Tecno Pova Neo 3: ಸಖತ್ ಸೌಂಡ್ ಮಾಡುತ್ತಿದೆ ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿಕೊಟ್ಟ ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್​ಫೋನ್

ಟೆಕ್ನೋ ಹೊಸ ಟೆಕ್ನೋ ಪೋವಾ ನಿಯೋ 3 (Tecno Pova Neo 3) ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾದ ಪೋವಾ ನಿಯೋ 2 ನ ಉತ್ತರಾಧಿಕಾರಿಯಾಗಿದೆ.

Tecno Pova Neo 3: ಸಖತ್ ಸೌಂಡ್ ಮಾಡುತ್ತಿದೆ ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿಕೊಟ್ಟ ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್​ಫೋನ್
Tecno Pova Neo 3
Follow us
Vinay Bhat
|

Updated on: Jul 24, 2023 | 11:16 AM

ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಫೋನುಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ (Tecno) ಕಂಪನಿ ಅಪರೂಪಕ್ಕೆ ಕೆಲ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತದೆ. ಹೆಚ್ಚು ಜಾಹೀರಾತುಗಳನ್ನೆಲ್ಲ ನೀಡದೆ ಸೈಲೆಂಟ್ ಆಗಿ ಮೊಬೈಲ್​ಗಳನ್ನು ಅನಾವರಣ ಮಾಡುವ ಟೆಕ್ನೋ ಇದೀಗ ತನ್ನ ಪೋವಾ ಸರಣಿ ಅಡಿಯಲ್ಲಿ ಹೊಸ ಟೆಕ್ನೋ ಪೋವಾ ನಿಯೋ 3 (Tecno Pova Neo 3) ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಾರಂಭವಾದ ಪೋವಾ ನಿಯೋ 2 ನ ಉತ್ತರಾಧಿಕಾರಿಯಾಗಿದೆ. ಹಿಂದಿನ ಮಾದರಿಗೆ ಹೋಲಿಸಿದರೆ, ಪೋವಾ ನಿಯೋ 3 ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಹೆಚ್ಚಿನ RAM ಮತ್ತು ಹೊಸ OS ಅನ್ನು ನೀಡಲಾಗಿದೆ.

ಟೆಕ್ನೋ ಪೋವಾ ನಿಯೋ 3 ಹೊಸ Turbo Mecha ವಿನ್ಯಾಸವನ್ನು ಒಳಗೊಂಡಿದೆ. Mecha Black, Amber Gold ಮತ್ತು Hurricane Blue ನಂತಹ ಮೂರು ಬಣ್ಣಗಳಲ್ಲಿ ಬರುತ್ತದೆ. ಈ ಸ್ಮಾರ್ಟ್​ಫೋನ್ 6.82-ಇಂಚಿನ IPS LCD ಪ್ಯಾನೆಲ್ ಅನ್ನು ಹೊಂದಿದ್ದು, ಇದು 1640 x 720 ಪಿಕ್ಸೆಲ್‌ಗಳ HD+ ರೆಸಲ್ಯೂಶನ್, 20.5:9 ಅನುಪಾತ ಮತ್ತು 90Hz ರಿಫ್ರೆಶ್ ದರವನ್ನು ಹೊಂದಿದೆ. ಈ ಫೋನ್ HiOS 13-ಆಧಾರಿತ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

Smartphones under Rs. 15000: 15,000 ರೂ. ಒಳಗಡೆ ನೀವು ಖರೀದಿಸಬಹುದಾದ ಆಕರ್ಷಕ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

ಇದನ್ನೂ ಓದಿ
Image
Boat Smart Ring: ಬೋಟ್ ಸ್ಮಾರ್ಟ್ ರಿಂಗ್ ಧರಿಸಿ, ನಿಮ್ಮ ಹೆಲ್ತ್, ಫಿಟ್ನೆಸ್ ಫುಲ್ ರಿಪೋರ್ಟ್ ಪಡೆಯಿರಿ!
Image
WhatsApp Tricks: ನಿಮ್ಮ ವಾಟ್ಸ್ಆ್ಯಪ್ ಡಿಪಿಯನ್ನು ಯಾರೆಲ್ಲ ನೋಡಿದ್ದಾರೆ ತಿಳಿಯಬೇಕೆ?: ಇಲ್ಲಿದೆ ಟ್ರಿಕ್
Image
Twitter New Logo: ಟ್ವಿಟ್ಟರ್​​ಗೆ ಹೊಸ ಲೋಗೋ: ಅತಿ ದೊಡ್ಡ ಘೋಷಣೆ ಮಾಡಿದ ಎಲಾನ್ ಮಸ್ಕ್
Image
Moto G13: 13,999 ರೂ. ಬೆಲೆಯ ಈ ಸ್ಮಾರ್ಟ್​ಫೋನ್ ಅನ್ನು ಕೇವಲ 9,999 ರೂ. ಗೆ ಖರೀದಿಸಿ

ಈ ಸ್ಮಾರ್ಟ್​ಫೋನ್​ನಲ್ಲಿ ಮೀಡಿಯಾಟೆಕ್ ಹೀಲಿಯೊ G85 ಚಿಪ್‌ಸೆಟ್, 8 GB RAM ಮತ್ತು 128 GB ಸ್ಟೋರೇಜ್ ನೀಡಲಾಗಿದೆ. ಹೆಚ್ಚುವರಿ ಸಂಗ್ರಹಣೆಗಾಗಿ, ಇದು ಮೈಕ್ರೊ SD ಕಾರ್ಡ್ ಸ್ಲಾಟ್ ಅನ್ನು ಹೊಂದಿದೆ. ಫೋನ್ 18W ಚಾರ್ಜಿಂಗ್ ಬೆಂಬಲದೊಂದಿಗೆ ದೊಡ್ಡ 7,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಈ ಸಾಧನದಲ್ಲಿ ಪವರ್ ಬಟನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ನೀಡಲಾಗಿದೆ.

ಪೋವಾ ನಿಯೋ 3 ಎಲ್ಇಡಿ ಫ್ಲ್ಯಾಷ್ನೊಂದಿಗೆ 8 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಹಿಂಭಾಗದಲ್ಲಿ, ಇದು 16-ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ರಚನೆ ಇದ್ದು ಡ್ಯುಯಲ್-ಎಲ್ಇಡಿ ಫ್ಲ್ಯಾಷ್ ಕೂಡ ಹೊಂದಿದೆ. ನಿಯೋ 3 ಡ್ಯುಯಲ್ ಸಿಮ್ ಬೆಂಬಲ, 4G VoLTE, Wi-Fi, ಬ್ಲೂಟೂತ್, GPS, USB-C ಪೋರ್ಟ್ ಮತ್ತು 3.5mm ಆಡಿಯೊ ಜಾಕ್‌ನಂತಹ ಇತರ ವೈಶಿಷ್ಟ್ಯತೆಗಳೊಂದಿಗೆ ಅನಾವರಣಗೊಂಡಿದೆ. ಈ ಫೋನಿನ ಬೆಲೆ ಮತ್ತು ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ