AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Pova 4 Pro: ಟೆಕ್ನೋ ಪೋವಾ 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್

ಈ ಬಾರಿ ಟೆಕ್ನೋ ಬಜೆಟ್ ಬೆಲೆಗೆ ಟೆಕ್ನೋ ಪೋವಾ 4 ಪ್ರೊ (Tecno Pova 4 Pro) ಸ್ಮಾರ್ಟ್‌ಫೋನ್‌ ರಿಲೀಸ್ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​ಫೋನ್​ನಲ್ಲಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ.

Tecno Pova 4 Pro: ಟೆಕ್ನೋ ಪೋವಾ 4 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್
Tecno Pova 4 Pro
TV9 Web
| Edited By: |

Updated on: Oct 11, 2022 | 6:05 AM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ತನ್ನ ಹಳೆಯ ಸ್ಮಾರ್ಟ್​ಫೋನ್​ಗಳನ್ನು ಹೊಸ ವರ್ಷನ್​ನಲ್ಲಿ ಕೂಡ ಬಿಡುಗಡೆ ಮಾಡುತ್ತಿದೆ. ಈ ವರ್ಷದ ಆರಂಭದಲ್ಲಿ ಟೆಕ್ನೋ ಪೋವಾ ನಿಯೋ (Tecno Pova Neo) ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದ ಕಂಪನಿ ಇತ್ತೀಚೆಗಷ್ಟೆ ಇದರ 5ಜಿ ಆವೃತ್ತಿಯತನ್ನು ಅನಾವರಣ ಮಾಡಿತ್ತು. ಇದೀಗ ಮತ್ತೊಂದು ಹೊಸ ಫೋನ್​ನೊಂದಿಗೆ ಟೆಕ್ನೋ ಕಂಪನಿ ಮತ್ತೆ ಬಂದಿದೆ. ಈ ಬಾರಿ ಟೆಕ್ನೋ ಬಜೆಟ್ ಬೆಲೆಗೆ ಟೆಕ್ನೋ ಪೋವಾ 4 ಪ್ರೊ (Tecno Pova 4 Pro) ಸ್ಮಾರ್ಟ್‌ಫೋನ್‌ ರಿಲೀಸ್ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​ಫೋನ್​ನಲ್ಲಿ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ.

  • ಟೆಕ್ನೋ ಪೋವಾ 4 ಪ್ರೊ ಸ್ಮಾರ್ಟ್‌ಫೋನ್‌ 720×1600 ಪಿಕ್ಸೆಲ್‌ ರೆಸಲ್ಯೂಸನ್‌ ಸಾಮರ್ಥ್ಯದ 6.6 ಇಂಚಿನ ಅಮೋಲೆಡ್ ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 90Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ.
  • ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ ಜಿ 99 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, ಇದರ ಜೊತೆಗೆ ಇಂಟಿಗ್ರೇಟೆಡ್ ಮಾಲಿ ಜಿ 57 ಜಿಪಿಯು ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 12ರಲ್ಲಿ ರನ್‌ ಆಗಲಿದೆ.
  • ಇದನ್ನೂ ಓದಿ
    Image
    WhatsApp Scam: ವಾಟ್ಸ್​ಆ್ಯಪ್​ನಲ್ಲಿ ನಡೆಯುತ್ತಿದೆ ಬಹುದೊಡ್ಡ ವಂಚನೆ: ತಪ್ಪಿಯೂ ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಡಿ
    Image
    Galaxy F13: ಆಫರ್ ಅಂದ್ರೆ ಇದು: 6000mAh ಬ್ಯಾಟರಿಯ ಗ್ಯಾಲಕ್ಸಿ F13 ಈಗ ಕೇವಲ 9499 ರೂ. ಗೆ ಲಭ್ಯ
    Image
    Tech Tips: ನಿಮಗೆ ಬಂದ ವಾಟ್ಸ್​ಆ್ಯಪ್ ಸಂದೇಶವನ್ನು ಕಳುಹಿಸಿದವರಿಗೆ ತಿಳಿಯದಂತೆ ಸೀಕ್ರೆಟ್ ಆಗಿ ಓದುವುದು ಹೇಗೆ?: ಇಲ್ಲಿದೆ ಟ್ರಿಕ್ಸ್
    Image
    Google Pixel 6a: ಫ್ಲಿಪ್​ಕಾರ್ಟ್​ನಿಂದ ಧಮಾಕ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ
  • ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಎಲ್‌ಇಡಿ ಫ್ಲ್ಯಾಶ್‌ ಜೊತೆಗೆ 50 ಮೆಗಾಪಿಕ್ಸೆಲ್‌ನ ಪ್ರಮುಖ ಕ್ಯಾಮೆರಾ ಇದೆ.
  • 2 ಮೆಗಾಪಿಕ್ಸೆಲ್‌ನ ಸೆಕೆಂಡರಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಹಾಗೆಯೆ 8 ಮೆಗಾಪಿಕ್ಸೆಲ್‌ನ ಸೆಲ್ಫೀ ಕ್ಯಾಮೆರಾ ಜೊತೆಗೆ ಎಲ್ಇಡಿ ಫ್ಲ್ಯಾಶ್‌ ಅಳವಡಿಸಲಾಗಿದೆ.
  • ಇದರಲ್ಲಿರುವ 6000mAh ಸಾಮರ್ಥ್ಯದ ಬ್ಯಾಟರಿ ಪ್ರಮುಖ ಹೈಲೇಟ್. ಹಾಗೆಯೇ ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಷ್ಟೇ ಅಲ್ಲದೆ 10W ನ ರಿವರ್ಸ್ ಚಾರ್ಜಿಂಗ್ ಆಯ್ಕೆ ಕೂಡ ಪಡೆದುಕೊಂಡಿದೆ.
  • ಟೆಕ್ನೋ ಪೋವಾ 4 ಪ್ರೊ ಸ್ಮಾರ್ಟ್‌ಫೋನ್‌ ಪ್ರಸ್ತುತ ವಿದೇಶದಲ್ಲಿ ಅನಾವರಣಗಿಂಡಿದ್ದು, ಸದ್ಯದಲ್ಲೇ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ. ಈ ಫೋನ್ ಡ್ಯುಯಲ್ ಸಿಮ್, 4G, ವೈ-ಫೈ, ಬ್ಲೂಟೂತ್, ರಿಯರ್‌ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಪೋರ್ಟ್ ಮಾಡುತ್ತದೆ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK