Tech Tips: ಇನ್​​ಸ್ಟಾಗ್ರಾಮ್ ಬಯೋದಲ್ಲಿ ಐದು ಲಿಂಕ್​ಗಳನ್ನು ಸೇರಿಸುವ ಟ್ರಿಕ್ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ

Instagram Tips: ಇತ್ತೀಚೆಗೆ ಇನ್​ಸ್ಟಗ್ರಾಮ್ ಹೊಸ ವೈಶಿಷ್ಟ್ಯವನ್ನು ಪ್ರಕಟಿಸಿದೆ. ಇದು ಬಳಕೆದಾರರಿಗೆ ತಮ್ಮ ಪ್ರೊಫೈಲ್ ಬಯೋದಲ್ಲಿ ಐದು ಲಿಂಕ್‌ಗಳನ್ನು ಸೇರಿಸಲು ಅನುವು ಮಾಡಿಕೊಡುತ್ತದೆ.

Tech Tips: ಇನ್​​ಸ್ಟಾಗ್ರಾಮ್ ಬಯೋದಲ್ಲಿ ಐದು ಲಿಂಕ್​ಗಳನ್ನು ಸೇರಿಸುವ ಟ್ರಿಕ್ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ
Instagram
Follow us
Vinay Bhat
|

Updated on:Apr 24, 2023 | 3:05 PM

ಸಾಮಾಜಿಕ ಜಾಲತಾಣಗಳು ಇಂದು ಸಾಕಷ್ಟು ಬದಲಾವಣೆ ಕಂಡಿದ್ದು ಈಗ ಮೊದಲಿನಂತಿಲ್ಲ. ಫೇಸ್​ಬುಕ್, ಟ್ವಿಟರ್ ಹಾಗೂ ವಾಟ್ಸ್​ಆ್ಯಪ್ (WhatsApp) ಅನೇಕ ರೀತಿಯಲ್ಲಿ ಬಳಕೆದಾರರಿಗೆ ಸಹಾಯ ಮಾಡುತ್ತಿದೆ. ಇವುಗಳ ಜೊತೆಗೆ ಮತ್ತೊಂದು ಪ್ರಸಿದ್ಧ ಜಾಲತಾಣ ಇನ್​ಸ್ಟಾಗ್ರಾಮ್ (Instagram) ಕೂಡ ಹಿಂದೆ ಬಿದ್ದಿಲ್ಲ. ತಿಂಗಳಿಗೆ ಬಿಲಿಯನ್​ಗೂ ಅಧಿಕ ಆ್ಯಕ್ಟಿವ್ ಬಳಕೆದಾರರನ್ನು ಹೊಂದಿರುವ ಇನ್​ಸ್ಟಾಗ್ರಾಮ್​ ಈಗ ಕೇವಲ ಫೋಟೋ- ವಿಡಿಯೋ ಹಂಚಿಕೊಳ್ಳಲು ಮಾತ್ರ ಉಳಿದಿಲ್ಲ. ಬದಲಾಗಿ ದೊಡ್ಡ ವ್ಯಾಪಾರದ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಹೀಗೆ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಇನ್​ಸ್ಟಾಗ್ರಾಮ್​ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಫೀಚರ್​ಗಳನ್ನು (Instagram Feature) ಕೂಡ ನೀಡುತ್ತಿದೆ.

ಇತ್ತೀಚೆಗೆ ಇನ್​ಸ್ಟಾಗ್ರಾಮ್ ಹೊಸ ವೈಶಿಷ್ಟ್ಯವನ್ನು ಪ್ರಕಟಿಸಿದೆ. ಇದು ಬಳಕೆದಾರರಿಗೆ ತಮ್ಮ ಪ್ರೊಫೈಲ್ ಬಯೋದಲ್ಲಿ ಐದು ಲಿಂಕ್‌ಗಳನ್ನು ಸೇರಿಸಲು ಅನುವು ಮಾಡಿಕೊಡುತ್ತದೆ. “ನಿಮ್ಮ ಇನ್​ಸ್ಟಾಗ್ರಾಮ್ ಪ್ರೊಫೈಲ್‌ಗೆ 5 ಲಿಂಕ್‌ಗಳನ್ನು ಸೇರಿಸುವ ಆಯ್ಕೆಯನ್ನು ನಾವು ಪ್ರಾರಂಭಿಸುತ್ತಿದ್ದೇವೆ. ಈ ಫೀಚರ್ ಬಳಕೆದಾರರಿಗೆ ಹೆಚ್ಚು ನೆರವಾಗಲಿದೆ. ಇದರ ಮೂಲಕ ಪ್ರೇಕ್ಷಕರು ನಿಮ್ಮ ಬಗ್ಗೆ ಇನ್ನಷ್ಟು ವಿಚಾರವನ್ನು ತಿಳಿದುಕೊಳ್ಳಬಹುದು ಎಂದು ಇನ್​ಸ್ಟಾ ಹೇಳಿದೆ.

Tech Tips: ಎರಡು ಸ್ಮಾರ್ಟ್​ಫೋನ್​ನಲ್ಲಿ ಒಂದೇ ನಂಬರ್​ನ ವಾಟ್ಸ್​ಆ್ಯಪ್ ಖಾತೆ ತೆರೆಯಬಹುದೇ?

ಇದನ್ನೂ ಓದಿ
Image
Tech Tips: ವಾಟ್ಸ್​ಆ್ಯಪ್​ ಅನ್ನು​ ಕನ್ನಡ ಭಾಷೆಯಲ್ಲೂ ಬಳಸಿ: ಹೇಗೆ ಗೊತ್ತೇ?
Image
OnePlus Nord 3: ರೋಚಕತೆ ಸೃಷ್ಟಿಸಿದ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ
Image
Tech Tips: ಗೂಗಲ್ ಪೇ ಕೈಕೊಟ್ರೆ ಟೆನ್ಶನ್ ಬೇಡ: ಈ ಆ್ಯಪ್ ಇನ್​ಸ್ಟಾಲ್ ಮಾಡಿಕೊಳ್ಳಿ
Image
Google Pixel 6 Pro 5G: ಕೇವಲ 46,910 ರೂ. ಗೆ ಸೇಲ್ ಆಗುತ್ತಿದೆ 1 ಲಕ್ಷದ ಈ ಸ್ಮಾರ್ಟ್​ಫೋನ್: ಆಫರ್ ಮಿಸ್ ಮಾಡ್ಬೇಡಿ

ಈ ಹೊಸ ವೈಶಿಷ್ಟ್ಯದೊಂದಿಗೆ ಬಳಕೆದಾರರು ಮೊಬೈಲ್ ಅಪ್ಲಿಕೇಶನ್‌ನಲ್ಲಿ ತಮ್ಮ ಪ್ರೊಫೈಲ್ ಅನ್ನು ಎಡಿಟ್ ಮಾಡುವ ಮೂಲಕ ಲಿಂಕ್‌ಗಳನ್ನು ಸೇರಿಸಬಹುದು. ಇದಕ್ಕೆ ಶೀರ್ಷಿಕೆಗಳನ್ನು ನೀಡುವ ಅವಕಾಶ ಕೂಡ ಕಲ್ಪಿಸಲಾಗಿದೆ.

ಇನ್​ಸ್ಟಗ್ರಾಮ್ ಬಯೋಗೆ ಐದು ಲಿಂಕ್‌ಗಳನ್ನು ಸೇರಿಸುವುದು ಹೇಗೆ?:

ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಇನ್​ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ.

  • ಬಲ ಮೂಲೆಯಲ್ಲಿರುವ “ಪ್ರೊಫೈಲ್” ಐಕಾನ್ ಮೇಲೆ ಟ್ಯಾಪ್ ಮಾಡುವ ಮೂಲಕ ನಿಮ್ಮ ಪ್ರೊಫೈಲ್‌ಗೆ ನ್ಯಾವಿಗೇಟ್ ಮಾಡಿ..
  • ಈಗ ಪ್ರೊಫೈಲ್ ಚಿತ್ರದ ಕೆಳಗೆ ಇರುವ “ಎಡಿಟ್ ಪ್ರೊಫೈಲ್” ಬಟನ್ ಅನ್ನು ಟ್ಯಾಪ್ ಮಾಡಿ.
  • ಕೆಳಗೆ ಸ್ಕ್ರಾಲ್ ಮಾಡಿ “ವೆಬ್‌ಸೈಟ್” ಅಥವಾ “ಬಯೋ” ವಿಭಾಗದ ಮೇಲೆ ಟ್ಯಾಪ್ ಮಾಡಬೇಕು.
  • ಈ “ವೆಬ್‌ಸೈಟ್” ಅಥವಾ “ಬಯೋ” ವಿಭಾಗದಲ್ಲಿ, ನೀವು ಸೇರಿಸಲು ಲಿಂಕ್​ಗಳನ್ನು ಹಂಚಿಕೊಳ್ಳಬಹುದು.
  • ನೀವು ನೇರವಾಗಿ ಲಿಂಕ್ ಅನ್ನು ಪೇಸ್ಟ್ ಮಾಡಬಹುದು ಅಥವ ಟೈಪ್ ಮಾಡಿ ಆ್ಯಡ್ ಮಾಡುವ ಅವಕಾಶ ಕೂಡ ಇದೆ.
  • ನೀವು ಹಂಚಿಕೊಂಡಿರುವ ಲಿಂಕ್​ಗಳ ಸ್ಥಾನದಲ್ಲಿ ಬದಲವಣೆ ಮಾಡಬಹುದು. ಡ್ರ್ಯಾಗ್ ಮತ್ತು ಡ್ರಾಪ್ ಮಾಡುವ ಮೂಲಕ ಸ್ಥಾನ ಪಲ್ಲಟಕ್ಕೆ ಅವಕಾಶವಿದೆ.
  • ನಿಮಗೆ ಅಗತ್ಯವಿರುವ ಎಲ್ಲ ಲಿಂಕ್‌ಗಳನ್ನು ಹಾಕಿದ ಬಳಿಕ ಡನ್ ಮತ್ತು ಸೇವ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Mon, 24 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ