಡಿ.
- NEXT ಆಯ್ಕೆಯನ್ನು ಒತ್ತಿರಿ
- ಇದಾದ ನಂತರ ಹೊಸ ಸ್ಕ್ರೀನ್ ತೆರೆದುಕೊಳ್ಳುತ್ತದೆ. ಸೇವ್ ಒತ್ತಿರಿ. ಸೇವ್ ಫೈಲ್ ಗೆ ಅನುಮತಿಸಿ.
- ಇಷ್ಟಾದ ಮೇಲೆ ಅಪ್ಲಿಕೇಶನ್ ಬಳಸಲು ಯೋಗ್ಯವಾಗುತ್ತದೆ. ಹಾಗೆಯೇ ನಿಮ್ಮ ಡಿಲೀಟ್ ಆದ ಮೆಸೇಜ್ಗಳು ಹಾಗೂ ಡಾಕ್ಯುಮೆಂಟ್ಸ್ ಗಳು ಸಿಗುತ್ತದೆ.
ಆದರೆ, ನೀವು ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡುವ ಮುನ್ನ ಕೆಲವು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು. ಈ ಥರ್ಡ್ ಪಾರ್ಟಿ ಆ್ಯಪ್ ಅಷ್ಟೊಂದು ಸುರಕ್ಷಿತವಾಗಿದ್ದಲ್ಲ. ಯಾಕೆಂದರೆ ಇದು ನಿಮ್ಮ ಸ್ಮಾರ್ಟ್ಫೋನ್ನಲ್ಲಿರುವ ಡೇಟಾವನ್ನು ತನ್ನ ವಶಕ್ಕೆ ಪಡೆಯಬಹುದು. ಹೀಗಾಗಿ ಈ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡುವ ಮುನ್ನ ಎಚ್ಚರವಹಿಸಿ. ನಂಬಿಕೆಗೆ ಅರ್ಹವಾದ ಆ್ಯಪ್ ಸ್ಟೋರ್ಗಳಿಂದ ಮಾತ್ರ ಇದನ್ನ ಡೌನ್ಲೋಡ್ ಮಾಡಿ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ