ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ

ಕೇಂದ್ರ ಸರ್ಕಾರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಒಂದು ವೇಳೆ ಈ ಭದ್ರತಾ ತಂತ್ರವನ್ನು ಬಳಸದಿದ್ದರೆ ಖಂಡಿತ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಹೇಳಿದೆ. ಅಷ್ಟಕ್ಕೂ ಕೇಂದ್ರ ಯಾಕಾಗಿ ಈ ಎಚ್ಚರಿಕೆ ವಹಿಸಲು ಹೇಳಿದೆ. ಸೈಬರ್​​ ಕಳ್ಳರು ಪತ್ತೆ ಮಾಡಿದ ಮೋಸದ ಯಂತ್ರ ಯಾವುದು? ಒಂದು ವೇಳೆ ಈ ಮೋಸಕ್ಕೆ ಬಲಿಯಾದರೆ, ಏನು ಮಾಡುವುದು, ಕೇಂದ್ರ ನೀಡಿದ ಭದ್ರತಾ ತಂತ್ರ ಏನು? 

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 13, 2024 | 3:10 PM

ಕೇಂದ್ರ ಸರ್ಕಾರವು ಇತ್ತಿಚೇಗೆ ಎಲ್ಲ ಆಂಡ್ರಾಯ್ಡ್​​​​ ಬಳಕೆದಾರರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಹೊಸ ಭದ್ರತಾ ಎಚ್ಚರಿಕೆಯನ್ನು ನೀಡಿದೆ. ಅಷ್ಟಕ್ಕೂ ಭಾರತ ಸರ್ಕಾರ ನೀಡಿದ ಎಚ್ಚರಿಕೆ ಏನು? ನಿಮ್ಮ ಸೂಕ್ಷ್ಮ ಮಾಹಿತಿಯನ್ನು ಪಡೆಯಲು ಮತ್ತು ನಿಮ್ಮ ಫೋನ್‌ನಲ್ಲಿ ಅನಿಯಂತ್ರಿತ ಕೋಡ್​​ಗಳನ್ನು ತರುವ ಮೂಲಕ ಸೈಬರ್​​​ ಕಳ್ಳರು ನಿಮ್ಮ ವೈಯಕ್ತಿಕ ಡೇಟಾಗಳನ್ನು ಪಡೆಯಲು ಹೊಸ ಯಂತ್ರವನ್ನು ಹುಡುಕ್ಕಿದ್ದಾರೆ.

CERT-In ನಿಂದ ನೀಡಿದ ಭದ್ರತಾ ಬುಲೆಟಿನ್ ಪ್ರಕಾರ, ಸೈಬರ್​​​ ಕಳ್ಳರು ಫ್ರೇಮ್‌ವರ್ಕ್, ಸಿಸ್ಟಮ್, Google Play ಸಿಸ್ಟಮ್, RM ಘಟಕಗಳು, MediaTek ಘಟಕಗಳು, ಇಮ್ಯಾಜಿನೇಶನ್ ಘಟಕಗಳು, Qualcomm ಕಾಂಪೊನೆಂಟ್‌ಗಳು ಮತ್ತು Qualcomm ಕ್ಲೋಸ್-ಸೋರ್ಸ್ಡ್ ಕಾಂಪೊನೆಂಟ್‌ಗಳಲ್ಲಿ ಇದನ್ನು ಅಳವಡಿಸಿದ್ದಾರೆ. ಇದು Android ಆವೃತ್ತಿ 12, 12L, 13, ಮತ್ತು 14 ರ ಮೇಲೆ ಪರಿಣಾಮ ಬೀರುತ್ತವೆ.

ಇನ್ನು ನಮ್ಮ ಭಾರತದಲ್ಲಿ ಈ ಆವೃತ್ತಿ ಫೋನ್​​​ಗಳನ್ನು ಬಳಕೆ ಮಾಡುವವರ ಸಂಖ್ಯೆ 10 ಮಿಲಿಯನ್‌ಗಿಂತಲೂ ಹೆಚ್ಚಿದೆ ಎಂದು ಹೇಳಲಾಗಿದೆ. Samsung, Realme, OnePlus, Xiaomi ಮತ್ತು Vivo ನಂತಹ ಬ್ರ್ಯಾಂಡ್‌ಗಳು ಈ ಸಮಸ್ಯೆ ಬಗ್ಗೆ ಕಾಳಜಿಯನ್ನು ವಹಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಒಂದು ವೇಳೆ ಇಂತಹ ಸಮಸ್ಯೆಗಳು ಕಂಡು ಬಂದರೆ ತಕ್ಷಣ ಅದರ ಬಗ್ಗೆ ಎಚ್ಚರಿಕೆಯನ್ನು ವಹಿಸಿ ಎಂದು ಕೇಂದ್ರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಸಿಮ್ ಬದಲಾಯಿಸಲು, ನಂಬರ್ ಪೋರ್ಟ್ ಮಾಡಲು ಜುಲೈ 1ರಿಂದ ಹೊಸ ನಿಯಮ

ಇಂತಹ ಸೈಬರ್​​ ಕಳ್ಳಾಟದಿಂದ ಕಾಪಾಡಲು ಈಗಾಗಲೇ ಭದ್ರತಾ ಪ್ಯಾಚ್ ಬಿಡುಗಡೆ ಮಾಡಲಾಗಿದೆ. ಇದು ಇಂತಹ ಸಮಸ್ಯೆಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತದೆ. ಇದರ ಜತೆಗೆ ಹೆಚ್ಚಿನ ಫೋನ್ ಬ್ರ್ಯಾಂಡ್‌ಗಳಿಗೆ ಈ ಸಮಸ್ಯೆಗಳ ಕುರಿತು ಸೂಚನೆ ನೀಡುತ್ತದೆ. ಈ ತಂತ್ರದ ಬಗ್ಗೆ ಸೆಟ್ಟಿಂಗ್‌ಗಳು, ಸಿಸ್ಟಮ್ ಅಪ್‌ಡೇಟ್, ಸಾಫ್ಟ್‌ವೇರ್​​ಗಳಲ್ಲಿ ನವೀಕರಣದ ಮಾಡಲಾಗಿದೆ. ಈ ಬಗ್ಗೆ ನೀವು ಒಮ್ಮೆ ಪರಿಶೀಲನೆ ಮಾಡಬಹುದು. ಹಾಗೂ ಈ ಭದ್ರತಾ ಪ್ಯಾಚ್ ಅಕ್ರಮ ವೆಬ್‌ಸೈಟ್‌, ಲಿಂಕ್​​ಗಳನ್ನು ಓಪನ್​​ ಮಾಡದಂತೆ ಎಚ್ಚರಿಕೆಯನ್ನು ನೀಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ