Kannada News Technology Tecno Pova 3 A 7000mAh Battery and 50MP Camera is all set to launch in India Check Price
Tecno Pova 3: ಭಾರತಕ್ಕೆ ಬರುತ್ತಿದೆ ಬರೋಬ್ಬರಿ 7,000mAh ಬ್ಯಾಟರಿಯ ಸ್ಮಾರ್ಟ್ಫೋನ್: ಬೆಲೆ ಕೇವಲ …
7000mAh Battery Smartphone: ಇದೀಗ ಭಾರತದಲ್ಲಿ ತನ್ನ ವಿಶೇಷವಾದ ಫೋನೊಂದನ್ನು ಅನಾವರಣ ಮಾಡಲು ಸಜ್ಜಾಗಿದೆ. ಅದುವೆ ಟೆಕ್ನೋ ಪೊವಾ 3 (Tecno Pova 3) ಸ್ಮಾರ್ಟ್ಫೋನ್. ಈ ಸ್ಮಾರ್ಟ್ಫೋನ್ ವಿಶೇಷತೆ ಕುರಿತು ಅಮೆಜಾನ್ನಲ್ಲಿ ಟೀಸರ್ ಬಿಡುಗಡೆ ಆಗಿದ್ದು ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ.
Tecno Pova 3
Follow us on
ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ(Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ವಿಶೇಷವಾದ ಫೋನೊಂದನ್ನು ಅನಾವರಣ ಮಾಡಲು ಸಜ್ಜಾಗಿದೆ. ಅದುವೆ ಟೆಕ್ನೋ ಪೊವಾ 3 (Tecno Pova 3) ಸ್ಮಾರ್ಟ್ಫೋನ್. ಈ ಸ್ಮಾರ್ಟ್ಫೋನ್ ವಿಶೇಷತೆ ಕುರಿತು ಅಮೆಜಾನ್ನಲ್ಲಿ ಟೀಸರ್ ಬಿಡುಗಡೆ ಆಗಿದ್ದು ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ. ಯಾಕೆಂದರೆ ಇದರಲ್ಲಿ ಬರೋಬ್ಬರಿ 7,000mAh ಸಾಮರ್ಥ್ಯದ ಅತ್ಯಂತ ದೊಡ್ಡದಾದ ಬ್ಯಾಟರಿ ಬ್ಯಾಕ್ಅಪ್ ನೀಡಲಾಗಿದೆ. ಇದಿಷ್ಟೇ ಅಲ್ಲದೆ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಇತರೆ ಫೀಚರ್ಸ್ ಏನು ಎಂಬುದನ್ನು ನೋಡೋಣ.
ಟೆಕ್ನೋ ಪೊವಾ 3 ಸ್ಮಾರ್ಟ್ಫೋನ್ ಆರಂಭದಲ್ಲಿ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಅದು 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದಿಂದ ಕೂಡಿರಲಿದೆ. ಆದರೆ, ಈ ಫೋನಿನ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 13,000 ರೂ. ಯಿಂದ 15,000 ರೂ. ಒಳಗೆ ಇರಬಹುದು ಎನ್ನಲಾಗಿದೆ.
ಈ ಸ್ಮಾರ್ಟ್ಫೋನ್ 1080 × 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 90Hz ರೀಫ್ರೇಶ್ ರೇಟ್ನಿಂದ ಕೂಡಿದ್ದು, 480ನಿಟ್ಸ್ ಬ್ರೈಟ್ನೆಶ್ ಅನ್ನು ನೀಡುತ್ತದೆ.
ಇದನ್ನೂ ಓದಿ
ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ಸಹ ನೀಡಲಾಗಿದೆ.
ಟೆಕ್ನೋ ಪೊವಾ 3 ಸ್ಮಾರ್ಟ್ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಹೆಚ್ಡಿ ಲೆನ್ಸ್ ಅನ್ನು ಹೊಂದಿದೆ. 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರುವ ಸಾಧ್ಯತೆಯಿದೆ.
ದೀರ್ಘ ಸಮಯ ಬಾಳಿಕ ಬರುವ 7,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿರಲಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎನ್ನಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್ಟಿಇ, ಜಿಪಿಎಸ್, ಬ್ಲೂಟೂತ್ ಅನ್ನು ನೀಡಲಾಗುತ್ತದೆ.