AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಊಬರ್ ಕ್ಯಾಬ್ ಅನ್ನು ವಾಟ್ಸ್​ಆ್ಯಪ್ ಮೂಲಕ ಬುಕ್ ಮಾಡಬಹುದು: ಹೇಗೆ?, ಇಲ್ಲಿದೆ ಸುಲಭ ಟ್ರಿಕ್

ಊಬರ್ ಆ್ಯಪ್ ಅವಶ್ಯಕತೆಯಿಲ್ಲದೆಯೇ, ವಾಟ್ಸ್​ಆ್ಯಪ್​​ ಮೂಲಕ ಚಾಟ್ ಇಂಟರ್ಫೇಸ್​ನಲ್ಲಿ ನೋಂದಾಯಿಸಿಕೊಳ್ಳಬಹುದು. ಜೊತೆಗೆ ರೈಡ್​ಗಳನ್ನು ಬುಕ್ ಮಾಡಬಹುದು ಮತ್ತು ಟ್ರಿಪ್ ರಸೀದಿಗಳನ್ನು ಪಡೆಯಬಹುದಾಗಿದೆ. ಇದಕ್ಕಾಗಿ QR ಕೋಡ್ ಅನ್ನು ಸ್ಕ್ಯಾನ್ ಮಾಡುವುದು ಅಥವಾ ಊಬರ್ ವಾಟ್ಸ್​ಆ್ಯಪ್​​ ಚಾಟ್ ತೆರೆಯಲು ನೇರವಾಗಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

Tech Tips: ಊಬರ್ ಕ್ಯಾಬ್ ಅನ್ನು ವಾಟ್ಸ್​ಆ್ಯಪ್ ಮೂಲಕ ಬುಕ್ ಮಾಡಬಹುದು: ಹೇಗೆ?, ಇಲ್ಲಿದೆ ಸುಲಭ ಟ್ರಿಕ್
Tech Tips
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 05, 2025 | 11:06 AM

Share

ವಾಟ್ಸ್​ಆ್ಯಪ್ ಅನ್ನು ಮೊದಲು ಚಾಟ್ ಮಾಡಲು ಬಳಸಲಾಗುತ್ತಿತ್ತು. ಆದರೆ, ಕಾಲಾನಂತರದಲ್ಲಿ ಇದರಲ್ಲಿ ಅನೇಕ ನವೀಕರಣಗಳನ್ನು ಬಿಡುಗಡೆ ಮಾಡಲಾಯಿತು. ಎಷ್ಟರ ಮಟ್ಟಿಗೆ ಎಂದರೆ ವಾಟ್ಸ್​ಆ್ಯಪ್ ಮೂಲಕವೂ ಟ್ಯಾಕ್ಸಿ ಬುಕ್ ಮಾಡಬಹುದು. ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಲು ಊಬರ್ ನಿಮಗೆ ಅನುಮತಿಸುತ್ತದೆ. ಇದರ ವಿಧಾನವು ಸಾಕಷ್ಟು ಸುಲಭವಾಗಿದೆ. ಆದರೆ, ಅನೇಕರಿಗೆ ಈ ವಿಚಾರ ತಿಳಿದಿಲ್ಲ. ಸ್ಮಾರ್ಟ್​ಫೋನ್​ನಲ್ಲಿ ಸ್ಟೋರೇಜ್ ಅಥವಾ ಇನ್ಯಾವುದೇ ಕಾರಣದಿಂದ ಅನೇಕ ಅಪ್ಲಿಕೇಶನ್‌ಗಳನ್ನು ಇಡುವುದು ಕಷ್ಟವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಆಯ್ಕೆ ನಿಮಗೆ ತುಂಬಾ ಪ್ರಯೋಜನವಾಗಲಿದೆ.

ಹೇಗೆ ಕಾರ್ಯನಿರ್ವಹಿಸುತ್ತದೆ?

ಊಬರ್ ಆ್ಯಪ್ ಅವಶ್ಯಕತೆಯಿಲ್ಲದೆಯೇ, ವಾಟ್ಸ್​ಆ್ಯಪ್​​ ಮೂಲಕ ಚಾಟ್ ಇಂಟರ್ಫೇಸ್​ನಲ್ಲಿ ನೋಂದಾಯಿಸಿಕೊಳ್ಳಬಹುದು. ಜೊತೆಗೆ ರೈಡ್​ಗಳನ್ನು ಬುಕ್ ಮಾಡಬಹುದು ಮತ್ತು ಟ್ರಿಪ್ ರಸೀದಿಗಳನ್ನು ಪಡೆಯಬಹುದಾಗಿದೆ. ಇದಕ್ಕಾಗಿ QR ಕೋಡ್ ಅನ್ನು ಸ್ಕ್ಯಾನ್ ಮಾಡುವುದು ಅಥವಾ ಊಬರ್ ವಾಟ್ಸ್​ಆ್ಯಪ್​​ ಚಾಟ್ ತೆರೆಯಲು ನೇರವಾಗಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಚಾಟ್‌ಬಾಟ್ ನಂತರ ಪಿಕಪ್ ಮತ್ತು ಡ್ರಾಪ್ ಆಫ್ ಸ್ಥಳಗಳನ್ನು ನೀಡಲು ಬಳಕೆದಾರರನ್ನು ಕೇಳುತ್ತದೆ. ಅವರು ಬುಕ್ ಮಾಡಲು ಬಯಸುವ ರೀತಿಯ ರೈಡ್ ಅನ್ನು ಆಯ್ಕೆ ಮಾಡುತ್ತದೆ.

ಇಲ್ಲಿ ಚಾಟ್‌ಬಾಟ್ ನಿಮಗೆ ಮುಂಗಡ ದರದ ಮಾಹಿತಿಯನ್ನು ನೀಡುತ್ತದೆ ಮತ್ತು ಚಾಲಕನ ಆಗಮನದ ನಿರೀಕ್ಷಿತ ಸಮಯವನ್ನು ಸಹ ನೀಡುತ್ತದೆ. ಊಬರ್​ನಲ್ಲಿ ಕೇವಲ ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಿದ ಹೊಸ ಮತ್ತು ಅಸ್ತಿತ್ವದಲ್ಲಿರುವ ಬಳಕೆದಾರರಿಗೆ ಸೇವೆಯು ಲಭ್ಯವಿದೆ. ಈ ಟೆಕ್ನಾಲಜಿಯಿಂದಾಗಿ ಪ್ರಯಾಣಿಕರು ಊಬರ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಥವಾ ಬಳಸುವ ಅಗತ್ಯವಿಲ್ಲ.

ಇದನ್ನೂ ಓದಿ: ಬಜೆಟ್ 2025 ತಯಾರಿ ಪ್ರಾರಂಭ: ಮೇಕ್ ಇನ್ ಇಂಡಿಯಾ ಮೊಬೈಲ್ ಫೋನ್‌ಗಳು ಅಗ್ಗವಾಗಲಿದೆಯೇ?

ವಾಟ್ಸ್​ಆ್ಯಪ್ ಮೂಲಕ ಊಬರ್ ಕ್ಯಾಬ್‌ಗಳನ್ನು ಬುಕ್ ಮಾಡುವುದು ಹೇಗೆ?

  • ವಾಟ್ಸ್​ಆ್ಯಪ್ ಮೂಲಕ ಊಬರ್ ಕ್ಯಾಬ್‌ಗಳನ್ನು ಬುಕ್ ಮಾಡಲು ನೀವು ನಿಮ್ಮ ಫೋನ್‌ನಲ್ಲಿ 7292000002 ಸಂಖ್ಯೆಯನ್ನು ಸೇವ್ ಮಾಡಬೇಕು.
  • ಸಂಖ್ಯೆಯನ್ನು ಉಳಿಸಿದ ನಂತರ, ನಿಮ್ಮ ಫೋನ್‌ನಲ್ಲಿ ವಾಟ್ಸ್​ಆ್ಯಪ್ ಅನ್ನು ತೆರೆಯಿರಿ ಮತ್ತು ಅದನ್ನು ರಿಫ್ರೆಶ್ ಮಾಡಿ. ಸೇವ್ ಮಾಡಿದ ಸಂಖ್ಯೆಯನ್ನು ನಿಮಗೆ ಇಲ್ಲಿ ತೋರಿಸಲಾಗುತ್ತದೆ. ಇದರ ನಂತರ, ಚಾಟ್ ವಿಭಾಗವನ್ನು ತೆರೆಯಿರಿ ಮತ್ತು ಚಾಟ್‌ನಲ್ಲಿ ಹಾಯ್ ಎಂಬ ಸಂದೇಶವನ್ನು ಕಳುಹಿಸಿ.
  • ಈಗ ಭಾಷೆಯನ್ನು ಆಯ್ಕೆ ಮಾಡಲು ನಿಮ್ಮನ್ನು ಕೇಳಲಾಗುತ್ತದೆ. ನಿಮ್ಮ ಭಾಷೆಯನ್ನು ನೀವು ಹಿಂದಿ ಅಥವಾ ಇಂಗ್ಲಿಷ್ ಅನ್ನು ಆಯ್ಕೆ ಮಾಡಬಹುದು. ಇದರ ನಂತರ ನಿಮ್ಮ ಸ್ಥಳವನ್ನು ನಮೂದಿಸಿ. ಪಿಕಪ್ ಸ್ಥಳವನ್ನು ಆಯ್ಕೆಮಾಡಿ. ಇದರ ನಂತರವೇ ನಿಮ್ಮ ಕ್ಯಾಬ್ ಅನ್ನು ಬುಕ್ ಮಾಡಲಾಗುತ್ತದೆ.
  • ನಿಮ್ಮ ವಾಟ್ಸ್​ಆ್ಯಪ್ ನಲ್ಲಿ ಚಾಲಕರ ವಿವರಗಳು ಬರುತ್ತವೆ. ಇದು ಶೇರ್ ಪಿನ್ ಮತ್ತು ಸಂಪರ್ಕ ಸಂಖ್ಯೆಯಂತಹ ವಿವರಗಳನ್ನು ಒಳಗೊಂಡಿರುತ್ತದೆ. ಚಾಲಕನಿಗೆ ಪಿನ್ ಹೇಳುವ ಮೂಲಕ ನಿಮ್ಮ ರೈಡ್ ನೀವು ಪ್ರಾರಂಭಿಸಬಹುದು.
  • ಒಂದುವೇಳೆ ನಿಮ್ಮ ಹಾಯ್ ಸಂದೇಶವನ್ನು ಕಳುಹಿಸಿದ ನಂತರ ನೀವು ಯಾವುದೇ ಉತ್ತರವನ್ನು ಪಡೆಯದಿದ್ದರೆ, ಚಿಂತಿಸಬೇಡಿ. ವಾಸ್ತವವಾಗಿ, ಈ ಸೇವೆಯು ವಿಭಿನ್ನ ಸಾಧನಗಳಲ್ಲಿ ವಿಭಿನ್ನವಾಗಿ ಕಾರ್ಯನಿರ್ವಹಿಸಬಹುದು.
  • ನೀವು ಲಾಗಿನ್ ಮಾಡಲು ಆಯ್ಕೆಯನ್ನು ಹೊಂದಿರುತ್ತೀರಿ. ನೀವು ಲಾಗಿನ್ ಅನ್ನು ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ. ನಿಮ್ಮ ನೋಂದಾಯಿತ ಸಂಖ್ಯೆಗೆ OTP ಬರುತ್ತದೆ. OTP ನಮೂದಿಸಿ ಮತ್ತು ಪಾಸ್ವರ್ಡ್ ನಮೂದಿಸಿ. ಇದರ ನಂತರ ನೀವು ನಿಮ್ಮ ಕ್ಯಾಬ್ ಅನ್ನು ಹೊಸದಾಗಿ ಬುಕ್ ಮಾಡಲು ಸಾಧ್ಯವಾಗುತ್ತದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?