Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Spark 8 Pro: ಟೆಕ್ನೋ ಕಂಪನಿಯಿಂದ ಬಜೆಟ್ ಬೆಲೆಗೆ ಮತ್ತೊಂದು ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ

ಹೊಸ ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 48 ಮೆಗಾಪಿಕ್ಸೆಲ್ ಕ್ಯಾಮೆರಾ, 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಒಳಗೊಂಡಿದೆ.

Tecno Spark 8 Pro: ಟೆಕ್ನೋ ಕಂಪನಿಯಿಂದ ಬಜೆಟ್ ಬೆಲೆಗೆ ಮತ್ತೊಂದು ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ
Tecno Spark 8 Pro
Follow us
TV9 Web
| Updated By: Vinay Bhat

Updated on: Nov 23, 2021 | 2:17 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್ 8 ಪ್ರೊ (Tecno Spark 8 Pro) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟೆಕ್ನೋ ಸ್ಪಾರ್ಕ್ 8ನ ಹೊಸ ಅಪ್ಡೇಟ್‌ ಆವೃತ್ತಿಯಾಗಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 48 ಮೆಗಾಪಿಕ್ಸೆಲ್ ಕ್ಯಾಮೆರಾ, 5,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಒಳಗೊಂಡಿದೆ.

ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಬಾಂಗ್ಲಾದೇಶದಲ್ಲಿ Taka 16,990. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 14,700 ರೂ. ಎನ್ನಬಹುದು. ಈ ಫೋನ್‌ ಇಂಟರ್‌ಸ್ಟೆಲ್ಲರ್ ಬ್ಲ್ಯಾಕ್ ಮತ್ತು ಕೊಮೊಡೊ ಐಲ್ಯಾಂಡ್ ಬಣ್ಣ ಆಯ್ಕೆಗಳಲ್ಲಿ ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಿದೆ. ಇದು ಭಾರತ ಸೇರಿದಂತೆ ಇತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸದ್ಯದಲ್ಲೇ ಬಿಡುಗಡೆ ಆಗಲಿದೆಯಂತೆ.

ಈ ಸ್ಮಾರ್ಟ್‌ಫೋನ್‌ 1,080×2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದೆ. ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಟೆಕ್ನೋ ಸ್ಪಾರ್ಕ್‌ 8 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ f/1.79 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ AI ಲೆನ್ಸ್ f/2.0 ಲೆನ್ಸ್ ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್ 2.0 ಮತ್ತು ಬ್ಯೂಟಿ 4.0 ಬೆಂಬಲಿಸಲಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಪೋರ್ಟ್, 4G, ಬ್ಲೂಟೂತ್ v5, FM ರೇಡಿಯೋ, GPS/ A-GPS, ಮೈಕ್ರೋ-ಯುಎಸ್‌ಬಿ ಪೋರ್ಟ್, OTG, Wi-Fi ಮತ್ತು USB ಪೋರ್ಟ್ ಸೇರಿವೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಜಿ-ಸೆನ್ಸರ್ ಸೇರಿದಂತೆ ಹೊಸ ಫೀಚರ್ಸ್​ನಿಂದ ಕೂಡಿದೆ.

ವೊಡಾಫೋನ್- ಐಡಿಯಾ ಬಳಕೆದಾರರಿಗೆ ಶಾಕ್; ನವೆಂಬರ್ 25ರಿಂದಲೇ ಪ್ರಿಪೇಯ್ಡ್ ಸೇವೆಗಳ ದರ ಹೆಚ್ಚಳ

GoDaddy: ವಿಶ್ವದ ಅತಿದೊಡ್ಡ ವೆಬ್​ಸೈಟ್​ ಡೊಮೈನ್ ಹೋಸ್ಟ್​ ಗೋ ಡ್ಯಾಡಿ ಹ್ಯಾಕ್: ಅಪಾಯದಲ್ಲಿ 12 ಲಕ್ಷ ಬಳಕೆದಾರರ ಡೇಟಾ

(Tecno Spark 8 Pro With 48-megapixel Camera 5000mAh Battery Launched Price Specifications)

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ