Tecno Spark Go (2023): ಬೆಲೆ ಕೇವಲ 6,999 ರೂ.: ಟೆಕ್ನೋದಿಂದ ಅತಿ ಕಡಿಮೆ ದರಕ್ಕೆ ಬೊಂಬಾಟ್ ಸ್ಮಾರ್ಟ್​ಫೋನ್ ಬಿಡುಗಡೆ

ಇದೀಗ ಹೊಸ ವರ್ಷದ ಪ್ರಯುಕ್ತ ತನ್ನ ಹೊಸ ಟೆಕ್ನೋ ಸ್ಪಾರ್ಕ್ ಗೋ 2023 (Tecno Spark Go 2023) ಫೋನನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಕೂಡಿದೆ.

Tecno Spark Go (2023): ಬೆಲೆ ಕೇವಲ 6,999 ರೂ.: ಟೆಕ್ನೋದಿಂದ ಅತಿ ಕಡಿಮೆ ದರಕ್ಕೆ ಬೊಂಬಾಟ್ ಸ್ಮಾರ್ಟ್​ಫೋನ್ ಬಿಡುಗಡೆ
Tecno Spark Go (2023)
Follow us
TV9 Web
| Updated By: Vinay Bhat

Updated on: Jan 24, 2023 | 11:06 AM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಟೆಕ್ನೋ (Tecno) ಕಂಪನಿ ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈ ಪೈಕಿ ಇದೀಗ ಹೊಸ ವರ್ಷದ ಪ್ರಯುಕ್ತ ತನ್ನ ಹೊಸ ಟೆಕ್ನೋ ಸ್ಪಾರ್ಕ್ ಗೋ 2023 (Tecno Spark Go 2023) ಫೋನನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಇದು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ಫೀಚರ್ಸ್ ಎಂಬುದನ್ನು ನೋಡೋಣ.

ಟೆಕ್ನೋ ಕಂಪೆನಿ ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.85 ಲೆನ್ಸ್ ಹೊಂದಿದೆ. ಇನ್ನು ದ್ವಿತೀಯ ಕ್ಯಾಮೆರಾ AI ಬೆಂಬಲಿತ ಆಗಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಬೇಸಿಕ್ ಫೋಟೊ ಎಡಿಟಿಂಗ್ ಆಯ್ಕೆಗಳು ಇರಲಿವೆ. ಮುಂಭಾಗ ಎಲ್​ಇಡಿ ಫ್ಲ್ಯಾಸ್ ಆಯ್ಕೆ ಇರುವುದು ವಿಶೇಷ.

ಇದನ್ನೂ ಓದಿ
Image
iPhone 15 Series: ಐಫೋನ್ 15 ಸರಣಿಯ ಬಗ್ಗೆ ಹೊರಬಿತ್ತು ಮತ್ತೊಂದು ವಿಚಾರ: ಏನು ನೋಡಿ
Image
Best Smartphones: 15,000 ರೂ. ಒಳಗೆ ಸಿಗುತ್ತಿರುವ 50MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ
Image
WhatsApp: ವಾಟ್ಸ್​ಆ್ಯಪ್​ನಲ್ಲಿ ಬಹುಬೇಡಿಕೆಯ ಫೀಚರ್: ಇನ್ಮುಂದೆ ಫೋಟೋ ಕಳುಹಿಸಲು ಟೆನ್ಶನ್ ಬೇಡ
Image
Xiaomi 13: ಭಾರತಕ್ಕೆ ಬರುತ್ತಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಶವೋಮಿ 13 ಸರಣಿ: ಇದರ ಫೀಚರ್ಸ್ ಕೇಳಿದ್ರೆ ದಂಗಾಗ್ತೀರ

OnePlus Nord CE 3 5G: ಬಹುನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್ ಫೀಚರ್ಸ್ ಲೀಕ್: ಇದನ್ನು ಖರೀದಿಸಲು ಕ್ಯೂ ಗ್ಯಾರಂಟಿ

ಟೆಕ್ನೋ ಸ್ಪಾರ್ಕ್ ಗೋ 2023 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. 10 ವೋಲ್ಟ್ ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. 124 ಗಂಟೆಗಳ ಕಾಲ ಮ್ಯೂಸಿಕ್ ಕೇಳಬಹುದು, 12 ಗಂಟೆಗಳ ಕಾಲ ಗೇಮಿಂಗ್ ಟೈಮ್ ನೀಡಲಾಗಿದೆ ಎಂದು ಕಂಪನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳು 4ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ 5 ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಒಳಗೊಂಡಿದೆ.

ಈ ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 3GB RAM ಮತ್ತು 32GB ಶೇಖರಣಾ ಮಾದರಿಗೆ 6,999 ರೂ. ಬೆಲೆ ನಿಗದಿ ಮಾಡಲಾಗಿದೆ. ಇದರ ಜೊತೆಗೆ 3GB RAM ಮತ್ತು 64GB, 4GB RAM ಮತ್ತು 64GB ಸ್ಟೋರೇಜ್ ಮುಂದಿನ ದಿನಗಳಲ್ಲಿ ಬಿಡುಗಡೆ ಆಗಲಿದೆಯಂತೆ. ಈ ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಅಥವಾ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ