ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ ಕಂಪನಿ ಇದೀಗ ಭಾರತದಲ್ಲಿ ತನ್ನ ಮೊಟ್ಟಮೊದಲ 5ಜಿ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಕಳೆದ ವರ್ಷದ ಅಂತ್ಯದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಾಂಚ್ ಆಗಿದ್ದ ಟೆಕ್ನೋ ಪೋವಾ 5G (Tecno Pova 5G) ಸ್ಮಾರ್ಟ್‌ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ದೇಶೀಯ ಮಾರುಕಟ್ಟೆಯಲ್ಲಿ ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ ರಿಲೀಸ್ ಆಗಿದ್ದು ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಜೊತೆಗೆ 6,000mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದ ಬೆಲೆ ಕೂಡ ಕಡಿಮೆ ಇರುವುದು ವಿಶೇಷ.
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ 1,080×2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ 6.95-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 120Hz ಹೆಚ್ಚಿನ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ನಿಂದ ಕೂಡಿದೆ. 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಜೊತೆಗೆ ಎಐ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18 ವೋಲ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಲಗ್ಗೆಯಿಟ್ಟಿದೆ.
ಟೆಕ್ನೋ ಕಂಪನಿಯ ಮೊಟ್ಟಮೊದಲ 5ಜಿ ಸ್ಮಾರ್ಟ್ಫೋನ್ನ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ 19,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಇದು ಫೆಬ್ರವರಿ 14 ರಿಂದ ಖರೀದಿಗೆ ಸಿಗಲಿದೆ.
Oppo Reno 7 Pro: ಟೆಕ್ ಪ್ರಿಯರು ಫಿದಾ ಆಗಿರುವ ಒಪ್ಪೋ ರೆನೋ 7 ಪ್ರೊ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?
Published On - 2:39 pm, Tue, 8 February 22