AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಸ್ಮಾರ್ಟ್​ಫೋನ್ ಚಾರ್ಜ್​ಗೆ ಹಾಕಿದಾಗ ಬಿಸಿಯಾಗುತ್ತಾ?: ನಿರ್ಲಕ್ಷಿಸದಿರಿ

Tips and Tricks: ಈಗ ಬ್ಯಾಟರಿ ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ (Fast Charger) ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ.

Tech Tips: ನಿಮ್ಮ ಸ್ಮಾರ್ಟ್​ಫೋನ್ ಚಾರ್ಜ್​ಗೆ ಹಾಕಿದಾಗ ಬಿಸಿಯಾಗುತ್ತಾ?: ನಿರ್ಲಕ್ಷಿಸದಿರಿ
Smartphone Charging
Vinay Bhat
|

Updated on: Feb 26, 2023 | 6:58 AM

Share

ಮಾರುಕಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನುಗಳಿಗೆ (Smartphone) ಎಲ್ಲಿಲ್ಲದ ಬೇಡಿಕೆಯಿದೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ಸ್ ಹೊಂದಿರುವ ಮೊಬೈಲ್​ಗಳು ಭರ್ಜರಿ ಸೇಲ್ ಆಗುತ್ತಿವೆ. ಇವುಗಳಲ್ಲಿ ಕೆಲವು ಸ್ಮಾರ್ಟ್​ಫೋನ್ ಹೆಚ್ಚಿನ ರೇಡಿಯೇಷನ್ ಕೂಡ ಹೊಂದಿರುತ್ತವೆ. ಕೆಲವೊಮ್ಮೆ ಸ್ಮಾರ್ಟ್​ಫೋನ್ ಅಧಿಕ ಬಿಸಿ ಆಗಿ ಬಿಡುತ್ತದೆ. ಇದರಿಂದ ಮೊಬೈಲ್ ಹ್ಯಾಂಗ್ ಆಗುವುದು, ಸ್ವಿಚ್ ಆಫ್ ಆಗುವುದು ಕೊನೆಗೆ ಬ್ಲಾಸ್ಟ್ ಆಗುವಂತಹ ತೊಂದರೆಗಳು ಕೂಡ ಎದುರಾಗುತ್ತದೆ. ಅಲ್ಲದೆ ಈಗ ಬ್ಯಾಟರಿ (Battery) ವೇಗವಾಗ ಭರ್ತಿಯಾಗಲೆಂದು ಫಾಸ್ಟ್‌ ಚಾರ್ಜರ್‌ (Fast Charger) ಸೌಲಭ್ಯವನ್ನು ಕೂಡ ನೀಡುತ್ತಿವೆ. ಹೀಗೆ ಚಾರ್ಜ್​ಗೆ ಹಾಕುವಾಗ ಸ್ಮಾರ್ಟ್​ಫೋನ್ ಬಿಸಿಯಾಗುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಪರಿಹಾರ ಏನು ಎಂಬುದು ಇಲ್ಲಿದೆ.

ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಕಂಪನಿ ನೀಡಿರುವ ಚಾರ್ಜರ್ ನಿಂದಲೇ ಚಾರ್ಜ್ ಮಾಡಿ.

ಇಂದಿನ ದಿನದಲ್ಲಿ ಬಳಕೆದಾರರು ಮೊಬೈಲ್‌ಗಳು ಹಾಳಾಗದಿರಲಿ ಎಂದು ಫ್ಲಿಪ್ ಕವರ್ ಅನ್ನು ಅಳವಡಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಇದು ಫ್ಯಾಷನ್​​ಗಾಗಿಯೂ ಬಳಸುವವರಿದ್ದಾರೆ. ಹಾಗಾಗಿ ನಿಮ್ಮ ಮೊಬೈಲ್ ಚಾರ್ಜ್ ಮಾಡುವಾಗ ರಕ್ಷಣಾ ಕವಚಗಳನ್ನು ತೆಗೆಯುವುದು ಉತ್ತಮ. ಇದರಿಂದ ಬ್ಯಾಟರಿ ಬಾಳಿಕೆ ಮತ್ತು ವೇಗವಾಗಿ ಚಾರ್ಜ್ ಆಗಲಿದೆ. ಚಾರ್ಜಿಂಗ್ ಸಮಯದಲ್ಲಿ ಮೊಬೈಲ್ ಬಿಸಿಯಾಗುವುದು ತಪ್ಪಲಿದೆ.

ಇದನ್ನೂ ಓದಿ
Image
Realme GT 3: 10 ನಿಮಿಷಗಳ ಒಳಗೆ ಫುಲ್ ಚಾರ್ಜ್: ಮಾರುಕಟ್ಟೆಗೆ ಅಪ್ಪಳಿಸಲು ತಯಾರಾದ ರಿಯಲ್‌ ಮಿ GT 3 ಫೋನ್
Image
Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
Image
Tech Tips: ಸ್ಮಾರ್ಟ್​ಫೋನ್ ಡಿಸ್ ಪ್ಲೇ ಮೇಲೆ ಸ್ಕ್ರಾಚ್​ಗಳಿದ್ದರೆ ಸುಲಭವಾಗಿ ಹೇಗೆ ತೆಗೆಯುವುದು?
Image
Tech Tips: ಮೊಬೈಲ್ ಚಾರ್ಜರ್​ಗಳ ಬಣ್ಣ ಕಪ್ಪು ಮತ್ತು ಬಿಳಿ ಮಾತ್ರ ಇರುತ್ತದೆ ಯಾಕೆ ಗೊತ್ತೇ?; ಇಲ್ಲಿದೆ ಸೀಕ್ರೆಟ್

UPI LITE: ಪೇಟಿಎಂ ಆ್ಯಪ್ ಬಳಸುವವರಿಗೆ ಬಂಪರ್ ಸುದ್ದಿ: ಬಿಡುಗಡೆ ಆಗಿದೆ ಹೊಸ ಆ್ಯಪ್

ವೇಗವಾಗಿ ಮೊಬೈಲ್ ಚಾರ್ಜ್ ಆಗಬೇಕು ಎನ್ನುವ ಕಾರಣಕ್ಕೆ ಮಾರುಕಟ್ಟೆಯಲ್ಲಿ ದೊರೆಯಲಿರುವ ವೇಗ ಚಾರ್ಜರ್‌ಗಳನ್ನು ಬಳಸಿ ಮೊಬೈಲ್ ಚಾರ್ಜ್ ಮಾಡಿಕೊಳ್ಳಬೇಡಿ. ಇದರಿಂದ ಬ್ಯಾಟರಿ ಬೇಗ ಬಿಸಿಯಾಗಲಿದ್ದು, ಬ್ಯಾಟರಿ ಕ್ಷಮತೆ ಕೂಡ ಕಡಿಮೆಯಾಗುತ್ತದೆ.

ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ. ಈ ಅಭ್ಯಾಸ ರೂಡಿಸಿಕೊಳ್ಳಿ. ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ. ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಸ್ಮಾರ್ಟ್‌ಫೋನ್ ಉತ್ತಮ ಬಾಳಿಕೆ ಬರಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್