Tech Tips: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಇಲ್ಲಿದೆ ಟಿಪ್ಸ್

Make Electricity Bill Payment Online: ಅನೇಕರಿಗೆ ಆನ್​ಲೈನ್​ ಮೂಲಕ ಬಿಲ್​ ಪಾವತಿ ಮಾಡಬಹುದು ಎಂಬ ವಿಚಾರ ಗೊತ್ತಿಲ್ಲ. ಹಾಗಾದರೆ ಸುಲಭವಾಗಿ ಮತ್ತು ಕೆಲವೇ ನಿಮಿಷಗಳಲ್ಲಿ ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ ಎಂಬುದನ್ನು ನೋಡೋಣ.

Tech Tips: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಇಲ್ಲಿದೆ ಟಿಪ್ಸ್
Electricity Bill
Follow us
Vinay Bhat
|

Updated on: Mar 11, 2023 | 8:10 PM

ಕೋವಿಡ್ (COVID) ಆರಂಭಗೊಂಡ ನಂತರ ಜಗತ್ತಿನಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಬಳಕೆಗೆ ಬಂದಿವೆ. ಇಂದು ಜೇಬಿನಲ್ಲಿ ಹಣ ಇಟ್ಟುಕೊಳ್ಳುವವರು ಬೆರಳಣಿಕೆಯಷ್ಟು ಮಂದಿ ಮಾತ್ರ. ಬ್ಯಾಂಕಿಂಗ್ ಚಟುವಟಿಕೆ ಸೇರಿದಂತೆ ಹಲವಾರು ಕೆಲಸಗಳು ಅಪ್ಲಿಕೇಶನ್​ಗಳ ಮುಖಾಂತರವೇ ನಡೆಯುತ್ತಿದೆ. ಗ್ಯಾಸ್ ಬಿಲ್ ಕಟ್ಟಲು, ಮೊಬೈಲ್ ರೀಚಾರ್ಜ್ (Mobile Reacharg), ಡಿಟಿಎಚ್ ರೀಚಾರ್ಜ್ ಎಲ್ಲದಕ್ಕೂ ಪ್ರತ್ಯೇಕವಾದ ಆ್ಯಪ್ ಗಳಿವೆ. ಅದೇ ರೀತಿ ಮನೆಯ ವಿದ್ಯುತ್ ಬಿಲ್ (Electricity Bill) ಕಟ್ಟಲು ಕೂಡಾ ಹಲವು ಆ್ಯಪ್ ಗಳು ಲಭ್ಯವಿದೆ. ಅನೇಕರಿಗೆ ಆನ್​ಲೈನ್​ ಮೂಲಕ ಬಿಲ್​ ಪಾವತಿ ಮಾಡಬಹುದು ಎಂಬ ವಿಚಾರ ಗೊತ್ತಿಲ್ಲ. ಹಾಗಾದರೆ ಸುಲಭವಾಗಿ ಮತ್ತು ಕೆಲವೇ ನಿಮಿಷಗಳಲ್ಲಿ ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ ಎಂಬುದನ್ನು ನೋಡೋಣ.

ಫೋನ್‌ ಪೇ ಆ್ಯಪ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಈ ಕ್ರಮ ಅನುಸರಿಸಿ:

  • ಫೋನ್‌ಪೇ ಅಪ್ಲಿಕೇಶನ್ ತೆರೆಯಿರಿ.
  • ‘ರೀಚಾರ್ಜ್ ಮತ್ತು ಪಾವತಿ ಬಿಲ್‌ಗಳು’ ವಿಭಾಗದ ಅಡಿಯಲ್ಲಿ ವಿದ್ಯುತ್’ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ವಿದ್ಯುತ್ ಮಂಡಳಿಯನ್ನು ಆಯ್ಕೆ ಮಾಡಿ.
  • ನಿಮ್ಮ ಬಿಲ್ ವಿವರಗಳನ್ನು ನಮೂದಿಸಿ.
  • ನಿಮ್ಮ ಬಿಲ್ ಅನ್ನು UPI/ಡೆಬಿಟ್ ಕಾರ್ಡ್‌ಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳೊಂದಿಗೆ ಪಾವತಿಸಿ.

iQOO Z7 5G: ಬಹುನಿರೀಕ್ಷಿತ ಐಕ್ಯೂ Z7 5G ಆಗಮನಕ್ಕೆ ದಿನಾಂಕ ಫಿಕ್ಸ್: ಏನಿದರ ವಿಶೇಷತೆ ನೋಡಿ

ಇದನ್ನೂ ಓದಿ
Image
Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಶುರುವಾಯಿತು ಬಿಗ್ ಸೇವಿಂಗ್ ಡೇಸ್: ಈ ಬಾರಿಯ ಆಫರ್ ಕೇಳಿದ್ರೆ ದಂಗಾಗ್ತೀರ
Image
Oppo Reno 7 Pro 5G: ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಒಪ್ಪೋ ರೆನೋ 7 ಪ್ರೊ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಅತಿ ಕಡಿಮೆ ಬೆಲೆಗೆ ಲಭ್ಯ
Image
Redmi 12C: ಶವೋಮಿಯಿಂದ ಅತಿ ಕಡಿಮೆ ಬೆಲೆಗೆ ರೆಡ್ಮಿ 12C ಸ್ಮಾರ್ಟ್‌ಫೋನ್‌ ಬಿಡುಗಡೆ: ಎಷ್ಟು ರೂ. ಗೊತ್ತೇ?
Image
Mobile Data: ಅತಿ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ ನೀಡುತ್ತಿರುವ ದೇಶ ಯಾವುದು ಗೊತ್ತೇ?

ಗೂಗಲ್ ಪೇ ಆ್ಯಪ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಈ ಕ್ರಮ ಅನುಸರಿಸಿ:

  • ನಿಮ್ಮ ಫೋನ್‌ನಲ್ಲಿ ಗೂಗಲ್ ಪೇ ಆ್ಯಪ್ ತೆರೆಯಿರಿ.
  • ಪರದೆಯ ಕೆಳಭಾಗಕ್ಕೆ ಸ್ಕ್ರಾಲ್ ಮಾಡಿ, “+ ಹೊಸ ಪಾವತಿ” ಆಯ್ಕೆಯನ್ನು ಪತ್ತೆ ಮಾಡಿ ಮತ್ತು ಟ್ಯಾಪ್ ಮಾಡಿ.
  • ಈಗ ಮುಂದಿನದರಲ್ಲಿ “ಬಿಲ್ ಪಾವತಿಗಳು” ಆಯ್ಕೆಯನ್ನು ಆರಿಸಿ.
  • ವಿವಿಧ ಬಿಲ್ ಪಾವತಿ ಆಯ್ಕೆಗಳಿಂದ ‘ವಿದ್ಯುತ್’ ಟ್ಯಾಬ್ ಆಯ್ಕೆಮಾಡಿ ನಂತರ ನೀವು ಪಾವತಿ ಮಾಡಲು ಬಯಸುವ ಏಜೆನ್ಸಿಯನ್ನು ಆಯ್ಕೆ ಮಾಡಿ.
  • ನೀವು ಬಯಸಿದ ಕಂಪನಿಯನ್ನು ಆಯ್ಕೆ ಮಾಡಿದ ನಂತರ, ಪಾವತಿ ಪ್ರಕ್ರಿಯೆಯನ್ನು ಮುಗಿಸಲು ನಿಮ್ಮ ಗ್ರಾಹಕ ಖಾತೆಯನ್ನು ನೀವು ಲಿಂಕ್ ಮಾಡಬೇಕಾಗುತ್ತದೆ.
  • ನೀವು ಬಿಲ್ ಪಾವತಿಸಲು ಬಯಸುವ ಮೊತ್ತವನ್ನು ನಮೂದಿಸಿ ಮತ್ತು UPI ಪಿನ್ ಬಳಸಿ ಬಿಲ್ ಪಾವತಿಸಿ.

ಇನ್ನು ಕರೆಂಟ್ ಬಿಲ್​ಗಳನ್ನು ಸುಲಭವಾಗಿ ಪಾವತಿ ಮಾಡಲು ಮೊಬಿಕ್ವಿಕ್ ಬೆಸ್ಟ್ ಆ್ಯಪ್ ಆಗಿದೆ. ಮೊಬಿಕ್ವಿಕ್ ಖಾತೆಯಲ್ಲಿ ಹಣ ಕ್ರೆಡಿಟ್ ಮಾಡುವ ಮೂಲಕ ವಿದ್ಯುತ್ ಬಿಲ್ ಪಾವತಿಸಬಹುದಾಗಿದೆ. ಆ್ಯಪ್ ತೆರೆದು ಸ್ಕ್ರಾಲ್ ಮಾಡಿದಂತೆ ವಿದ್ಯುತ್ ಪಾವತಿ ಆಯ್ಕೆ ಕಾಣಿಸುತ್ತದೆ. ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಗ್ರಾಹಕ ಸಂಖ್ಯೆಯನ್ನು ನಮೂದಿಸಿದ ಬೇಕು. ಆಗ ಸ್ಕ್ರೀನ್ ಮೇಲೆ ಎಲೆಕ್ಟ್ರಿಕ್ ಮೊತ್ತ ತೋರಿಸುತ್ತದೆ. ನಂತರ ಪೇಮೆಂಟ್ ವಿಭಾಗಕ್ಕೆ ತೆರಳಿ ವಿದ್ಯುತ್ ಬಿಲ್ ಪಾವತಿಸಬಹುದು.

ಅಂತೆಯೆ ಪೇಟಿಯಂ ಆ್ಯಪ್​​ನಲ್ಲಿ ವಿದ್ಯುತ್ ಬಿಲ್, ಮೊಬೈಲ್ ರೀಚಾರ್ಜ್, ಟಿವಿ ರೀಚಾರ್ಜ್, ಗ್ಯಾಸ್ ಬಿಲ್ ಹೀಗೆ ಆಯ್ಕೆಗಳಿರುತ್ತವೆ. ಆ್ಯಂಡ್ರಾಯ್ಡ್ ಬಳಕೆದಾರರು ಗೂಗಲ್ ಪ್ಲೇಸ್ಟೋರ್​ನಲ್ಲಿ ದೊರಕುವ ಪೇಟಿಯಂ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಲಾಗಿನ್ ಆದ ನಂತರ ಸ್ಟೇ ಎಟ್ ಹೋಂ ಎಸೆಸ್ಸೆಂಶಿಯಲ್ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಎಲೆಕ್ಟ್ರಿಸಿಟಿ ಆಯ್ಕೆ ಕಾಣಸಿಗುತ್ತದೆ. ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಆನ್​ಲೈನ್​ ಮೂಲಕ ಹಣ ಪಾವತಿಸಬಹುದಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್