Tecno Spark Go 2022: ಹೊಸ ವರ್ಷಕ್ಕೆ ಹೊಸ ಫೋನ್: ಕೇವಲ ರೂ 7,499ಕ್ಕೆ ಬಿಡುಗಡೆ ಆಗಿದೆ ಈ ಬೊಂಬಾಟ್ ಸ್ಮಾರ್ಟ್​ಫೋನ್

ಟೆಕ್ನೋ ಸ್ಪಾರ್ಕ್ ಗೋ 2022 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಸದ್ಯಕ್ಕೆ ಈ ಫೋನ್ ಕೇವಲ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 2GB RAM ಮತ್ತು 32GB ಶೇಖರಣಾ ಮಾದರಿಗೆ 7,499 ರೂ. ಬೆಲೆ ನಿಗದಿ ಮಾಡಲಾಗಿದೆ.

Tecno Spark Go 2022: ಹೊಸ ವರ್ಷಕ್ಕೆ ಹೊಸ ಫೋನ್: ಕೇವಲ ರೂ 7,499ಕ್ಕೆ ಬಿಡುಗಡೆ ಆಗಿದೆ ಈ ಬೊಂಬಾಟ್ ಸ್ಮಾರ್ಟ್​ಫೋನ್
Tecno Spark Go 2022
Follow us
TV9 Web
| Updated By: Vinay Bhat

Updated on: Dec 30, 2021 | 2:34 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ (Budget Smartphone) ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Infinix) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಇದೀಗ ಹೊಸ ವರ್ಷದ ಪ್ರಯುಕ್ತ ತನ್ನ ಹೊಸ ಟೆಕ್ನೋ ಸ್ಪಾರ್ಕ್ ಗೋ 2022 (Tecno Spark Go 2022) ಫೋನನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ಫೀಚರ್ಸ್ ಎಂಬುದನ್ನು ನೋಡೋಣ.

ಟೆಕ್ನೋ ಕಂಪೆನಿ ಟೆಕ್ನೋ ಸ್ಪಾರ್ಕ್ ಗೋ 2022 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.8 ಲೆನ್ಸ್ ಹೊಂದಿದೆ. ಇನ್ನು ದ್ವಿತೀಯ ಕ್ಯಾಮೆರಾ AI ಬೆಂಬಲಿತ ಆಗಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಬೇಸಿಕ್ ಫೋಟೊ ಎಡಿಟಿಂಗ್ ಆಯ್ಕೆಗಳು ಇರಲಿವೆ.

ಟೆಕ್ನೋ ಸ್ಪಾರ್ಕ್ ಗೋ 2022 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 4ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 4.2 ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಒಳಗೊಂಡಿದೆ. ಸದ್ಯಕ್ಕೆ ಈ ಫೋನ್ ಕೇವಲ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 2GB RAM ಮತ್ತು 32GB ಶೇಖರಣಾ ಮಾದರಿಗೆ 7,499 ರೂ. ಬೆಲೆ ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ.

Reliance Jio: ಜಿಯೋದಿಂದ ಬಿಗ್ ಶಾಕ್: ಗ್ರಾಹಕರ ನೆಚ್ಚಿನ ಪ್ಲಾನ್​ನನ್ನೇ ಸ್ಥಗಿತಗೊಳಿಸಿದ ಕಂಪನಿ

Whatsapp Third Tick: ವಾಟ್ಸ್​ಆ್ಯಪ್​ನಲ್ಲಿ ಬರಲಿದೆ ಮೂರನೇ ಬ್ಲೂ ಟಿಕ್?: ಶಾಕ್ ಆಗುವ ಮುನ್ನ ಈ ಸ್ಟೋರಿ ಓದಿ

(Tecno Spark Go 2022 With quality cameras and Big 5000mAh battery launched in India)