ಸಾಮಾಜಿಕ ಜಾಲತಾಣಗಳು ಇಂದು ಸಾಕಷ್ಟು ಬದಲಾವಣೆ ಕಂಡಿದ್ದು ಈಗ ಮೊದಲಿನಂತಿಲ್ಲ. ಫೇಸ್ಬುಕ್, ಟ್ವಿಟರ್ ಹಾಗೂ ವಾಟ್ಸ್ಆ್ಯಪ್ (WhatsApp) ಅನೇಕ ರೀತಿಯಲ್ಲಿ ಬಳಕೆದಾರರಿಗೆ ಸಹಾಯ ಮಾಡುತ್ತಿದೆ. ಇವುಗಳ ಜೊತೆಗೆ ಮತ್ತೊಂದು ಪ್ರಸಿದ್ಧ ಜಾಲತಾಣ ಇನ್ಸ್ಟಾಗ್ರಾಮ್ (Instagram) ಕೂಡ ಹಿಂದೆ ಬಿದ್ದಿಲ್ಲ. ತಿಂಗಳಿಗೆ ಬಿಲಿಯನ್ಗೂ ಅಧಿಕ ಆ್ಯಕ್ಟಿವ್ ಬಳಕೆದಾರರನ್ನು ಹೊಂದಿರುವ ಇನ್ಸ್ಟಾಗ್ರಾಮ್ ಈಗ ಕೇವಲ ಫೋಟೋ- ವಿಡಿಯೋ ಹಂಚಿಕೊಳ್ಳಲು ಮಾತ್ರ ಉಳಿದಿಲ್ಲ. ಬದಲಾಗಿ ದೊಡ್ಡ ವ್ಯಾಪಾರದ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಹೀಗೆ ಸಾಕಷ್ಟು ಪ್ರಸಿದ್ಧಿ ಪಡೆದಿರುವ ಇನ್ಸ್ಟಾಗ್ರಾಮ್ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಫೀಚರ್ಗಳನ್ನು (Instagram Feature) ಕೂಡ ನೀಡುತ್ತಿದೆ.
ಇತ್ತೀಚೆಗೆ ಇನ್ಸ್ಟಾಗ್ರಾಮ್ ಹೊಸ ವೈಶಿಷ್ಟ್ಯವನ್ನು ಪ್ರಕಟಿಸಿದೆ. ಇದು ಬಳಕೆದಾರರಿಗೆ ತಮ್ಮ ಪ್ರೊಫೈಲ್ ಬಯೋದಲ್ಲಿ ಐದು ಲಿಂಕ್‌ಗಳನ್ನು ಸೇರಿಸಲು ಅನುವು ಮಾಡಿಕೊಡುತ್ತದೆ. “ನಿಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್‌ಗೆ 5 ಲಿಂಕ್‌ಗಳನ್ನು ಸೇರಿಸುವ ಆಯ್ಕೆಯನ್ನು ನಾವು ಪ್ರಾರಂಭಿಸುತ್ತಿದ್ದೇವೆ. ಈ ಫೀಚರ್ ಬಳಕೆದಾರರಿಗೆ ಹೆಚ್ಚು ನೆರವಾಗಲಿದೆ. ಇದರ ಮೂಲಕ ಪ್ರೇಕ್ಷಕರು ನಿಮ್ಮ ಬಗ್ಗೆ ಇನ್ನಷ್ಟು ವಿಚಾರವನ್ನು ತಿಳಿದುಕೊಳ್ಳಬಹುದು ಎಂದು ಇನ್ಸ್ಟಾ ಹೇಳಿದೆ.
Tech Tips: ಎರಡು ಸ್ಮಾರ್ಟ್ಫೋನ್ನಲ್ಲಿ ಒಂದೇ ನಂಬರ್ನ ವಾಟ್ಸ್ಆ್ಯಪ್ ಖಾತೆ ತೆರೆಯಬಹುದೇ?
ಈ ಹೊಸ ವೈಶಿಷ್ಟ್ಯದೊಂದಿಗೆ ಬಳಕೆದಾರರು ಮೊಬೈಲ್ ಅಪ್ಲಿಕೇಶನ್‌ನಲ್ಲಿ ತಮ್ಮ ಪ್ರೊಫೈಲ್ ಅನ್ನು ಎಡಿಟ್ ಮಾಡುವ ಮೂಲಕ ಲಿಂಕ್‌ಗಳನ್ನು ಸೇರಿಸಬಹುದು. ಇದಕ್ಕೆ ಶೀರ್ಷಿಕೆಗಳನ್ನು ನೀಡುವ ಅವಕಾಶ ಕೂಡ ಕಲ್ಪಿಸಲಾಗಿದೆ.
ಇನ್ಸ್ಟಗ್ರಾಮ್ ಬಯೋಗೆ ಐದು ಲಿಂಕ್‌ಗಳನ್ನು ಸೇರಿಸುವುದು ಹೇಗೆ?:
ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಇನ್ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:02 pm, Mon, 24 April 23