ವಿಶ್ವದಲ್ಲಿ ಇಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ (Meta) ಒಡೆತನದ ವಾಟ್ಸ್ಆ್ಯಪ್ (WhatsApp) ಅಪ್ಲಿಕೇಶನ್ ಈ ವರ್ಷ ಹಲವು ಫೀಚರ್ಗಳನ್ನು ಪರಿಚಯಿಸಿ ಮತ್ತಷ್ಟು ಪ್ರಸಿದ್ಧಿ ಪಡೆದುಕೊಂಡಿದೆ. ಇನ್ನೂ ಸಾಲು ಸಾಲು ಅಪ್ಡೇಟ್ಗಳು ಬರಲು ತಯಾರಾಗಿದೆ. ವಾಟ್ಸ್ಆ್ಯಪ್ನಲ್ಲಿ ಮಲ್ಟಿ ಡಿವೈಸ್ ಸಪೋರ್ಟ್ ಅವಕಾಶ ನೀಡಿರುವುದು ಗೊತ್ತೇ ಇದೆ. ಇದರಿಂದ ಏಕಕಾಲಕ್ಕೆ ಎರಡು ಮೂರು ಡಿವೈಸ್‌ಗಳಲ್ಲಿ ವಾಟ್ಸ್ಆ್ಯಪ್ ಖಾತೆ ಬಳಕೆ ಮಾಡಬಹುದು. ಅದಾಗ್ಯೂ, ಕೆಲವು ಸಂದರ್ಭಗಳಲ್ಲಿ ಮಲ್ಟಿ ಡಿವೈಸ್ ಸಪೋರ್ಟ್ ಆಯ್ಕೆಯಿಂದ ವಾಟ್ಸ್ಆ್ಯಪ್ ಖಾತೆ ದುರುಪಯೋಗ ಆಗುವ ಅಥವಾ ಇತರರು ಕದ್ದು ನಿಮ್ಮ ಮೆಸೇಜ್ ಓದಲು ದಾರಿ ಮಾಡಿಕೊಡುವ ಸಾಧ್ಯತೆಗಳು ಹೆಚ್ಚಿವೆ. ಕಂಪ್ಯೂಟರ್ಗಳಲ್ಲಿಯೂ (Computer) ಈಗ ವಾಟ್ಸ್ಆ್ಯಪ್ ಹೆಚ್ಚು ಬಳಸುತ್ತಿರುವುದರಿಂದ ನಿಮ್ಮ ಖಾತೆ ಎಲ್ಲಿ ಲಾಗಿನ್ ಆಗಿರುತ್ತದೆ ಎಂಬುದು ಅರಿವಿಗೆ ಬರುವುದಿಲ್ಲ. ಹಾಗಾದ್ರೆ ನಿಮ್ಮ ವಾಟ್ಸ್ಆ್ಯಪ್ ಬೇರೆಯವರು ವೀಕ್ಷಿಸುತ್ತಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ?.
ಕೆಲವೊಮ್ಮೆ ಬಳಕೆದಾರರ ತಪ್ಪಿನಿಂದಲೇ ಬೇರೆಯವರು ಅವರ ವಾಟ್ಸ್ಆ್ಯಪ್ ಚಾಟ್/ ಮೀಡಿಯಾ ಫೈಲ್ಸ್ ವೀಕ್ಷಿಸುತ್ತಾರೆ. ಅಂದರೆ ಬಳಕೆದಾರರ ತಪ್ಪಿನಿಂದಲೇ ಅವರ ವಾಟ್ಸ್ಆ್ಯಪ್ ಹ್ಯಾಕ್ ಆಗುವ ಚಾನ್ಸ್ ಇರುತ್ತವೆ. ಹೀಗೆ ಹ್ಯಾಕ್ ಆದ ವಾಟ್ಸ್ಆ್ಯಪ್ ಕೆಲವೊಮ್ಮೆ ದುರುಪಯೋಗ ಕೂಡಾ ಆಗಬಹುದು. ಹೀಗಾಗಿ ಬಳಕೆದಾರರ ವಾಟ್ಸ್ಆ್ಯಪ್ ಚಾಟ್ ಅನ್ನು ಯಾರಾದರೂ ರಹಸ್ಯವಾಗಿ ಓದುತ್ತಿದ್ದಾರೆಯೇ/ ವೀಕ್ಷಿಸುತ್ತಿದ್ದಾರೆಯೇ ಎನ್ನುವುದನ್ನು ತಿಳಿಯುವುದು ಮುಖ್ಯ.
ಬಳಕೆದಾರರ ವಾಟ್ಸ್ಆ್ಯಪ್ ಚಾಟ್ ಅನ್ನು ಯಾರಾದರೂ ರಹಸ್ಯವಾಗಿ ಓದುತ್ತಿದ್ದಾರೆಯೇ/ ವೀಕ್ಷಿಸುತ್ತಿದ್ದಾರೆಯೇ ಎನ್ನುವುದನ್ನು ತಿಳಿಯಲು ಯಾವುದೇ ಥರ್ಡ್‌ಪಾರ್ಟಿ ಆಪ್ ಅಗತ್ಯ ಇಲ್ಲ. ಬದಲಿಗೆ ಬಳಕೆದಾರರು ಅವರ ವಾಟ್ಸ್ಆ್ಯಪ್ನಲ್ಲಿಯೇ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಇದಕ್ಕೆ ಇಲ್ಲಿದೆ ನೋಡಿ ಟ್ರಿಕ್.
ಬಾರ್‌ಕೋಡ್ ಸ್ಕ್ಯಾನ್
ಕೆಲವರಿಗೆ ಬೇರೆಯವರ ವಾಟ್ಸ್ಆ್ಯಪ್ ಇಣುಕಿ ನೋಡುವ ಕುತೂಹಲ ಇರುತ್ತದೆ. ಅಂತಹವರು ಇತರರ ವಾಟ್ಸ್ಆ್ಯಪ್ ಮೆಸೆಜ್ ಓದಲು ಕಳ್ಳ ಮಾರ್ಗ ಹುಡುಕುತ್ತಾರೆ. ಬಾರ್‌ಕೋಡ್ ಸ್ಕ್ಯಾನ್ ಮೂಲಕ ವಾಟ್ಸ್ಆ್ಯಪ್ ಲ್ಯಾಪ್‌ಟಾಪ್‌ಗೆ ಅಥವಾ ಇತರೆ ಡಿವೈಸ್‌ನಲ್ಲಿ ನಕಲು ಮಾಡುವ ಸಾಧ್ಯತೆಗಳಿರುತ್ತವೆ. ಕೆಲವು ಬಳಕೆದಾರರು ತಮ್ಮ ಫೋನಿಗೆ ಯಾವುದೇ ಲಾಕ್ ಇಟ್ಟಿರುವುದಿಲ್ಲ. ಹಾಗೆಯೇ ವಾಟ್ಸ್ಆ್ಯಪ್ ಆ್ಯಪ್ ತೆರೆಯಲು ಸಹ ಯಾವುದೇ ಪಾಸ್‌ವರ್ಡ್ ಇಟ್ಟಿರುವುದಿಲ್ಲ. ಇಂತಹ ಖಾತೆಗಳಿಗೆ ಸುಲಭವಾಗಿ ಇತರರು ಹ್ಯಾಕ್ ಮಾಡಬಹುದಾಗಿದೆ. ಅವರ ವಾಟ್ಸ್ಆ್ಯಪ್ ಖಾತೆ ತೆರೆದು ವಾಟ್ಸ್ಆ್ಯಪ್ ವೆಬ್ / ಲಿಂಕ್ ಡಿವೈಸ್ ಬಾರ್‌ಕೋಡ್ ಸ್ಕ್ಯಾನ್ ಮೂಲಕ ಇನ್ನೊಂದು ಡಿವೈಸ್‌ನಲ್ಲಿ ನಕಲು ವಾಟ್ಸ್ಆ್ಯಪ್ ತೆರೆದುಕೊಳ್ಳುವ ಅವಕಾಶ ಇರುತ್ತವೆ.
ಹ್ಯಾಕ್ ತಡೆಯಲು ಏನು ಮಾಡಬೇಕು?
ವಾಟ್ಸ್ಆ್ಯಪ್ ಹ್ಯಾಕ್ ಆಗುವುದನ್ನು ತಡೆಯಲು ಇತರೆ ಡಿವೈಸ್‌ಗಳಲ್ಲಿ ನೀವು ತೆರೆದಿರುವ ಎಲ್ಲಾ ಸೆಷನ್‌ಗಳಿಂದ ಲಾಗ್ ಔಟ್ ಮಾಡಬಹುದು. ಹೀಗೆ ಮಾಡಿದರೇ ಮೂರನೇ ವ್ಯಕ್ತಿಯು ನಿಮ್ಮ ಖಾತೆಗೆ ಪ್ರವೇಶವನ್ನು ತಕ್ಷಣ ಕಳೆದುಕೊಳ್ಳುತ್ತಾನೆ. ಈ ಸಂಗತಿಗಳು ಮತ್ತೆ ಸಂಭವಿಸುವುದನ್ನು ತಪ್ಪಿಸಲು, ಅಪ್ಲಿಕೇಶನ್ ಲಾಕ್‌ನೊಂದಿಗೆ ವಾಟ್ಸ್ಆ್ಯಪ್ ಅನ್ನು ಕಾನ್ಫಿಗರ್ ಮಾಡುವುದು ಅತ್ಯಂತ ಪರಿಣಾಮಕಾರಿ ಪರಿಹಾರವಾಗಿದೆ. ಈ ರೀತಿಯಾಗಿ, ಯಾರಾದರೂ ನಿಮ್ಮ ಫೋನ್ ಪಡೆದರೂ ಸಹ, ಅವರು ವಾಟ್ಸ್ಆ್ಯಪ್ ಅಪ್ಲಿಕೇಶನ್ ಅನ್ನು ಪ್ರವೇಶಿಸಲು ಸಾಧ್ಯವಿಲ್ಲ ಮತ್ತು ಅದನ್ನು ವಾಟ್ಸ್ಆ್ಯಪ್ ವೆಬ್ ಮೂಲಕ ಪಿಸಿ ಅಥವಾ ಇತರ ಅಪ್ಲಿಕೇಶನ್‌ಗೆ ಸಂಪರ್ಕಿಸಲು ಸಾಧ್ಯವಾಗುವುದಿಲ್ಲ.
Published On - 10:06 am, Sat, 8 October 22