TECNO POP 7 Pro: ಕಡಿಮೆ ಬಜೆಟ್​ಗೆ ಲಭ್ಯವಾಗುತ್ತಿದೆ ಉತ್ತಮ ಫೀಚರ್​ನ ಟೆಕ್ನೋ ಸ್ಮಾರ್ಟ್​ಫೋನ್

ಭಾರತದ ಗ್ಯಾಜೆಟ್ ಮಾರುಕಟ್ಟೆಗೆ ನೂತನ ಟೆಕ್ನೋ ಸ್ಮಾರ್ಟ್​ಫೋನ್ ಬಿಡುಗಡೆಯಾಗಿದೆ. ಟೆಕ್ನೋ ಪಾಪ್ ಸ್ಮಾರ್ಟ್​ಫೋನ್ ಸರಣಿಯಲ್ಲಿ ನೂತನ ಟೆಕ್ನೋ ಪಾಪ್ 7 ಪ್ರೊ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, 6.6 ಇಂಚಿನ ಎಚ್​ಡಿ+ ಡಿಸ್​ಪ್ಲೇ, 12 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮರಾ ಹೊಸ ಸ್ಮಾರ್ಟ್​ಫೋನ್​ನಲ್ಲಿದೆ. ಇದರ ಬೆಲೆ ₹6,799 ಆಗಿದೆ.

TECNO POP 7 Pro: ಕಡಿಮೆ ಬಜೆಟ್​ಗೆ ಲಭ್ಯವಾಗುತ್ತಿದೆ ಉತ್ತಮ ಫೀಚರ್​ನ ಟೆಕ್ನೋ ಸ್ಮಾರ್ಟ್​ಫೋನ್
ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್​ಫೋನ್
Follow us
ಕಿರಣ್​ ಐಜಿ
|

Updated on:Feb 17, 2023 | 6:58 PM

ಚೀನಾ ಮೂಲದ ಸ್ಮಾರ್ಟ್​ಫೋನ್ ಮತ್ತು ಗ್ಯಾಜೆಟ್ ತಯಾರಿಕಾ ಕಂಪನಿ ಟೆಕ್ನೋ, ಭಾರತದಲ್ಲಿ ಆಕರ್ಷಕ ಮಾದರಿಯ, ಬಜೆಟ್ ದರದ ಸ್ಮಾರ್ಟ್​ಫೋನ್ ಪರಿಚಯಿಸಿದೆ. ಕಡಿಮೆ ದರಕ್ಕೆ ಉತ್ತಮ ಫೀಚರ್ ಅನ್ನು ಪರಿಚಯಿಸುವ ಮೂಲಕ ಟೆಕ್ನೋ ಹೆಚ್ಚಿನ ಸಂಖ್ಯೆಯ ಗ್ರಾಹಕರನ್ನು ಭಾರತದಲ್ಲಿ ಗಳಿಸಿದೆ. ನೂತನ ಟೆಕ್ನೋ ಪಾಪ್ 7 ಪ್ರೊ (Tecno Pop 7 Pro) ಸ್ಮಾರ್ಟ್​ಫೋನ್​ ಭಾರತದಲ್ಲಿ ₹6,799 ಆರಂಭಿಕ ದರ ಹೊಂದಿದೆ. ಅಮೆಜಾನ್ ಇಂಡಿಯಾ ಮೂಲಕ ಹೊಸ ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯವಾಗುತ್ತದೆ ಎಂದು ಕಂಪನಿ ಹೇಳಿದೆ.

ಟೆಕ್ನೋ ಪಾಪ್ 7 ಪ್ರೊ ವಿಶೇಷತೆಗಳೇನು?

ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್​ಫೋನ್, 6.6 ಇಂಚಿನ HD+ IPS ಡಿಸ್​ಪ್ಲೇ ಹೊಂದಿದೆ. ಅಲ್ಲದೆ, ಆ್ಯಂಡ್ರಾಯ್ಡ್ 12 ಆಧಾರಿತ HiOS 11.0 ಮೂಲಕ ಹೊಸ ಸ್ಮಾರ್ಟ್​ಫೋನ್ ಕಾರ್ಯನಿರ್ವಹಿಸುತ್ತದೆ. ಕ್ವಾಡ್ ಕೋರ್ ಮೀಡಿಯಾಟೆಕ್ ಹೀಲಿಯೊ A22 ಪ್ರೊಸೆಸರ್ ಬೆಂಬಲವನ್ನು ಲೇಟೆಸ್ಟ್ ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್​ಫೋನ್ ಹೊಂದಿದೆ. ಫೋಟೊಗ್ರಫಿ ಪ್ರಿಯರಿಗಾಗಿ ಹಿಂಭಾಗದಲ್ಲಿ 12 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮರಾ ಹಾಗೂ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾ ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್​ಫೋನ್​ನಲ್ಲಿದೆ. ಉಳಿದಂತೆ 5000mAh ಬ್ಯಾಟರಿ ಬೆಂಬಲ ಹಾಗೂ 10W Type C ಅಡಾಪ್ಟರ್ ನೂತನ ಟೆಕ್ನೋ ಸ್ಮಾರ್ಟ್​ಫೋನ್​ನ ವಿಶೇಷತೆಯಾಗಿದೆ.

ಟೆಕ್ನೋ ಪಾಪ್ 7 ಪ್ರೊ ಬೆಲೆ ಮತ್ತು ಲಭ್ಯತೆ

ಹೊಸದಾಗಿ ಪರಿಚಯಿಸಲ್ಪಟ್ಟಿರುವ ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್​ಫೋನ್ 6 GB RAM ಮತ್ತು 64 GBವರೆಗಿನ ಸ್ಟೋರೇಜ್ ಸಾಮರ್ಥ್ಯದಲ್ಲಿ ದೊರೆಯಲಿದೆ. 4 GB+64 GB ಮಾದರಿಗೆ ₹6,799 ಮತ್ತು 6 GB+ 64 GB ಆವೃತ್ತಿಗೆ ₹7,299 ದರ ನಿಗದಿಪಡಿಸಲಾಗಿದೆ. ಅಮೆಜಾನ್ ಇಂಡಿಯಾ ಮೂಲಕ ಎಂಡ್​ಲೆಸ್ ಬ್ಲ್ಯಾಕ್ ಮತ್ತು ಯುನಿ ಬ್ಲೂ ಎಂಬ ಎರಡು ಬಣ್ಣಗಳಲ್ಲಿ ಹೊಸ ಸ್ಮಾರ್ಟ್​ಫೋನ್ ಲಭ್ಯವಾಗುತ್ತದೆ.

Published On - 6:58 pm, Fri, 17 February 23

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ