Tech Tips: ಹೊಸ ಸ್ಮಾರ್ಟ್​ಫೋನ್ ಖರೀದಿಸುವಾಗ ಕನಿಷ್ಠ ಈ ವಿಚಾರ ನೆನಪಿರಲಿ

ಯಾವುದೇ ಸ್ಮಾರ್ಟ್‌ಪೋನ್‌ ಖರಿದೀಸುವ ಮುನ್ನ ಆ ಪೋನಿನ ಡಿಸ್‌ಪ್ಲೇ ಎಷ್ಟು ಅಗಲ ಮತ್ತು ಉದ್ದ ಇದೆ ಎಂದು ನೋಡಿ ಖರೀದಿಸುತ್ತಾರಂತೆ. ಆದರೆ, ನಿಮಗೆ ಗೊತ್ತಾ? 100 ಜನ ಸ್ಮಾರ್ಟ್‌ಫೋನ್ ಖರೀದಿದಾರರಲ್ಲಿ 90 ಜನರಿಗೆ ತಮ್ಮ ಸ್ಕ್ರೀನ್ ಗುಣಮಟ್ಟ ಎಷ್ಟಿದೆ ಎಂಬುದೇ ತಿಳಿದಿರುವುದಿಲ್ಲ.

Tech Tips: ಹೊಸ ಸ್ಮಾರ್ಟ್​ಫೋನ್ ಖರೀದಿಸುವಾಗ ಕನಿಷ್ಠ ಈ ವಿಚಾರ ನೆನಪಿರಲಿ
Smartphones
Follow us
Vinay Bhat
|

Updated on: May 13, 2023 | 6:55 AM

ಇಂದಿನ ದಿನಗಳಲ್ಲಿ ಮೊಬೈಲ್ (Mobile) ಎಂಬುದು ದೊಡ್ಡ ವಿಷಯವೇ ಅಲ್ಲ. ಎಲ್ಲದರೂ ಸ್ಮಾರ್ಟ್​ಫೋನ್ (Smartphone) ಕಳೆದು ಹೋದಲ್ಲಿ, ಕಳುವಾದರೆ ಅದನ್ನು ಹುಡುಕುವ ಕೆಲಸಕ್ಕೆಲ್ಲ ಯಾರು ಹೋಗುವುದಿಲ್ಲ. ಮತ್ತೊಂದು ಹೊಸ ಫೋನನ್ನು ಖರೀದಿ ಮಾಡುತ್ತಾರೆ. ಯಾಕೆಂದರೆ ಈಗ ಕೈಗೆಟಕುವ ದರದಲ್ಲಿ ಮೊಬೈಲ್​ಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಲವು ವರದಿಗಳ ಪ್ರಕಾರ ಹೆಚ್ಚಿನವರು ಯಾವುದೇ ಸ್ಮಾರ್ಟ್‌ಪೋನ್‌ ಖರಿದೀಸುವ ಮುನ್ನ ಆ ಸ್ಮಾರ್ಟ್‌ಪೋನಿನ ಡಿಸ್‌ಪ್ಲೇ (Display) ಎಷ್ಟು ಅಗಲ ಮತ್ತು ಉದ್ದ ಇದೆ ಎಂದು ನೋಡಿ ಪೋನ್ ಖರೀದಿಸುತ್ತಾರಂತೆ. ಇನ್ನು ಸ್ವಲ್ಪ ಹೆಚ್ಚು ತಿಳಿದವರಾದರೆ, ಆ ಪೋನಿನ ವೇಗ ಎಷ್ಟು, ಸಾಫ್ಟ್‌ವೇರ್ ಯಾವುದು ಎಂದೆಲ್ಲ ಚೆಕ್ ಮಾಡುತ್ತಾರಂತೆ. ಆದರೆ, ನಿಮಗೆ ಗೊತ್ತಾ? 100 ಜನ ಸ್ಮಾರ್ಟ್‌ಫೋನ್ ಖರೀದಿದಾರರಲ್ಲಿ 90 ಜನರಿಗೆ ತಮ್ಮ ಸ್ಮಾರ್ಟ್‌ಫೋನ್ ಸ್ಕ್ರೀನ್ ಗುಣಮಟ್ಟ ಎಷ್ಟಿದೆ ಎಂಬುದೇ ತಿಳಿದಿರುವುದಿಲ್ಲ.

ಹೌದು, ಇತ್ತೀಚಿನ ಸ್ಮಾರ್ಟ್‌ಫೋನುಗಳಲ್ಲಿ ಹೆಚ್ಚು ಪ್ರಮುಖವಾದುದು ಅದರ ಡಿಸ್‌ಪ್ಲೇ. ಆ ಫೋನಿನ ಡಿಸ್‌ಪ್ಲೇಯಲ್ಲಿ ಏನಾದರೂ ಸ್ವಲ್ಪ ವ್ಯತ್ಯಾಸವಾದರೂ ಆ ಸ್ಮಾರ್ಟ್‌ಫೋನ್ ಉಪಯೋಗಕ್ಕೆ ಬರುವುದಿಲ್ಲ ಎನ್ನುವುದು ತಿಳಿದಿದೆ. ಆದರೂ, ಯಾವೋರ್ವರು ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಗುಣಮಟ್ಟ ಹೇಗಿದೆ ಎಂಬುದನ್ನು ಪರಿಶೀಲೀಸದೇ ಸ್ಮಾರ್ಟ್‌ಪೋನ್ ಖರೀದಿಸುತ್ತಿದ್ದಾರೆ ಎಂದರೆ, ಅವರು ಖಂಡಿತವಾಗಿಯೂ ಮೋಸ ಹೋಗುತ್ತಿದ್ದಾರೆ ಎಂದರ್ಥ.

ಈಗಿನ ಡಿಜಿಟಲ್ ಯುಗದಲ್ಲಿ ಅನೇಕ ಫೋನ್‌ಗಳು ಲಭ್ಯವಿದ್ದು ಅವುಗಳ ಡಿಸ್‌ಪ್ಲೇ ಬದಲಾಗುತ್ತಲೇ ಇರುತ್ತದೆ. ಡಿಸ್‌ಪ್ಲೇ ವಿಷಯಕ್ಕೆ ಬಂದಾಗ ಇದಕ್ಕೆ ಸಂಬಂಧಿಸಿದ ಹಲವಾರು ಅಂಶಗಳತ್ತ ಕೂಡ ಗಮನ ಹರಿಸಬೇಕಾಗಿದೆ. ಪಿಕ್ಸೆಲ್, ರೆಸಲ್ಯೂಶನ್, ಪಿಪಿಐ ಹೀಗೆಯೇ ಇನ್ನಷ್ಟು ಅಂಶಗಳು ಪ್ರಾಧಾನ್ಯತೆಯನ್ನು ಪಡೆದುಕೊಳ್ಳುತ್ತವೆ. ಅಂತೆಯೇ ಫೋನ್ ಗುಣಮಟ್ಟ, ಬೆಲೆಯನ್ನು ಈ ಡಿಸ್‌ಪ್ಲೇಗಳು ಆಧರಿಸಿವೆ. ಹಾಗಾಗಿ, ನಿಮ್ಮ ಸ್ಕ್ರೀನ್ ಡೆನ್ಸಿಟಿ ವ್ಯಾಲ್ಯೂವನ್ನು ಕಂಡುಕೊಳ್ಳುವುದು ಹೇಗೆ ಎಂಬ ಅಂಶವನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.

ಇದನ್ನೂ ಓದಿ
Image
Redmi K50i: ಕಳೆದ ವರ್ಷ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ರೆಡ್ಮಿ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ
Image
Tech Tips: ಇನ್ನುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ: ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ
Image
Nokia C22: ಕೇವಲ 7,999 ರೂ. ಗೆ ಹೊಸ ನೋಕಿಯಾ C22 ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್ ಏನಿದೆ ನೋಡಿ
Image
General Knowledge: ಕ್ಯಾಮೆರಾ ಎಂಬ ಮಾಯಾಜಾಲ ಮೊಬೈಲ್​​​ ಫೋನ್‌ ಬಲಭಾಗದಲ್ಲಿಯೇ ಇರುತ್ತದೆ ಏಕೆ?

Poco F5 Pro 5G: ದೇಶದ ಗ್ಯಾಜೆಟ್ ಮಾರುಕಟ್ಟೆಗೆ ಹೊಸ ಪೋಕೊ ಫೋನ್ ಬಿಡುಗಡೆ

ಪಿಪಿಐ ಎಂದರೇನು?: ಪಿಪಿಐ ಎಂದರೆ ಪಿಕ್ಸೆಲ್ಸ್ ಪರ್ ಇಂಚ್. ಇಲೆಕ್ಟ್ರಾನಿಕ್ ಇಮೇಜ್ ಸಾಧನದಲ್ಲಿರುವ ಪಿಕ್ಸೆಲ್ ಡೆನ್ಸಿಟಿಯ ಅಳತೆಯನ್ನು ಇದು ಒಳಗೊಂಡಿದೆ. ಕಂಪ್ಯೂಟರ್ ಮಾನಿಟರ್ ಅಥವಾ ಟಿವಿ ಡಿಸ್‌ಪ್ಲೇ, ಕ್ಯಾಮೆರಾ ಅಥವಾ ಇಮೇಜ್ ಸ್ಕ್ಯಾನರ್‌ನಲ್ಲಿ ಪಿಪಿಐ ಯನ್ನು ಕಂಡುಕೊಳ್ಳಬಹುದು. ಡಿಸ್‌ಪ್ಲೇ ಸ್ಕ್ರೀನ್‌ನಲ್ಲಿರುವ ಪಾಯಿಂಟ್‌ಗಳ ತೀಕ್ಷ್ಣತೆಯ ಅಳತೆಯನ್ನು ಪಿಪಿಐ ಎಂದು ಸರಳವಾಗಿ ಅರ್ಥೈಸಿಕೊಳ್ಳಬಹುದಾಗಿದೆ.

ಡಿಪಿಐ ಎಂದರೇನು?: ಡಿಪಿಐ ಎಂದರೆ ಡಾಟ್ಸ್ ಪರ್ ಇಂಚ್. ಇದು ಸ್ಕ್ರೀನ್ ಮತ್ತು ಇನ್ ಪ್ರಿಂಟ್‌ ಇವೆರಡರಲ್ಲೂ ಇರುವ ಇಮೇಜ್‌ನ ರೆಸಲ್ಯೂಶನ್ ಅನ್ನು ಅಳತೆ ಮಾಡುತ್ತದೆ. ನೀವು ಯಾವುದೇ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವಾಗ ಹೆಚ್ಚಿನ ಎಪಿಕೆ ಫೈಲ್‌ಗಳನ್ನು ಇಂಟರ್ನೆಟ್‌ನಲ್ಲಿ ಕಂಡಿರುತ್ತೀರಿ. ಈ ಎಪಿಕೆ ಫೈಲ್‌ಗಳನ್ನು ಬೇರೆ ಬೇರೆ ಅಂಶಗಳ ಮೂಲಕ ವರ್ಗೀಕರಿಸಲಾಗುತ್ತದೆ ಅಂದರೆ ಪ್ರೊಸೆಸರ್ ಪ್ರಕಾರಗಳು ಮತ್ತು ಡಿಪಿಐ ಮೌಲ್ಯಗಳು ಎಂದಾಗಿದೆ. ಇದು ಡಿವೈಸ್‌ನ ಡಿಸ್‌ಪ್ಲೇ ಡೆನ್ಸಿಟಿಯನ್ನು ಪ್ರತಿನಿಧಿಸುತ್ತಿದ್ದು ಇದರಿಂದ ಬಳಕೆದಾರರು ಸ್ಕ್ರೀನ್ ಮೇಲೆ ಯಾವ ಬಗೆಯ ಅಂಶ ಸರಿಹೊಂದುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಡಿಪಿಐ ಮೌಲ್ಯ ತಿಳಿಯುವುದು ಹೇಗೆ?: ನಿಮ್ಮ ಫೋನ್‌ನ ಡಿಪಿಐ ಮೌಲ್ಯವನ್ನು ಕಂಡುಕೊಳ್ಳಲು, ನೀವು “ಡಿಸ್‌ಪ್ಲೇ ಇನ್‌ಫೋ” ಅಪ್ಲಿಕೇಶನ್ ಅನ್ನು ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಈಗ ಡೆನ್ಸಿಟಿ ಕ್ಷೇತ್ರದತ್ತ ಗಮನಹರಿಸಿ ಮತ್ತು ಎಪಿಕೆ ಫೈಲ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸೈಟ್‌ಗೆ ಹೋಗಿ. ನಂತರ ಮೊಬೈಲ್​ನ ಹೆಸರಿನಲ್ಲಿರುವ ಡಿಪಿಐ ಮೌಲ್ಯವನ್ನು ಪರಿಶೀಲಿಸಿಕೊಳ್ಳಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ