AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಪ್ಲೇ ಸ್ಟೋರ್-ಆ್ಯಪ್ ಸ್ಟೋರ್​ನಿಂದ ಆ್ಯಪ್ ಡೌನ್‌ಲೋಡ್ ಮಾಡುವ ಮೊದಲು ಇದನ್ನು ತಿಳಿದಿರಿ

ಗೂಗಲ್ ಅಥವಾ ಆ್ಯಪಲ್ ಫೇಕ್ ಆ್ಯಪ್​ಗಳ ವಿರುದ್ಧ ಕಾಲಕಾಲಕ್ಕೆ ಕ್ರಮ ಕೈಗೊಳ್ಳುತ್ತಿದ್ದರೂ ಸಾವಿರಾರು ನಕಲಿ ಅಪ್ಲಿಕೇಶನ್ ಗಳು ಲಭ್ಯವಿವೆ. ಅವುಗಳಲ್ಲಿ ಹಲವು ಜಾಹೀರಾತುಗಳನ್ನು ತೋರಿಸುವ ಮೂಲಕ ಹಣವನ್ನು ಗಳಿಸಿದರೆ, ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ಡೇಟಾವನ್ನು ಕದಿಯುವುದು ಮಾತ್ರವಲ್ಲದೆ ನಿಮ್ಮ ಫೋನ್‌ನ ಮೇಲೆ ಪರಿಣಾಮ ಬೀರಬಹುದು.

Tech Tips: ಪ್ಲೇ ಸ್ಟೋರ್-ಆ್ಯಪ್ ಸ್ಟೋರ್​ನಿಂದ ಆ್ಯಪ್ ಡೌನ್‌ಲೋಡ್ ಮಾಡುವ ಮೊದಲು ಇದನ್ನು ತಿಳಿದಿರಿ
Tech Tips
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 24, 2024 | 6:04 PM

Share

ಪ್ರಪಂಚದಾದ್ಯಂತ ಪ್ರತಿ ವರ್ಷ ಶತಕೋಟಿ ಅಪ್ಲಿಕೇಶನ್‌ಗಳು ಡೌನ್‌ಲೋಡ್ ಆಗುತ್ತವೆ. ಆದರೆ ನೀವು ತಪ್ಪಾದ ಅಪ್ಲಿಕೇಶನ್ (ನಕಲಿ ಅಪ್ಲಿಕೇಶನ್‌ಗಳು) ಅನ್ನು ಡೌನ್‌ಲೋಡ್ ಮಾಡಿದರೆ ಅದು ನಿಮ್ಮ ಸ್ಮಾರ್ಟ್​ಫೋನ್​ಗೆ ಹಾನಿಯನ್ನುಂಟುಮಾಡುತ್ತದೆ. ಕೆಲವೊಮ್ಮೆ ಇದರಿಂದ ನೀವು ದೊಡ್ಡ ನಷ್ಟವನ್ನು ಅನುಭವಿಸಿಬಹುದು. ಆದರೆ, ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವ ಮೊದಲು, ಯಾವ ಅಪ್ಲಿಕೇಶನ್ ಅಸಲಿ ಮತ್ತು ಯಾವುದು ನಕಲಿ ಎಂದು ತಿಳಿಯುವುದು ಕಷ್ಟ. ಡೌನ್‌ಲೋಡ್ ಮಾಡುವ ಮೊದಲು ಅಪ್ಲಿಕೇಶನ್‌ಗಳು ನಕಲಿಯೇ ಅಥವಾ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಲು ಬಯಸಿದರೆ, ಈ ವಿಧಾನಗಳನ್ನು ಪ್ರಯತ್ನಿಸಬಹುದು.

ಗೂಗಲ್ ಅಥವಾ ಆ್ಯಪಲ್ ಫೇಕ್ ಆ್ಯಪ್​ಗಳ ವಿರುದ್ಧ ಕಾಲಕಾಲಕ್ಕೆ ಕ್ರಮ ಕೈಗೊಳ್ಳುತ್ತಿದ್ದರೂ ಸಾವಿರಾರು ನಕಲಿ ಅಪ್ಲಿಕೇಶನ್ ಗಳು ಲಭ್ಯವಿವೆ. ಅವುಗಳಲ್ಲಿ ಹಲವು ಜಾಹೀರಾತುಗಳನ್ನು ತೋರಿಸುವ ಮೂಲಕ ಹಣವನ್ನು ಗಳಿಸಿದರೆ, ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ಡೇಟಾವನ್ನು ಕದಿಯುವುದು ಮಾತ್ರವಲ್ಲದೆ ನಿಮ್ಮ ಫೋನ್‌ನ ಮೇಲೆ ಪರಿಣಾಮ ಬೀರಬಹುದು. ಇದರಿಂದ ಪಾರಾಗಲು ನೀವು ಕೆಳಗೆ ನೀಡಿರುವ ಕೆಲವು ಎಚ್ಚರಿಕೆಯನ್ನು ಗಮನಿಸಿ.

ಅಪ್ಲಿಕೇಶನ್ ಹೆಸರು ಮತ್ತು ಐಕಾನ್, ಕಾಗುಣಿತವನ್ನು ಪರಿಶೀಲಿಸಿ:

ಗೂಗಲ್ ಪ್ಲೇ ಸ್ಟೋರ್ ಅಥವಾ ಆ್ಯಪಲ್​ನ ಆ್ಯಪ್ ಸ್ಟೋರ್ ಅಥವಾ ಯಾವುದೇ ಜಾಹೀರಾತು ಲಿಂಕ್‌ನಿಂದ ಯಾವುದೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಮೊದಲು, ಇದನ್ನು ಎಚ್ಚರಿಕೆಯಿಂದ ಪರಿಶೀಲಿಸಿ. ಅನೇಕ ಬಾರಿ ಅಸಲಿ ಮತ್ತು ನಕಲಿ ಅಪ್ಲಿಕೇಶನ್‌ಗಳ ನಡುವೆ ಹೆಚ್ಚಿನ ವ್ಯತ್ಯಾಸವಿರುವುದಿಲ್ಲ. ಜನರು ನಕಲಿ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿ ಬಿಡುತ್ತಾರೆ. ಆದ್ದರಿಂದ ಅಪ್ಲಿಕೇಶನ್ ಹೆಸರು ಕಾಗುಣಿತ ಮತ್ತು ಐಕಾನ್ ಅನ್ನು ಸರಿಯಾಗಿ ಪರಿಶೀಲಿಸಿ.

ಅಪ್ಲಿಕೇಶನ್ ಡೆವಲಪರ್ ವಿವರಗಳನ್ನು ಪರಿಶೀಲಿಸಿ:

ಯಾವುದೇ ಅಪ್ಲಿಕೇಶನ್ ಅನ್ನು ಡೌನ್​ಲೋಡ್ ಮಾಡುವ ಮೊದಲು, ಅಪ್ಲಿಕೇಶನ್ ಡೆವಲಪರ್ ಯಾರೆಂದು ಪರಿಶೀಲಿಸಿ. ಅದನ್ನು ಗುರುತಿಸಲು ಸುಲಭವಾದ ಮಾರ್ಗವೆಂದರೆ ನಿಜವಾದ ಅಪ್ಲಿಕೇಶನ್​ನಲ್ಲಿ ಡೆವಲಪರ್ ವಿವರಗಳು ಎಲ್ಲಿಯಾದರೂ ಸುಲಭವಾಗಿ ಲಭ್ಯವಿರುತ್ತವೆ. ಆದರೆ ನಕಲಿ ಡೆವಲಪರ್ ವಿವರಗಳು ಲಭ್ಯವಿಲ್ಲ. ಅಪೂರ್ಣ ಮಾಹಿತಿಯನ್ನು ಹೊಂದಿರುವ ಡೆವಲಪರ್‌ಗಳು ನಕಲಿಯಾಗಿರಬಹುದು.

ಎಷ್ಟು ಡೌನ್‌ಲೋಡ್‌ ಆಗಿದೆಯೆಂದು ಪರಿಶೀಲಿಸಿ:

ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಮೊದಲು, ಅದರ ಡೌನ್‌ಲೋಡ್‌ಗಳನ್ನು ಪರಿಶೀಲಿಸಿ. ಏಕೆಂದರೆ ಒರಿಜಿನಲ್ ಆ್ಯಪ್‌ಗಳ ಡೌನ್‌ಲೋಡ್‌ಗಳು ಲಕ್ಷ ಮತ್ತು ಕೋಟಿಗಳಲ್ಲಿವೆ ಮತ್ತು ನಕಲಿ ಅಪ್ಲಿಕೇಶನ್‌ಗಳು ಹೆಚ್ಚಿನ ಡೌನ್‌ಲೋಡ್‌ಗಳನ್ನು ಹೊಂದಿರುವುದಿಲ್ಲ.

ಇದನ್ನೂ ಓದಿ: ನಿಮ್ಮ ಮೊಬೈಲ್ ಅನ್ನು ಟಿವಿ ರಿಮೋಟ್​ನಂತೆ ಬದಲಾಯಿಸಿ: ಹೇಗೆ ಗೊತ್ತೇ?

ಅಪ್ಲಿಕೇಶನ್‌ನ ವಿಮರ್ಶೆಗಳನ್ನು ಓದಿ:

ಕೆಲವೊಮ್ಮೆ ನಕಲಿ ಅಪ್ಲಿಕೇಶನ್‌ಗಳು ಕೂಡ ಹೆಚ್ಚಿನ ಸಂಖ್ಯೆಯ ಡೌನ್‌ಲೋಡ್‌ಗಳನ್ನು ಹೊಂದಿರುತ್ತವೆ, ಆದ್ದರಿಂದ ನಕಲಿ ಅಪ್ಲಿಕೇಶನ್‌ಗಳನ್ನು ಗುರುತಿಸಲು ಅಪ್ಲಿಕೇಶನ್‌ನ ಕೆಳಗೆ ಬರೆದಿರುವ ವಿಮರ್ಶೆಗಳನ್ನು ಓದಲು ಮರೆಯದಿರಿ. ಅದರ ಮೂಲಕ ನಿಮಗೆ ಸತ್ಯ ತಿಳಿಯುತ್ತದೆ.

ನಕಲಿ ಅಪ್ಲಿಕೇಶನ್‌ಗಳಿಂದ ವೈಯಕ್ತಿಕ ಡೇಟಾದ ಅಪಾಯ:

ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದಾಗ, ಅದು ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಪ್ರವೇಶಿಸುತ್ತದೆ. ಇವೆರಡೂ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುತ್ತವೆ. ಹೀಗಾದಾಗ ನಕಲಿ ಅಪ್ಲಿಕೇಶನ್‌ಗಳು ನಿಮ್ಮ ಫೋನ್‌ಗೆ ಪ್ರವೇಶವನ್ನು ಪಡೆಯಬಹುದು ಮತ್ತು ನಿಮ್ಮ ವೈಯಕ್ತಿಕ ಡೇಟಾವನ್ನು ಕದಿಯಬಹುದು.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ