Tecno Spark 8C: 5000mAh ಬ್ಯಾಟರಿ, 53 ಗಂಟೆಗಳ ಟಾಕ್‌ಟೈಂ: ಕೇವಲ 7,499 ರೂ.ಗೆ ಹೊಸ ಸ್ಮಾರ್ಟ್‌ಫೋನ್ ರಿಲೀಸ್
Tecno Spark 8C Price: ಟೆಕ್ನೋ ಸ್ಪಾರ್ಕ್ 8C ಸ್ಮಾರ್ಟ್‌ಫೋನ್ ದೀರ್ಘ ಬಾಳಿಕೆ ಬೊಂಬಾಟ್ ಬ್ಯಾಟರಿ ಬ್ಯಾಕಪ್ ಹೊಂದಿದ್ದು ಕೃತಕ ಬುದ್ಧಿಮತ್ತೆ (AI) ಆಧಾರಿತ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು (Camera) ಒಳಗೊಂಡಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ ಕಂಪನಿ ಇದೀಗ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಒಂದನ್ನು ಅನಾವರಣ ಮಾಡಿದೆ. ದೇಶದಲ್ಲಿ ಹೊಸ ಟೆಕ್ನೋ ಸ್ಪಾರ್ಕ್ 8ಸಿ (Tecno Spark 8C) ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ದೀರ್ಘ ಬಾಳಿಕೆ ಬೊಂಬಾಟ್ ಬ್ಯಾಟರಿ ಬ್ಯಾಕಪ್ ಹೊಂದಿದ್ದು ಕೃತಕ ಬುದ್ಧಿಮತ್ತೆ (AI) ಆಧಾರಿತ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು (Camera) ಒಳಗೊಂಡಿದೆ. 90Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಈ ಫೋನಿನ ಮತ್ತೊಂದು ಹೈಲೇಟ್. ಬಜೆಟ್ ಪ್ರಿಯರ ನಿದ್ದೆಕದ್ದಿರುವ ಈ ಫೋನಿನ ವಿಶೇಷತೆ ಏನು?, ಯಾವಾಗ ಮಾರಾಟ? ಎಂಬ ಬಗೆಗಿನ ವಿವರ ಇಲ್ಲಿದೆ.
ಬೆಲೆ ಎಷ್ಟು?:
ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 8C ಸ್ಮಾರ್ಟ್‌ಫೋನ್ ಸದ್ಯಕ್ಕೆ ಕೇವಲ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿದೆ. ಇದರ ಏಕೈಕ 3GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 7,499.ರೂ ಬೆಲೆ ನಿಗದಿ ಮಾಡಲಾಗಿದೆ. ಈ ಫೋನ್ ಡೈಮಂಡ್ ಗ್ರೇ, ಐರಿಸ್ ಪರ್ಪಲ್, ಮ್ಯಾಗ್ನೆಟ್ ಬ್ಲಾಕ್ ಮತ್ತು ಟರ್ಕೋಯಿಸ್ ಸಯಾನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇದು ಫೆಬ್ರವರಿ 24 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಖರೀದಿಸಬಹುದು.
ಏನು ವಿಶೇಷತೆ?:
ಟೆಕ್ನೋ ಸ್ಪಾರ್ಕ್ 8C ಸ್ಮಾರ್ಟ್ಫೋನ್ನಲ್ಲಿ 720 × 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD+ ಡಾಟ್ ನಾಚ್ ಡಿಸ್‌ಪ್ಲೇ ನೀಡಲಾಗಿದೆ. ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಆಕ್ಟಾ ಕೋರ್ ಯೂನಿಸೋಕ್ T606 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ HiOS v7.6 ಜೊತೆಗೆ ರನ್ ಆಗುತ್ತದೆ. ವಿಶೇಷವಾಗಿ ಇದು ಫ್ಯೂಷನ್ ವರ್ಚುವಲ್ RAM ಫೀಚರ್ಸ್ ಹೊಂದಿದ್ದು, RAM ಅನ್ನು 3GB ಯಷ್ಟು ಹೆಚ್ಚಿಸುತ್ತದೆ. ಅಂದರೆ 6GB ವರೆಗೆ ವಿಸ್ತರಣೆ ಮಾಡಬಹುದಾಗಿದೆ.
AI-ಚಾಲಿತ ಡ್ಯುಯಲ್ ರಿಯರ್ ಕ್ಯಾಮೆರಾ ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಇನ್ನು ರಿಯರ್ ಕ್ಯಾಮೆರಾ AI ಬ್ಯೂಟಿ 3.0, ವೈಡ್ ಸೆಲ್ಫಿ, ಪೋರ್ಟ್ರೇಟ್ ಮೋಡ್, HDR ಮತ್ತು ಫಿಲ್ಟರ್‌ಗಳಂತಹ ಫೀಚರ್ಸ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಕ್ಯಾಮೆರಾ 1080p ಟೈಮ್-ಲ್ಯಾಪ್ಸ್ ಫೋಟೋಗ್ರಫಿ ಮತ್ತು 120fps ಸ್ಲೋ ಮೋಷನ್ ವಿಡಿಯೋ ರೆಕಾರ್ಡಿಂಗ್ ಬೆಂಬಲಿಸಲಿವೆ.
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 53 ಗಂಟೆಗಳ ಕಾಲ ಟಾಕ್‌ಟೈಂ ಅನ್ನು ನೀಡಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, 4G VoLTE, Wi-Fi, ಬ್ಲೂಟೂತ್, FM ರೇಡಿಯೋ, GPS/ A-GPS ಮತ್ತು 3.5mm ಆಡಿಯೋ ಜ್ಯಾಕ್ ಬೆಂಬಲಿಸಲಿದೆ. DTS ಸೌಂಡ್ ಅನ್ನು ಪ್ಯಾಕ್ ಮಾಡುತ್ತದೆ ಮತ್ತು HiParty ಅಪ್ಲಿಕೇಶನ್ ಜೊತೆಗೆ ಪ್ಲೇಬ್ಯಾಕ್‌ಗಾಗಿ ಸಂಗೀತ ಟ್ರ್ಯಾಕ್‌ಗಳನ್ನು ಕಸ್ಟಮೈಸ್ ಮಾಡಲು ಸಹಾಯ ಮಾಡಲು SOPlay 2.0 ಅಪ್ಲಿಕೇಶನ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿದೆ.
Redmi Note 11S: 108MP ಕ್ಯಾಮೆರಾ, ಬೆಲೆ ಕೇವಲ 16,499: ಇದೇ ಮೊದಲ ಬಾರಿಗೆ ಸೇಲ್ ಆಗುತ್ತಿದೆ ರೆಡ್ಮಿ ನೋಟ್ 11S