AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Pova 5G: ಭಾರತದಲ್ಲಿ ಟೆಕ್ನೋ ಕಂಪನಿಯ ಮೊಟ್ಟ ಮೊದಲ 5G ಫೋನ್ ಬಿಡುಗಡೆ: ಇದರ ಬೆಲೆ ಕೇವಲ …

ಟೆಕ್ನೋ ಕಂಪನಿಯ ಮೊಟ್ಟಮೊದಲ 5ಜಿ ಸ್ಮಾರ್ಟ್‌ಫೋನ್​ನ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 19,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಇದು ಫೆಬ್ರವರಿ 14 ರಿಂದ ಖರೀದಿಗೆ ಸಿಗಲಿದೆ.

Tecno Pova 5G: ಭಾರತದಲ್ಲಿ ಟೆಕ್ನೋ ಕಂಪನಿಯ ಮೊಟ್ಟ ಮೊದಲ 5G ಫೋನ್ ಬಿಡುಗಡೆ: ಇದರ ಬೆಲೆ ಕೇವಲ …
Tecno Pova 5G
TV9 Web
| Edited By: |

Updated on:Feb 08, 2022 | 2:39 PM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ ಕಂಪನಿ ಇದೀಗ ಭಾರತದಲ್ಲಿ ತನ್ನ ಮೊಟ್ಟಮೊದಲ 5ಜಿ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಕಳೆದ ವರ್ಷದ ಅಂತ್ಯದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಾಂಚ್ ಆಗಿದ್ದ ಟೆಕ್ನೋ ಪೋವಾ 5G (Tecno Pova 5G) ಸ್ಮಾರ್ಟ್‌ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ದೇಶೀಯ ಮಾರುಕಟ್ಟೆಯಲ್ಲಿ ಟೆಕ್ನೋ ಪೋವಾ 5G ಸ್ಮಾರ್ಟ್​ಫೋನ್ ರಿಲೀಸ್ ಆಗಿದ್ದು ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಜೊತೆಗೆ 6,000mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದ ಬೆಲೆ ಕೂಡ ಕಡಿಮೆ ಇರುವುದು ವಿಶೇಷ.

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ 1,080×2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ 6.95-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 120Hz ಹೆಚ್ಚಿನ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಮೀಡಿಯಾ ಟೆಕ್‌ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಜೊತೆಗೆ ಎಐ ಲೆನ್ಸ್​ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18 ವೋಲ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಲಗ್ಗೆಯಿಟ್ಟಿದೆ.

ಟೆಕ್ನೋ ಕಂಪನಿಯ ಮೊಟ್ಟಮೊದಲ 5ಜಿ ಸ್ಮಾರ್ಟ್‌ಫೋನ್​ನ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 19,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಇದು ಫೆಬ್ರವರಿ 14 ರಿಂದ ಖರೀದಿಗೆ ಸಿಗಲಿದೆ.

Oppo Reno 7 Pro: ಟೆಕ್ ಪ್ರಿಯರು ಫಿದಾ ಆಗಿರುವ ಒಪ್ಪೋ ರೆನೋ 7 ಪ್ರೊ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?

Safer Internet Day 2022: ಇಂದು ವಿಶ್ವ ಸುರಕ್ಷಿತ ಅಂತರ್ಜಾಲ ದಿನ: ಮಕ್ಕಳನ್ನು ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿಡಲು ಇಲ್ಲಿದೆ ಟಿಪ್ಸ್

Published On - 2:39 pm, Tue, 8 February 22

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್