Tech Tips: ವಾಟ್ಸ್​ಆ್ಯಪ್​ನಲ್ಲಿ ಹೆಚ್ಚುತ್ತಿದೆ ಸ್ಕ್ಯಾಮ್: ಫೇಕ್ ಮೆಸೇಜ್​ಗಳನ್ನು ಈಗ ನೀವೇ ಕಂಡುಹಿಡಿಯಿರಿ

WhatsApp Tips: ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್ಆ್ಯಪ್​ನಲ್ಲಿ ಹರಿದಾಡುತ್ತಿರುತ್ತದೆ. ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್, ಫ್ರೀ ಮೊಬೈಲ್, ಪ್ರಸಿದ್ಧ ಇ ಕಾಮರ್ಸ್ ತಾಣಗಳ ಫೇಕ್ ಆಫರ್ ಹೀಗೆ ಈರೀತಿಯ ಅನೇಕ ಮೆಸೇಜ್​ಗಳು ವೈರಲ್ ಆಗುತ್ತವೆ.

Tech Tips: ವಾಟ್ಸ್​ಆ್ಯಪ್​ನಲ್ಲಿ ಹೆಚ್ಚುತ್ತಿದೆ ಸ್ಕ್ಯಾಮ್: ಫೇಕ್ ಮೆಸೇಜ್​ಗಳನ್ನು ಈಗ ನೀವೇ ಕಂಡುಹಿಡಿಯಿರಿ
WhatsApp
Updated By: Vinay Bhat

Updated on: Dec 27, 2022 | 6:27 AM

ಮೆಟಾ (Meta) ಮಾಲೀಕತ್ವದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್​ನಲ್ಲಿ ಈಗೀಗ ಸ್ಕ್ಯಾಮ್ ಮೆಸೇಜ್‌ಗಳು ಬರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ದಿನಕ್ಕೊಂದರಂತೆ ವಂಚನೆಯ ಮೆಸೇಜ್‌ಗಳು ವಾಟ್ಸ್ಆ್ಯಪ್​ನಲ್ಲಿ ಹರಿದಾಡುತ್ತಿರುತ್ತದೆ. ಅನ್‌ಲಿಮಿಟೆಡ್ ಡೇಟಾ, ಉಚಿತ ರೀಚಾರ್ಜ್, ಫ್ರೀ ಮೊಬೈಲ್, ಇ ಕಾಮರ್ಸ್ ತಾಣಗಳ ಫೇಕ್ ಆಫರ್ ಹೀಗೆ ಈರೀತಿಯ ಅನೇಕ ಮೆಸೇಜ್​ಗಳು ವೈರಲ್ (Viral) ಆಗುತ್ತವೆ. ಕೆಲ ವಾಟ್ಸ್ಆ್ಯಪ್ (WhatsApp) ಬಳಕೆದಾರರು ಸ್ಕ್ಯಾಮ್‌ ಮೆಸೇಜ್‌ಗಳನ್ನು ಪಡೆಯುವುದು ಮತ್ತು ಹಲವು ಲಿಂಕ್‌ಗಳ ಮೇಲೆ ಕ್ಲಿಕ್ ಮಾಡುವುದರಿಂದ ತಮ್ಮ ವೈಯಕ್ತಿಕ ಡೇಟಾವನ್ನು ಗೊತ್ತಿಲ್ಲದೇ ವಂಚಕರಿಗೆ ಶೇರ್‌ ಮಾಡುತ್ತಿರುವುದು ಅವರಿಗೆ ತಿಳಿಯದೇ ಆಗುತ್ತಿರುವ ಚಟುವಟಿಕೆ ಆಗಿದೆ.

ವಾಟ್ಸ್​ಆ್ಯಪ್​ನಲ್ಲಿ ಬಂದ ಸ್ಕ್ಯಾಮ್‌ ಮೆಸೇಜ್‌ಗಳ ಮೇಲೆ ಕ್ಲಿಕ್ ಮಾಡಿ ಹಣ ಕಳೆದುಕೊಂಡು ಮೋಸಹೋದವರು ಕೂಡ ಇದ್ದಾರೆ. ಆದ್ದರಿಂದ ಇಂದಿನ ಲೇಖನದಲ್ಲಿ ಫೇಕ್ ಮೆಸೇಜ್‌ ಮತ್ತು ವಂಚಕರ ವೆಬ್‌ಸೈಟ್‌ಗಳ ಲಿಂಕ್‌ಗಳನ್ನು ವಾಟ್ಸ್ಆ್ಯಪ್ ಬಳಕೆದಾರರು ಹೇಗೆ ಪತ್ತೆಹಚ್ಚಬಹುದು ಎಂದು ತಿಳಿಸುತ್ತಿದ್ದೇವೆ.

ಉಚಿತ ಮತ್ತು ಅನ್‌ಲಿಮಿಟೆಡ್ ಸಾಮಾನ್ಯವಾಗಿ ಫೇಕ್‌:

ಸಾಮಾನ್ಯವಾಗಿ ಹೆಚ್ಚಿನ ಫೇಕ್‌ ಮೆಸೇಜ್‌ಗಳು ಉಚಿತ ಮತ್ತು ಅನ್‌ಲಿಮಿಟೆಡ್ ಎಂಬ ಸೇವೆ ಕುರಿತು ಇರುತ್ತವೆ. ಉದಾಹರಣೆಗೆ ಬಿಎಸ್‌ಎನ್‌ಎಲ್‌ ಮತ್ತು ಏರ್‌ಟೆಲ್‌ 4G ಅನ್‌ಲಿಮಿಟೆಡ್ ಡೇಟಾ, ಉಚಿತ ವಾಯ್ಸ್ ಕರೆ ಆಫರ್‌ಗಳನ್ನು ನೀಡುತ್ತಿವೆ ಎಂದು ಫೇಕ್‌ ಮೆಸೇಜ್‌ಗಳನ್ನು ಹರಿಯಬಿಡಲಾಗಿತ್ತು. ಇಂತಹ ಮೆಸೇಜ್‌ಗಳನ್ನು ಎಂದಿಗೂ ತೆರೆಯಬೇಡಿ.

ಇದನ್ನೂ ಓದಿ
Infinix Zero Ultra: 200MP ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?
Year Ender 2022: ಅತ್ಯುತ್ತಮ ಫೀಚರ್​ಗಳಿದ್ದರೂ ಈ ವರ್ಷ ಮಾರುಕಟ್ಟೆಯಲ್ಲಿ ಫೇಲ್ ಸ್ಮಾರ್ಟ್​ಫೋನ್​ಗಳು ಯಾವುವು?
Tech Tips: ಪೇಟಿಯಂ ಆ್ಯಪ್ ಮೂಲಕ ರೈಲು ಎಲ್ಲಿದೆ ಎಂದು ಟ್ರ್ಯಾಕ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್
Redmi Note 12 Series: ಬರೋಬ್ಬರಿ 200MP ಕ್ಯಾಮೆರಾ: ಇದುವೇ ನೋಡಿ ಹೊಸ ವರ್ಷ ಬಿಡುಗಡೆ ಆಗುವ ಮೊದಲ ಸ್ಮಾರ್ಟ್​ಫೋನ್

WhatsApp: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಸಿಕ್ಕ ಸಿಕ್ಕ ಸ್ಟೇಟಸ್ ಹಾಕುವಂತಿಲ್ಲ: ಬರುತ್ತಿದೆ ಹೊಸ ರೂಲ್ಸ್

ಸ್ಪೆಲ್ಲಿಂಗ್ ದೋಷಗಳನ್ನು ಪರಿಶೀಲಿಸಿ:

ಅಧಿಕೃತ ನ್ಯೂಸ್‌ ಮೆಸೇಜ್‌ಗಳು ಯಾವುದೇ ಅಕ್ಷರ ದೋಷ ಹೊಂದಿರುವುದಿಲ್ಲ. ಆದರೆ ವಾಟ್ಸ್ಆ್ಯಪ್​ನಲ್ಲಿ ಹೆಚ್ಚು ಫಾರ್ವರ್ಡ್ ಮಾಡಲಾದ ಫೇಕ್‌ ಮೆಸೇಜ್‌ಗಳು ಹೆಚ್ಚು ಅಕ್ಷರ ದೋಷಗಳು, ಸ್ಪೆಲ್ಲಿಂಗ್‌ ತಪ್ಪುಗಳನ್ನು ಹೊಂದಿರುತ್ತವೆ. ಆದ್ದರಿಂದ ಎಚ್ಚರ ವಹಿಸಿ ಓದಿ.

ಲಿಂಕ್‌ ಹೊಂದಿದೆಯೇ?:

ಅಧಿಕೃತವಾಗಿ ಪ್ರಕಟಿಸಲಾದ ಮೆಸೇಜ್ ಸಾಮಾನ್ಯವಾಗಿ ಲಿಂಕ್‌ ಹೊಂದಿರುವುದಿಲ್ಲ. ಆದರೆ ಫೇಕ್‌ ಮೆಸೇಜ್‌ಗಳು ಲಿಂಕ್‌ ಅನ್ನು ಹೊಂದಿರುತ್ತವೆ. ಉದಾಹರಣೆ ಬಿಎಸ್‌ಎನ್‌ಎಲ್‌ ಕುರಿತ ಅನ್‌ಲಿಮಿಟೆಡ್ ಡೇಟಾ ಮತ್ತು ವಾಯ್ಸ್ ಕರೆ ಕುರಿತ ಫೇಕ್‌ ಮೆಸೇಜ್‌ http://www.bsni.in/ ಲಿಂಕ್‌ ಅನ್ನು ಹೊಂದಿದೆ. ಯುಆರ್‌ಎಲ್‌ ಗಮನಿಸಿ. ಇಂತಹ ತಪ್ಪು ಯುಆರ್‌ಎಲ್‌ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡದಿರಿ ಹಾಗೂ ಫಾರ್ವರ್ಡ್‌ ಸಹ ಮಾಡದಿರಿ.

ಅಧಿಕೃತ ಮಾಹಿತಿಗಳಿಂದ ಖಚಿತ ಪಡಿಸಿಕೊಳ್ಳಿ:

ವಾಟ್ಸ್ಆ್ಯಪ್​ನಲ್ಲಿ ಬಂದ ಅನ್‌ಲಿಮಿಟೆಡ್‌ ಮತ್ತು ಉಚಿತ ಸೇವೆಗಳ ಮೆಸೇಜ್‌ಗಳನ್ನು ನಂಬುವ ಮೊದಲು ಟೆಲಿಕಾಂ ಆಪರೇಟರ್‌ಗಳಿಂದ ಖಚಿತಪಡೆದುಕೊಳ್ಳಿ. ಅಲ್ಲದೇ ಮಾಹಿತಿ ಲಿಂಕ್ ಅಧಿಕೃತ ವೆಬ್‌ಸೈಟ್‌ಗಳದ್ದೇ ಎಂಬುದನ್ನು ತಿಳಿಯಿರಿ.

ಈ ರೀತಿಯ ಮೆಸೇಜ್‌ಗಳನ್ನು ತಪ್ಪಿಸಿ:

ವಾಟ್ಸ್ಆ್ಯಪ್ ಮೆಸೇಜ್‌ಗಳು ಉಚಿತ ರೀಚಾರ್ಜ್‌, ಅನ್‌ಲಿಮಿಟೆಡ್, ಹಣ ಬಹುಮಾನ ಬಂದಿರುವ ಬಗ್ಗೆ ಭರವಸೆ ನೀಡಿ, ಮೆಸೇಜ್‌ ಅನ್ನು 10 ಜನರಿಗೆ ಫಾರ್ವರ್ಡ್ ಮಾಡಿ ಎಂದು ಹೇಳುತ್ತವೆ. ಆದ್ದರಿಂದ ಮೆಸೇಜ್‌ಗಳನ್ನು ಓದುವ ಬದಲು ವಾಟ್ಸ್ಆ್ಯಪ್ ಶಟ್‌ಡೌನ್‌ ಮಾಡಿ, ಮೆಸೇಜ್‌ ಕಡೆಗಣಿಸಿ ಬಿಡಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ