Tech Tips: ಎರಡು ಸ್ಮಾರ್ಟ್ಫೋನ್ನಲ್ಲಿ ಒಂದೇ ನಂಬರ್ನ ವಾಟ್ಸ್ಆ್ಯಪ್ ಅಕೌಂಟ್ ಬಳಸುವುದು ಹೇಗೆ?
WhatsApp Trick: ಫೇಸ್ಬುಕ್, ಇನ್ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಉಪಯೋಗಿಸಲು ಸಾಧ್ಯವೇ?. ಇದಕ್ಕಾಗಿ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್ ಇದೆ. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.
ವಾಟ್ಸ್ಆ್ಯಪ್ ಕಳೆದ ವರ್ಷ ಸಾಕಷ್ಟು ಬೆಳವಣಿಗೆ ಕಂಡಿತು. ಅತಿ ಹೆಚ್ಚು ನೂತನ ಫೀಚರ್ಗಳನ್ನು 2022 ರಲ್ಲಿ ಬಿಡುಗಡೆ ಮಾಡಿದೆ. ಈ ವರ್ಷ ಕೂಡ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಅನೇಕ ಅಪ್ಡೇಟ್ ನೀಡುವಲ್ಲಿ ಕೆಲಸ ಮಾಡುತ್ತಿದೆ. ಆಂಡ್ರಾಯ್ಡ್, ಐಒಎಸ್ಗೆ ಮಾತ್ರವಲ್ಲದೆ ಈಗೀಗ ವೆಬ್ ಬಳಕೆದಾರರಿಗೆ, ಟ್ಯಾಬ್ಲೆಟ್ನವರಿಗೆ ಕೂಡ ವಿನೂತನ ಫೀಚರ್ಗಳನ್ನು ನೀಡುತ್ತಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್ಆ್ಯಪ್ (WhatsApp) ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. ಆದರೆ, ಫೇಸ್ಬುಕ್, ಇನ್ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೀಗ ವರದಿಯ ಪ್ರಕಾರ ವಾಟ್ಸ್ಆ್ಯಪ್ ಕಂಪ್ಯಾನಿಯನ್ ಮೋಡ್ (Companion Mode) ಆಯ್ಕೆ ನೀಡಲು ಮುಂದಾಗಿದೆ.
ವಾಟ್ಸ್ಆ್ಯಪ್ನ ಈ ಹೊಸ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್ಆ್ಯಪ್ ಬಳಸಬಹುದಂತೆ. ಅಂದರೆ ನಿಮ್ಮ ವಾಟ್ಸ್ಆ್ಯಪ್ ಆಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್ ಸ್ಕ್ಯಾನ್ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್ ಲಿಂಕ್ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.
Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ ಮೋಟೋ G73 5G ಫೋನ್ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?
ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್ ಟು ಎಂಡ್ ಎನ್‌ಕ್ರಿಪ್ಯನ್ ಮೂಲಕ ಕಾರ್ಯನಿರ್ವಹಿಸಲಿದೆ. ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ ಐಒಎಸ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಮೆಸೇಜ್ ಬಂದರೆ ನಂಬರ್ ಕಾಣಿಸುವುದಿಲ್ಲ:
ವಾಟ್ಸ್ಆ್ಯಪ್ ಮತ್ತೊಂದು ಹೊಸ ಫೀಚರ್ ಬಗ್ಗೆ ಘೋಷಣೆ ಮಾಡಿದೆ. ಅದುವೇ ಗ್ರೂಪ್‌ನಲ್ಲಿ ಫೋನ್ ನಂಬರ್ ಬದಲಿಗೆ ಹೆಸರು ಕಾಣಿಸುವಂತಹ ಆಯ್ಕೆ. ಅಂದರೆ ಬಳಕೆದಾರರು ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಯಾವುದೇ ಅಪರಿಚಿತ ಸಂಪರ್ಕದಿಂದ ಸಂದೇಶವನ್ನು ಸ್ವೀಕರಿಸಿದರೆ ಚಾಟ್ ಪಟ್ಟಿಯೊಳಗೆ ಬಳಕೆದಾರರ ಫೋನ್ ಸಂಖ್ಯೆ ಬದಲಿಗೆ ಹೆಸರುಗಳನ್ನು ತೋರಿಸುತ್ತದೆ. ಈ ಮೂಲಕ ನಂಬರ್ ಸೇವ್ ಮಾಡದೆ ಮೆಸೇಜ್ ಕಳುಹಿಸಿದವರು ಯಾರೆಂದು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ.
ಈ ಫೀಚರ್ನ ಮತ್ತೊಂದು ಉಪಯೋಗ ಎಂದರೆ ದೊಡ್ಡ ಗ್ರೂಪ್ ಇದ್ದಾಗ ಅದರಲ್ಲಿ ಅನೇಕ ಸದಸ್ಯರು ಇರುತ್ತರೆ. ಆದರೆ, ಈ ಎಲ್ಲರ ಹೆಸರುಗಳನ್ನು ನೆನಪಿನಲ್ಲಿ ಇಡುವುದು ಅಥವಾ ಎಲ್ಲರ ಸಂಖ್ಯೆಗಳನ್ನು ಸೇವ್ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೀಗ ವಾಟ್ಸ್ಆ್ಯಪ್ ಪರಿಚಯಿಸಲಿರುವ ಈ ಹೊಸ ಫೀಚರ್ನಲ್ಲಿ ಸಂಖ್ಯೆಯ ಬದಲಿಗೆ ಹೆಸರನ್ನು ತೋರಿಸಲಾಗುವುದರಿಂದ ಯಾರು ಮೆಸೆಜ್ ಕಳುಹಿಸಿದ್ದಾರೆ ಎಂಬುದನ್ನು ಸುಲಭವಗಿ ಕಂಡುಹಿಡಿಯಬಹುದು.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ