AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಫೋನ್ ಪೇ, ಗೂಗಲ್ ಪೇ ಮೂಲಕ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು?: ಇಲ್ಲಿದೆ ಮಾಹಿತಿ

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಎಂಬುದು ಆರ್‌ಬಿಐ ನಿಯಂತ್ರಿತ ಘಟಕವಾದ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಅಭಿವೃದ್ಧಿಪಡಿಸಿದ ತ್ವರಿತ ಪಾವತಿ ವ್ಯವಸ್ಥೆಯಾಗಿದೆ. ಇದು ಯಾವುದೇ ಎರಡು ಬ್ಯಾಂಕ್‌ ಖಾತೆಗಳ ನಡುವೆ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಈ ಪಾವತಿ ವ್ಯವಸ್ಥೆಯನ್ನು ಪ್ರಾರಂಭಿಸಲಾಯಿತು.

Tech Tips: ಫೋನ್ ಪೇ, ಗೂಗಲ್ ಪೇ ಮೂಲಕ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು?: ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 04, 2026 | 4:56 PM

Share

ಇಂದಿನ ವೇಗದ ಜಗತ್ತಿನಲ್ಲಿ ಡಿಜಿಟಲ್‌ ಪೇಮೆಂಟ್‌ ವ್ಯವಸ್ಥೆ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದು ಹೆಚ್ಚಿನವರು ಉಪಯೋಗಿಸುತ್ತಿದ್ದಾರೆ. ಕೊರೊನಾ ವೈರಸ್ (Corona Virus) ಬಂದ ಮೇಲಂತು ದೇಶದಲ್ಲಿ ಹೆಚ್ಚಿನ ವ್ಯವಹಾರಗಳು ಆನ್​ಲೈನ್ ಮೂಲಕವೇ ನಡೆಯುತ್ತಿದ್ದು ಈ ಮೂಲಕ ಯುಪಿಐ (UPI) ಅಥವಾ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಹೆಚ್ಚು ಬಳಕೆಯಾಗುತ್ತಿದೆ. ಇಂದು ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಪ್ರತಿಯೊಬ್ಬರೂ ಕೂಡ ಆನ್‌ಲೈನ್‌ ಪಾವತಿಯನ್ನು ಸ್ವೀಕರಿಸುತ್ತಾರೆ. ಯುಪಿಐ ಮೂಲಕ ಎಲ್ಲ ರೀತಿಯ ಹಣಕಾಸು ವ್ಯವಹಾರ, ಬ್ಯಾಂಕಿನ ವ್ಯವಹಾರ ತುಂಬಾ ಸುಲಭವಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ (PhonePe), ಗೂಗಲ್‌ ಪೇ, ಪೇಟಿಎಂ ನಂತಹ ಆ್ಯಪ್‌ಗಳು ನೀಡುತ್ತಿವೆ. ಆದರೆ ಯುಪಿಐನಲ್ಲಿ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು ಎಂಬುದು ನಿಮಗೆ ಗೊತ್ತೇ?.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಎಂಬುದು ಆರ್‌ಬಿಐ ನಿಯಂತ್ರಿತ ಘಟಕವಾದ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಅಭಿವೃದ್ಧಿಪಡಿಸಿದ ತ್ವರಿತ ಪಾವತಿ ವ್ಯವಸ್ಥೆಯಾಗಿದೆ. ಇದು ಯಾವುದೇ ಎರಡು ಬ್ಯಾಂಕ್‌ ಖಾತೆಗಳ ನಡುವೆ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಈ ಪಾವತಿ ವ್ಯವಸ್ಥೆಯನ್ನು ಪ್ರಾರಂಭಿಸಲಾಯಿತು. ಯುಪಿಐ ವಹಿವಾಟು ಮಿತಿಯನ್ನು ಕಾಲಕಾಲಕ್ಕೆ ಬದಲಾವಣೆ ಮಾಡಲಾಗುತ್ತಿದೆ. ಸದ್ಯ ಯುಪಿಐ ಬಳಸಿ ಮಾಡುವ ವಹಿವಾಟು ಮಿತಿ ದಿನಕ್ಕೆ 1 ಲಕ್ಷ ರೂ. ಆಗಿದೆ. ಆದರೆ, ಇದು ಆಯ್ದ ಬ್ಯಾಂಕ್​ಗಳಿಗೆ ಮಾತ್ರ. ನಿಮ್ಮದು ಯಾವ ಬ್ಯಾಂಕ್ ಎಂಬ ಆಧಾರದ ಮೇಲೆ ಎಷ್ಟು ಹಣ ಕಳುಹಿಸಬಹುದು ಎಂಬ ನಿಯಮವಿದೆ.

ಇನ್ನು ಭೀಮ್ ಯುಪಿಐ ವಹಿವಾಟು ಮಿತಿ ಪ್ರತಿ ವಹಿವಾಟಿಗೆ 40 ಸಾವಿರ ರೂ. ಆಗಿದೆ. ಈ ವಹಿವಾಟು ಮಿತಿ ಭೀಮ್ ಯುಪಿಐಗೆ ಲಿಂಕ್ ಆಗಿರುವ ಖಾತೆಗಳಿಗೆ ಲಭ್ಯವಿರುತ್ತದೆ. ಅಂತೆಯೆ ವ್ಯಾಪಾರಿಗಳ ನಡೆಸುವ ವಹಿವಾಟಿನ ಗರಿಷ್ಠ ಮೊತ್ತ 24 ಗಂಟೆಯಲ್ಲಿ 2 ಲಕ್ಷ ರೂ. ಆಗಿದೆ. ಎಲ್ಲಾದರು ನೀವು ಪಾವತಿ ಮಾಡಿದ ಸಂದರ್ಭದಲ್ಲಿ ಹಣ ನಿಮ್ಮ ಖಾತೆಯಿಂದ ಕಡಿತವಾಗಿ ವರ್ಗಾವಣೆ ಮಾಡಿದ ಖಾತೆಗೆ ಜಮೆ ಆಗದಿದ್ದರೆ ಆ ಹಣವು ಮೂರು ದಿನಗಳ ಒಳಗೆ ರಿಫಂಡ್ ಆಗುತ್ತದೆ. ಅದು ರಿಫಂಡ್ ಆಗದಿದ್ದರೆ ನಿಮ್ಮ ಬ್ಯಾಂಕ್ ಖಾತೆಯನ್ನು ಸಂಪರ್ಕ ಮಾಡಬಹುದು.

ಈಗಾಗಲೇ ಹೇಳಿರುವಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಯುಪಿಐ ವಹಿವಾಟು ಮಿತಿ ವಿಭಿನ್ನವಾಗಿದೆ. ಈ ಕುರಿತ ಪಟ್ಟಿ ಇಲ್ಲಿದೆ.

ಐಸಿಐಸಿಐ ಬ್ಯಾಂಕ್: ಪ್ರತಿ ವಹಿವಾಟಿಗೆ 1 ಲಕ್ಷ ರೂ. ಮಿತಿಯಿದೆ. ಐಸಿಐಸಿಐ ಬ್ಯಾಂಕಿನ ಖಾತೆದಾರರು 24 ಗಂಟೆಗಳಲ್ಲಿ 20 ಬಾರಿ ಹಣ ವರ್ಗಾವಣೆ ಮಾಡಬಹುದು.

ಎಸ್‌ಬಿಐ ಬ್ಯಾಂಕ್: ಪ್ರತಿ ವಹಿವಾಟಿಗೆ 1 ಲಕ್ಷ ರೂ. ಮಿತಿ, 24 ಗಂಟೆಗಳಲ್ಲಿ ಗರಿಷ್ಠ 10 ವಹಿವಾಟು ಮಾಡಬಹುದು.

ಎಚ್‌ಡಿಎಫ್‌ಸಿ ಬ್ಯಾಂಕ್: ಪ್ರತಿ ವಹಿವಾಟಿಗೆ 1 ಲಕ್ಷ ರೂ. ಮಿತಿ.

ಬ್ಯಾಂಕ್ ಆಫ್ ಇಂಡಿಯಾ: ಪ್ರತಿ ವಹಿವಾಟಿಗೆ 10 ಸಾವಿರ ರೂ. ಮಿತಿ.

ಸೆಂಟ್ರಲ್ ಬ್ಯಾಂಕ್: ಪ್ರತಿ ವಹಿವಾಟಿಗೆ 25 ಸಾವಿರ ರೂ. ಮಿತಿ

ಐಡಿಎಫ್‌ಸಿ ಫಸ್ಟ್ ಬ್ಯಾಂಕ್: ಪ್ರತಿ ವಹಿವಾಟಿಗೆ 25 ಸಾವಿರ ರೂ. ಮಿತಿ.

ಕೊಟಕ್ ಮಹೀಂದ್ರಾ ಬ್ಯಾಂಕ್: ಪ್ರತಿ ವಹಿವಾಟಿಗೆ 25 ಸಾವಿರ ರೂ ಮಿತಿ. ದಿನಕ್ಕೆ 2 ವಹಿವಾಟು ಮಾಡಬಹುದು.

ಕೆನರಾ ಬ್ಯಾಂಕ್ 1 ಲಕ್ಷ ರೂ.

ಆಕ್ಸಿಸ್ ಬ್ಯಾಂಕ್ 1 ಲಕ್ಷ ರೂ.

ಕಾರ್ಪೊರೇಶನ್ ಬ್ಯಾಂಕ್ 50 ಸಾವಿರ ರೂ.

ಆಂಧ್ರ ಬ್ಯಾಂಕ್ 1 ಲಕ್ಷ ರೂ.

ಸಿಟಿ ಬ್ಯಾಂಕ್ 1 ಲಕ್ಷ ರೂ.

ಬ್ಯಾಂಕ್ ಆಫ್ ಬರೋಡಾ 25 ಸಾವಿರ ರೂ.

ಬ್ಯಾಂಕ್ ಆಫ್ ಮಹಾರಾಷ್ಟ್ರ 1 ಲಕ್ಷ ರೂ.

ಸಿಟಿ ಯೂನಿಯನ್ ಬ್ಯಾಂಕ್ 1 ಲಕ್ಷ ರೂ.

ಗೂಗಲ್ ಪೇ, ಫೋನ್ ಪೇಗಳಂತೆ ಪೇಟಿಎಂನಲ್ಲಿ ಕೂಡ ಪ್ರತಿ ವಹಿವಾಟಿನಲ್ಲಿ 1 ಲಕ್ಷ ಹಣ ವರ್ಗಾವಣೆ ಮಾಡುವ ಆಯ್ಕೆ ನೀಡಲಾಗಿದೆ. ಆದರೆ 24 ಗಂಟೆಗಳಲ್ಲಿ ನೀವು 1 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Thu, 1 December 22

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!