Tech Tips: ಎರಡು ಸ್ಮಾರ್ಟ್ಫೋನ್ನಲ್ಲಿ ಒಂದೇ ನಂಬರ್ನ ವಾಟ್ಸ್ಆ್ಯಪ್ ಖಾತೆ ತೆರೆಯಬಹುದೇ?
WhatsApp Tricks: ಫೇಸ್ಬುಕ್, ಇನ್ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೆ ವಾಟ್ಸ್ಆ್ಯಪ್ ಕಂಪ್ಯಾನಿಯನ್ ಮೋಡ್ ಆಯ್ಕೆ ನೀಡಲಾಗಿದೆ.
ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಕಳೆದ ವರ್ಷ ಸಾಕಷ್ಟು ಬೆಳವಣಿಗೆ ಕಂಡಿದೆ. ಅತಿ ಹೆಚ್ಚು ನೂತನ ಫೀಚರ್ಗಳನ್ನು 2022 ರಲ್ಲಿ ಬಿಡುಗಡೆ ಮಾಡಿದೆ. ಈ ವರ್ಷ ಕೂಡ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಅನೇಕ ಅಪ್ಡೇಟ್ ನೀಡುವಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್ಆ್ಯಪ್ (WhatsApp) ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್ಆ್ಯಪ್ನಲ್ಲಿ ಸಾಲು ಸಾಲು ಅಪ್ಡೇಟ್ಗಳು ಬರಲು ಪರೀಕ್ಷಾ ಹಂತದಲ್ಲಿದೆ. ಆದರೆ, ಫೇಸ್ಬುಕ್, ಇನ್ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೆ ವಾಟ್ಸ್ಆ್ಯಪ್ನಲ್ಲಿ ಕಂಪ್ಯಾನಿಯನ್ ಮೋಡ್ ಆಯ್ಕೆ ನೀಡಲಾಗಿದೆ.
ವಾಟ್ಸ್ಆ್ಯಪ್ನ ಈ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್ಆ್ಯಪ್ ಬಳಸಬಹುದು. ಅಂದರೆ ನಿಮ್ಮ ವಾಟ್ಸ್ಆ್ಯಪ್ ಆಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್ ಸ್ಕ್ಯಾನ್ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್ ಲಿಂಕ್ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.
APPLE Store: ದೇಶದ ಮೊದಲ ಮುಂಬೈ ಸ್ಟೋರ್ಗೆ ಆ್ಯಪಲ್ ಸಿಇಒ ಟಿಮ್ ಕುಕ್ ಚಾಲನೆ
ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್ ಟು ಎಂಡ್ ಎನ್‌ಕ್ರಿಪ್ಯನ್ ಮೂಲಕ ಕಾರ್ಯನಿರ್ವಹಿಸಲಿದೆ. ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ ಐಒಎಸ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ:
ವಾಟ್ಸ್ಆ್ಯಪ್ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಅಂದರೆ ನೀವು ವಾಟ್ಸ್ಆ್ಯಪ್ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್ಬುಕ್ ಸ್ಟೇಟಸ್ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್ಬುಕ್ ಸ್ಟೇಟಸ್ಗೂ ಅಪ್ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್ಆ್ಯಪ್ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಈಗಾಗಲೇ ಈ ಫೀಚರ್ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ