Tech Tips: ವಾಟ್ಸ್​ಆ್ಯಪ್​ನಲ್ಲಿ ಆಧಾರ್, ಪಾನ್ ಕಾರ್ಡ್ ಡೌನ್​ಲೋಡ್ ಮಾಡೋದು ಹೇಗೆ?

MyGov ಹೆಲ್ಪ್‌ಡೆಸ್ಕ್ ವಾಟ್ಸ್​ಆ್ಯಪ್​ಗೆಂದು ಸಹಾಯವಾಣಿ ನಂಬರ್ ಒಂದನ್ನು ನೀಡಿದ್ದು ಇದರ ಸಹಾಯದಿಂದ ಡಿಜಿಲಾಕರ್ ಖಾತೆಗೆ ಸೈನ್ ಅಪ್ ಆಗುವ ಮೂಲಕ ದಾಖಲೆಗಳನ್ನು ನೀವು ವಾಟ್ಸ್​ಆ್ಯಪ್ ಮೂಲಕ ಪಡೆಯಬಹುದು. ನೀವು ಈಗಾಗಲೇ ಡಿಜಿಲಾಕರ್ ಅಕೌಂಟ್ ಅನ್ನು ಹೊಂದಿದ್ದರೆ, ಈ ದಾಖಲೆಗಳನ್ನು ಪಡೆಯುವುದು ಮತ್ತಷ್ಟು ಸುಲಭವಾಗುತ್ತದೆ.

Tech Tips: ವಾಟ್ಸ್​ಆ್ಯಪ್​ನಲ್ಲಿ ಆಧಾರ್, ಪಾನ್ ಕಾರ್ಡ್ ಡೌನ್​ಲೋಡ್ ಮಾಡೋದು ಹೇಗೆ?
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 06, 2025 | 3:27 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್​ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಕೇವಲ ಚಾಟ್ ಮಾಡಲು, ಫೋಟೋ, ವಿಡಿಯೋ ಕಳುಹಿಸಲು ಮಾತ್ರ ಸೀಮಿತವಾಗಿಲ್ಲ. ಇದುಬಿಟ್ಟು ಅನೇಕ ಪ್ರಯೋಜನಗಳಿವೆ. ಭಾರತದಲ್ಲಿ ವಾಟ್ಸ್​ಆ್ಯಪ್ ಬಳಕೆದಾರರು ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ವಿಮಾ ಪಾಲಿಸಿ ಸೇರಿದಂತೆ ಅನೇಕ ದಾಖಲೆಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಇದಕ್ಕಾಗಿ MyGov ತನ್ನ ವಾಟ್ಸ್​ಆ್ಯಪ್ ಚಾಟ್‌ಬಾಟ್‌ನಲ್ಲಿ ಸೇವೆಯನ್ನು ನೀಡಿದ್ದು, ಇದರ ಸಹಾಯದಿಂದ ‘ಡಿಜಿಲಾಕರ್‘ ಖಾತೆಯನ್ನು ರಚಿಸುವುದು ಮತ್ತು ದೃಢೀಕರಿಸುವುದು ಮತ್ತು ಪ್ಯಾನ್ ಕಾರ್ಡ್, ಆಧಾರ್, ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಪ್ರಮಾಣಪತ್ರದಂತಹ ಡಾಕ್ಯುಮೆಂಟ್‌ಗಳನ್ನು ಡೌನ್‌ಲೋಡ್ ಮಾಡಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ.

MyGov ಹೆಲ್ಪ್‌ಡೆಸ್ಕ್ ವಾಟ್ಸ್​ಆ್ಯಪ್​ಗೆಂದು ಸಹಾಯವಾಣಿ ನಂಬರ್ ಒಂದನ್ನು ನೀಡಿದ್ದು ಇದರ ಸಹಾಯದಿಂದ ಡಿಜಿಲಾಕರ್ ಖಾತೆಗೆ ಸೈನ್ ಅಪ್ ಆಗುವ ಮೂಲಕ ದಾಖಲೆಗಳನ್ನು ನೀವು ವಾಟ್ಸ್​ಆ್ಯಪ್​ನಲ್ಲೇ ಪಡೆಯಬಹುದು. ನೀವು ಈಗಾಗಲೇ ಡಿಜಿಲಾಕರ್ ಅಕೌಂಟ್ ಅನ್ನು ಹೊಂದಿದ್ದರೆ, ದಾಖಲೆಗಳನ್ನು ಪಡೆಯುವುದು ಮತ್ತಷ್ಟು ಸುಲಭವಾಗುತ್ತದೆ.

ವಾಟ್ಸ್​ಆ್ಯಪ್ ಮೂಲಕ ಆಧಾರ್-ಪಾನ್ ಡೌನ್​ಲೋಡ್ ಹೇಗೆ?:

ಮೊದಲು +91-9013151515 ಈ ನಂಬರ್ ಅನ್ನು MyGov HelpDesk ಎಂದು ನಿಮ್ಮ ಫೋನ್​ನಲ್ಲಿ ಸೇವ್ ಮಾಡಿ.

ನಂತರ ವಾಟ್ಸ್​ಆ್ಯಪ್ ತೆರೆದು MyGov HelpDesk ಚಾಟ್‌ಬಾಟ್​ನಲ್ಲಿ ‘ನಮಸ್ತೆ‘, ‘ಹಾಯ್‘ ಎಂದು ಟೈಪ್ ಮಾಡಿ ಕಳುಹಿಸಿ.

ಆಗ ಡಿಜಿಲಾಕರ್ ಅಥವಾ ಕೋವಿನ್ ಸೇವೆ ಎಂಬ ಎರಡು ಆಯ್ಕೆ ಕಾಣಿಸುತ್ತದೆ. ಇಲ್ಲಿ ‘ಡಿಜಿಲಾಕರ್ ಸೇವೆಗಳು‘ ಆಯ್ಕೆಮಾಡಿ.

ಈಗ ನೀವು ಡಿಜಿಲಾಕರ್ ಖಾತೆಯನ್ನು ಹೊಂದಿದ್ದೀರಾ ಎಂದು ಚಾಟ್‌ಬಾಟ್ ಕೇಳಿದಾಗ ‘ಹೌದು‘ ಟ್ಯಾಪ್ ಮಾಡಿ.

ನೀವು ಖಾತೆ ಹೊಂದಿಲ್ಲದಿದ್ದರೆ ಅಧಿಕೃತ ವೆಬ್‌ಸೈಟ್ ಅಥವಾ ಡಿಜಿಲಾಕರ್ ಅಪ್ಲಿಕೇಶನ್‌ಗೆ ಭೇಟಿ ನೀಡುವ ಮೂಲಕ ನಿಮ್ಮ ಖಾತೆಯನ್ನು ರಚಿಸಿ.

ಚಾಟ್‌ಬಾಟ್ ಈಗ ನಿಮ್ಮ ಡಿಜಿಲಾಕರ್ ಖಾತೆಯನ್ನು ಲಿಂಕ್ ಮಾಡಲು ಮತ್ತು ದೃಢೀಕರಿಸಲು ನಿಮ್ಮ 12-ಅಂಕಿಯ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕಳುಹಿಸಿ.

ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೀವು OTP ಅನ್ನು ಸ್ವೀಕರಿಸುತ್ತೀರಿ. ಅದನ್ನು ಚಾಟ್‌ಬಾಟ್ ನಲ್ಲಿ ನಮೂದಿಸಿ.

ಈಗ ಚಾಟ್‌ಬಾಟ್ ಪಟ್ಟಿಗಳು ನಿಮ್ಮ ಡಿಜಿಲಾಕರ್ ಖಾತೆಯೊಂದಿಗೆ ಲಿಂಕ್ ಮಾಡಲಾದ ಎಲ್ಲಾ ದಾಖಲೆಗಳನ್ನು ನಿಮಗೆ ತೋರಿಸುತ್ತದೆ.

ಡೌನ್‌ಲೋಡ್ ಮಾಡಲು, ಕಳುಹಿಸಲಾದ ಡಾಕ್ಯುಮೆಂಟ್ ಸಂಖ್ಯೆಯನ್ನು ಟೈಪ್ ಮಾಡಿ ಮತ್ತು ಕಳುಹಿಸಿ.

ಆಗ ನಿಮ್ಮ ಡಾಕ್ಯುಮೆಂಟ್ PDF ರೂಪದಲ್ಲಿ ಚಾಟ್ ಬಾಕ್ಸ್‌ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿರುತ್ತದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್