ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್‌ಫೋನ್ ಒಂದನ್ನು ಅನಾವರಣ ಮಾಡಲು ಸಜ್ಜಾಗಿದೆ. ಟೆಕ್ನೋ ಕಂಪನಿ ತನ್ನ ಪಾಪ್ ಸರಣಿಯಡಿಯಲ್ಲಿ ಹೊಸ ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಕೆಲವೇ ದಿನಗಳಲ್ಲಿ ಭಾರತದಲ್ಲಿ ಲಾಂಚ್ ಆಗಲಿದೆಯಂತೆ. ಈ ಬಗ್ಗೆ ಅಮೆಜಾನ್ ಮೈಕ್ರೋಸೈಟ್‌ನಲ್ಲಿ ಮಾಹಿತಿ ಹೊರಬಿದ್ದಿದ್ದು, ಈ ಫೋನ್ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್, 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳಿಂದ ಕೂಡಿರಲಿದೆಯಂತೆ.
ಮೂಲಗಳ ಪ್ರಕಾರ ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 23ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಜೊತೆಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದ ಸಮಯದಲ್ಲಿ ಸೇಲ್ ಕಾಣಲಿದೆಯಂತೆ. ಇದುಕೂಡ ಬಜೆಟ್ ಬೆಲೆಯ ಫೋನಾಗಿದ್ದು 10,000 ರೂ. ಒಳಗಡೆ ಇದರ ಬೆಲೆ ಇರಬಹುದೆಂದು ಅಂದಾಜಿಸಲಾಗಿದೆ.
ಇನ್ನು ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಟೆಕ್ನೋ ಪಾಪ್ 6 ಪ್ರೊ 720 x 1600 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಆಕ್ಟಾ–ಕೋರ್ ಹೆಲಿಯೊ A22 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 Go ಆವೃತ್ತಿಯಲ್ಲಿ HiOS 8.6 ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಟೆಕ್ನೋ ಪಾಪ್ 6 ಪ್ರೊ ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದು 8 ಮೆಗಾಪಿಕ್ಸೆಲ್ ಸೆನ್ಸಾರ್ AI ಲೆನ್ಸ್ ಮತ್ತು LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್ ಸೇರಿದಂತೆ ಇತ್ತೀಚೆಗಿನ ಫೀಚರ್ಸ್ ಇರುವ ಸಾಧ್ಯತೆ ಇದೆ.