Kannada News Technology Tecno Spark 9 with 11GB extended RAM has launched in India with just rs 9499
Tecno Spark 9: ಬೆಲೆ ಕೇವಲ 9,499 ರೂ.: ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ ಬಿಡುಗಡೆ: ಏನು ವಿಶೇಷತೆ?
ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಆಯ್ಕೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 11GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ (Tecno) ಕಂಪನಿ ಇದೀಗ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್‌ಫೋನ್ ಒಂದನ್ನು ಅನಾವರಣ ಮಾಡಿದೆ. ಅದುವೇ ಟೆಕ್ನೋ ಸ್ಪಾರ್ಕ್ 9 (Tecno Spark 9). ಡ್ಯುಯೆಲ್ ರಿಯರ್ ಕ್ಯಾಮೆರಾ ಹೊಂದಿರುವ ಈ ಫೋನಿನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಆಂಡ್ರಾಯ್ಡ್ 12 ಮೂಲಕ ಕಾರ್ಯನಿರ್ವಹಿಸುತ್ತದೆ. ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ ಇದೇ ಜುಲೈ 23 ರಿಂದ ಅಮೆಜಾನ್ನಲ್ಲಿ ಸೇಲ್ ಕಾಣಲಿದೆ. ಇದರ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ವಿವರ ಇಲ್ಲಿದೆ.
ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಆಯ್ಕೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 11GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ.
ಈ ಫೋನ್ ಇನ್ಫಿನಿಟಿ ಬ್ಲ್ಯಾಕ್ ಮತ್ತು ಸ್ಕೈ ಮಿರರ್ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಅಮೆಜಾನ್ನಲ್ಲಿ ನಡೆಯಲಿರುವ ಪ್ರೈಮ್ ಡೇ ಸೇಲ್ನಲ್ಲಿ ಖರೀದಿಸಬಹುದು.
ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದೆ. 90Hz ರಿಫ್ರೆಶ್ ರೇಟ್ನಿಂದ ಕೂಡಿದೆ.
ಮೀಡಿಯಾ ಟೆಕ್ ಹಿಲಿಯೋ G37 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ.