Tecno Spark 9T: ಕೇವಲ 9,299 ರೂ. ಗೆ ಖರೀದಿಸಿ 50MP ಕ್ಯಾಮೆರಾದ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ (Amazon) ಮೂಲಕ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ ಸೇಲ್ ಕಾಣುತ್ತಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

Tecno Spark 9T: ಕೇವಲ 9,299 ರೂ. ಗೆ ಖರೀದಿಸಿ 50MP ಕ್ಯಾಮೆರಾದ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌
Tecno Spark 9T
Follow us
TV9 Web
| Updated By: Vinay Bhat

Updated on: Aug 07, 2022 | 7:28 AM

ಟೆಕ್ನೋ ಕಂಪನಿಯು ನೂತನವಾಗಿ ಬಿಡುಗಡೆ ಮಾಡಿರುವ ಅಗ್ಗದ ಬೆಲೆಯ ಟೆಕ್ನೋ ಸ್ಪಾರ್ಕ್‌ 9ಟಿ (Tecno Spark 9T) ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೀಗ ಖರೀದಿಗೆ ಸಿಗುತ್ತಿದೆ. ಈ ಸ್ಮಾರ್ಟ್‌ಫೋನ್​ನಲ್ಲಿ (Smartphone) 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಅಷ್ಟೇ ಅಲ್ಲದೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ (Amazon) ಮೂಲಕ ಈ ಸ್ಮಾರ್ಟ್‌ಫೋನ್ ಸೇಲ್ ಕಾಣುತ್ತಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 9,299 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ನೀವು ಟರ್ಕೋಯಿಸ್ ಸಯಾನ್, ಅಟ್ಲಾಂಟಿಕ್ ಬ್ಲೂ, ಐರಿಸ್ ಪರ್ಪಲ್ ಮತ್ತು ಟಹೀಟಿ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು.

ಟೆಕ್ನೋ ಸ್ಪಾರ್ಕ್‌ 9T 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಆಧರಿಸಿ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 4GB RAM ಜೊತೆಗೆ 3GB ವರ್ಚುವಲ್ RAM ಅನ್ನು ವಿಸ್ತರಿಸಬಹುದಾಗಿದೆ.

ಇದನ್ನೂ ಓದಿ
Image
OnePlus 10T: ಮೊದಲ ಸೇಲ್​ನಲ್ಲೇ ಬಂಪರ್ ಆಫರ್: ಹೊಸ ಒನ್‌ಪ್ಲಸ್‌ 10T ಮೇಲೆ 5,000 ರೂ. ಡಿಸ್ಕೌಂಟ್
Image
OnePlus Nord N20 SE: ಒನ್​ಪ್ಲಸ್ ನಾರ್ಡ್​ N20 SE ಸ್ಮಾರ್ಟ್​ಫೋನ್ ಬಿಡುಗಡೆ: ಇದರಲ್ಲಿರುವ ಫೀಚರ್ಸ್ ನೀವೇ ನೋಡಿ
Image
Great Freedom Festival Sale: ಪ್ರೈಮ್ ಚಂದಾದಾರರಿಗೆ ಗ್ರೇಟ್ ಫ್ರೀಡಂ ಫೆಸ್ಟಿವಲ್‌ ಸೇಲ್ ಆರಂಭ: ಅಮೆಜಾನ್​ನಿಂದ ಆಫರ್​ಗಳ ಸುರಿಮಳೆ
Image
Paytm Down: ಪೇಟಿಯಂ ಡೌನ್: ಆ್ಯಪ್, ವೆಬ್​ಸೈಟ್​ ಬಳಸಲು ಪರದಾಡುತ್ತಿರುವ ಬಳಕೆದಾರರು

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಿಂದಿದ್ದರೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪೋಟ್ರೇಟ್‌ ಯೂನಿಟ್‌ ಮತ್ತು ಮೂರನೇ ಕ್ಯಾಮೆರಾ AI ಲೆನ್ಸ್ ಅನ್ನು ಒಳಗೊಂಡಿದೆ. ಹಿಂಭಾಗದಲ್ಲಿರುವ ಕ್ಯಾಮೆರಾಕ್ಕೆ ಎಲ್ಇಡಿ ಫ್ಲ್ಯಾಷ್ ನೀಡಲಾಗಿದೆ. ಇದಲ್ಲದೆ 8ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಫ್ರಂಟ್ ಫೇಸಿಂಗ್ ಸೆಲ್ಫಿ ಕ್ಯಾಮೆರಾ ಇದೆ.

ಟೆಕ್ನೋ ಸ್ಪಾರ್ಕ್‌ 9T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಬ್ಲೂಟೂತ್‌ 5.0, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಬೆಂಬಲ ಪಡೆದುಕೊಂಡಿದೆ.