ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಕಳೆದ ವರ್ಷ ಭಾರತದಲ್ಲಿ ಟೆಕ್ನೋ ಫ್ಯಾಂಟಮ್ ಎಕ್ಸ್ ಎಂಬ ಫೋನ್ ಬಿಡುಗಡೆ ಮಾಡಿ ಯಶಸ್ಸು ಸಾಧಿಸಿದ್ದ ಕಂಪನಿ ಇದೀಗ ಈ ಸರಣಿಯ ಮುಂದುವರೆದ ಭಾಗವಾಗಿ ಟೆಕ್ನೋ ಫ್ಯಾಂಟಮ್ ಎಕ್ಸ್2 5ಜಿ (Tecno Phantom X2 5G) ಸ್ಮಾರ್ಟ್ಫೋನನ್ನು ದೇಶದಲ್ಲಿ ಅನಾವರಣ ಮಾಡಿದೆ. ಮಧ್ಯಮ ಬೆಲೆಯ ಈ ಫೋನ್ ಸಾಕಷ್ಟು ಬಲಿಷ್ಠವಾಗಿದ್ದು ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಜೊತೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೇ ಅನಾವರಣಗೊಂಡಿದೆ. ಇದರ 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ 39,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಈ ಸ್ಮಾರ್ಟ್‌ಫೊನ್ ಫ್ರೀ ಆರ್ಡರ್‌ಗೆ ಲಭ್ಯವಿದೆ. ಇದೇ ಜನವರಿ 9 ರಿಂದ ಮಾರಾಟವಾಗಲಿದೆ. ಮೂನ್‌ಲೈಟ್ ಸಿಲ್ವರ್ ಮತ್ತು ಸ್ಟಾರ್‌ಡಸ್ಟ್ ಗ್ರೇ ಕಲರ್ನಲ್ಲಿ ಟೆಕ್ನೋ ಫ್ಯಾಂಟಮ್ X2 5G ಫೋನ್ ಖರೀದಿಗೆ ಸಿಗಲಿದೆ.
WhatsApp: ಭಾರತದ ತಪ್ಪಾದ ನಕ್ಷೆಯ ವಿಡಿಯೋ ಡಿಲಿಟ್ ಮಾಡಿ ಕ್ಷಮೆಯಾಚಿಸಿದ ವಾಟ್ಸ್ಆ್ಯಪ್
ಫೀಚರ್ಸ್ ಏನು?:
ಟೆಕ್ನೋ ಫ್ಯಾಂಟಮ್ X2 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದುಕೊಂಡಿದ್ದು, 4nm ಮೀಡಿಯಾಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಜೊತೆಗೆ ಮಾಲಿ-G710 MC10 GPU ಸಪೋರ್ಟ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12-ಆಧಾರಿತ HiOS 12.0 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ದೀರ್ಘ ಸಮಯ ಬಳಿಕೆ ಬರುವ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 45W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಕಂಪನಿ ಹೇಳುವ ಪ್ರಕಾರ ಈ ಫೋನ್ ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಆಗುತ್ತದಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 2.4G, 5G & Wi-Fi 6, ಬ್ಲೂಟೂತ್ 5.3, GPS, OTG, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ