ಟೆಲಿಕಾಂ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ: ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ದೊಡ್ಡ ಲಾಭ

ಡಿಒಟಿ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ಈ ಕುರಿತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 30 ರೊಳಗೆ ಎಲ್ಲರೂ ಇದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. RoW ಪೋರ್ಟಲ್‌ನ ಹೊಸ ನಿಯಮಗಳು ಜನವರಿ 1 ರಿಂದ ಜಾರಿಗೆ ಬರಲಿದೆ.

ಟೆಲಿಕಾಂ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ: ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ದೊಡ್ಡ ಲಾಭ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 23, 2024 | 8:39 AM

ಟೆಲಿಕಾಂ ನಿಯಮಗಳನ್ನು ಸರ್ಕಾರವು ಕಾಲಕಾಲಕ್ಕೆ ಬದಲಾಯಿಸುತ್ತಾ ಇರುತ್ತದೆ. ಇದೀಗ ಟೆಲಿಕಾಂ ಕಾಯ್ದೆಯಲ್ಲಿ ಕೆಲವು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ರಾಜ್ಯಗಳಿಗೆ ಸೂಚಿಸಲಾಗಿದೆ. ಇದಕ್ಕೆ ರೈಟ್ ಆಫ್ ವೇ (RoW) ನಿಯಮ ಎಂದು ಹೆಸರಿಡಲಾಗಿದೆ. I ಹೊಸ ನಿಯಮವು ಜನವರಿ 1, 2025 ರಿಂದ ಜಾರಿಗೆ ಬರಲಿದೆ. ಆಪ್ಟಿಕಲ್ ಫೈಬರ್ ಮತ್ತು ಟೆಲಿಕಾಂ ಟವರ್‌ಗಳನ್ನು ಸ್ಥಾಪಿಸುವಲ್ಲಿ ಇದನ್ನು ಉತ್ತೇಜಿಸಲಾಗುವುದು ಎಂದು ಹೇಳಲಾಗಿದೆ.

ಟೆಲಿಕಾಂ ಆಪರೇಟರ್‌ಗಳು ಮತ್ತು ಮೂಲಸೌಕರ್ಯ ಪೂರೈಕೆದಾರರು ಸಹ ಇದರಿಂದ ಸಾಕಷ್ಟು ಸಹಾಯವನ್ನು ಪಡೆಯಲಿದ್ದಾರೆ. ಡಿಒಟಿ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ಈ ಕುರಿತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 30 ರೊಳಗೆ ಎಲ್ಲರೂ ಇದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. RoW ಪೋರ್ಟಲ್‌ನ ಹೊಸ ನಿಯಮಗಳು ಜನವರಿ 1 ರಿಂದ ಜಾರಿಗೆ ಬರಲಿದೆ.

ರೋ ನಿಯಮಗಳು ಯಾವುವು?

ಸರಳ ಪದಗಳಲ್ಲಿ ರೋ ನಿಯಮವನ್ನು ಹೇಳುವುದಾದರೆ, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯಲ್ಲಿ ಟವರ್‌ಗಳು ಅಥವಾ ಟೆಲಿಕಾಂ ಮೂಲಸೌಕರ್ಯಗಳನ್ನು ಸ್ಥಾಪಿಸಲು ಮಾನದಂಡಗಳನ್ನು ಹೊಂದಿಸುವ ನಿಯಮವಾಗಿದೆ. ಅದರ ಸಹಾಯದಿಂದ ಸರ್ಕಾರವು ಟೆಲಿಕಾಂ ಮೂಲಸೌಕರ್ಯವನ್ನು ಆಧುನೀಕರಿಸುವತ್ತ ಗಮನಹರಿಸುತ್ತದೆ.

ಆಸ್ತಿ ಮಾಲೀಕರು ಮತ್ತು ಟೆಲಿಕಾಂ ಪೂರೈಕೆದಾರರು ರೋ ನಿಯಮಗಳನ್ನು ಮಾತ್ರ ಅನುಸರಿಸುತ್ತಾರೆ. ಏಕೆಂದರೆ ಇದರ ಅಡಿಯಲ್ಲಿ, ಸಾರ್ವಜನಿಕ ಸುರಕ್ಷತೆ ಮತ್ತು ಪಾರದರ್ಶಕತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಜನವರಿ 1, 2025 ರಿಂದ ಹೊಸ ನಿಯಮಗಳು ಬರಲಿವೆ, ಅದರ ನಂತರ ಹಲವು ಬದಲಾವಣೆಗಳನ್ನು ಕಾಣಬಹುದು.

ಇದನ್ನೂ ಓದಿ: ಕೇವಲ 10,000 ರೂ. ಒಳಗೆ ಲಭ್ಯವಿರುವ ಟ್ರೆಂಡಿಂಗ್ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

5G ಮೇಲೆ ಸಂಪೂರ್ಣ ಗಮನ:

RoW ನ ಹೊಸ ನಿಯಮಗಳಲ್ಲಿ 5G ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಟೆಲಿಕಾಂ ಮೂಲಸೌಕರ್ಯವನ್ನು ತ್ವರಿತವಾಗಿ ಸ್ಥಾಪಿಸಲಾಗುತ್ತಿದೆ. 5G ಗಾಗಿ ಹೊಸ ಟವರ್‌ಗಳನ್ನು ಸ್ಥಾಪಿಸುವುದರ ಮೇಲೆ ಗಮನಹರಿಸುವುದರಿಂದ ವೇಗದ ನೆಟ್‌ವರ್ಕ್‌ಗಳಿಗೆ ಈ ನಿಯಮವು ಸಾಕಷ್ಟು ಧನಾತ್ಮಕವಾಗಿದೆ. ಇದರಲ್ಲಿ ಗರಿಷ್ಠ ಮಿತಿಯನ್ನೂ ನಿಗದಿಪಡಿಸಲಾಗುವುದು. ಈ ಹೊಸ RoW ನಿಯಮಗಳು ಮುಖೇಶ್ ಅಂಬಾನಿ ನೇತೃತ್ವದ ಜಿಯೋ, ಬಿಎಸ್​ಎನ್​​ಎಲ್, ಭಾರ್ತಿ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಸೇರಿದಂತೆ ಎಲ್ಲಾ ಭಾರತೀಯ ಟೆಲಿಕಾಂಗಳ ಬೆಳವಣಿಗೆಯ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರುತ್ತವೆ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ