Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme Narzo 50: 50MP ಕ್ಯಾಮೆರಾ, ಬೊಂಬಾಟ್ ಬ್ಯಾಟರಿ: ಭಾರತದಲ್ಲಿ 12,999 ರೂ. ಗೆ ರಿಯಲ್‌ ಮಿ ನಾರ್ಜೊ 50 ಬಿಡುಗಡೆ

Realme Narzo 50 Launched: ಸದ್ಯ ಭಾರತದ ಮಾರುಕಟ್ಟೆಯಲ್ಲಿ ಹೊಸ ರಿಯಲ್‌ ಮಿ ನಾರ್ಜೊ 50 (Realme Narzo 50) ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಬಲಿಷ್ಠ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ, ಮೀಡಿಯಾಟೆಕ್‌ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಈ ಫೋನ್ ಸಾಕಷ್ಟು ವಿಶೇಷವಾಗಿದೆ.

Realme Narzo 50: 50MP ಕ್ಯಾಮೆರಾ, ಬೊಂಬಾಟ್ ಬ್ಯಾಟರಿ: ಭಾರತದಲ್ಲಿ 12,999 ರೂ. ಗೆ ರಿಯಲ್‌ ಮಿ ನಾರ್ಜೊ 50 ಬಿಡುಗಡೆ
Realme Narzo 50 5G
Follow us
TV9 Web
| Updated By: Vinay Bhat

Updated on: Feb 24, 2022 | 2:51 PM

ರಿಯಲ್ ಮಿ ಕಂಪನಿ ಭಾರತದಲ್ಲಿ ಇತ್ತೀಚೆಗಷ್ಟೆ ತನ್ನ ಬಹುನಿರೀಕ್ಷಿತ ಹೊಸ ರಿಯಲ್‌ ಮಿ 9 ಪ್ರೊ 5G (Realme 9 Pro 5G) ಮತ್ತು ರಿಯಲ್‌ ಮಿ 9 ಪ್ರೊ + 5G (Realme 9 Pro+ 5G) ಮಿಡ್ ರೇಂಜ್​ನ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಇದರ ಬೆನ್ನಲ್ಏ ಇದೀಗ ಬಜೆಟ್ ಬೆಲೆಗೆ ಹೊಸ ಫೋನ್ ಅನ್ನು ಲಾಂಚ್ ಮಾಡಿದೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಹೊಸ ರಿಯಲ್‌ ಮಿ ನಾರ್ಜೊ 50 (Realme Narzo 50) ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಬಲಿಷ್ಠ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ, ಮೀಡಿಯಾಟೆಕ್‌ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಈ ಫೋನ್ ಸಾಕಷ್ಟು ವಿಶೇಷವಾಗಿದೆ. ಹಾಗಾದ್ರೆ ಈ ರಿಯಲ್‌ ಮಿ ನಾರ್ಜೊ 50 ಸ್ಮಾರ್ಟ್‌ಫೋನಿನ ಬೆಲೆ ಎಷ್ಟು?, ಏನು ಫೀಚರ್ಸ್ ಎಂಬ ಬಗ್ಗೆ ನೋಡೋಣ.

ಬೆಲೆ ಎಷ್ಟು?:

ಭಾರತದಲ್ಲಿ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಎರಡು ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ಮಾದರಿಗೆ ಕೇವಲ 12,999 ರೂ. ನಿಗದಿ ಮಾಡಲಾಗಿದೆ. ಇನ್ನು 6GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 15,499 ರೂ.ಆಗಿದೆ. ಈ ಸ್ಮಾರ್ಟ್‌ಫೋನ್‌ ಸ್ಪೀಡ್ ಬ್ಲ್ಯಾಕ್ ಮತ್ತು ಸ್ಪೀಡ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್‌ ಸ್ಟೋರ್‌ಗಳಲ್ಲಿ ಮಾರ್ಚ್ 3ರಿಂದ  ಖರೀದಿಸಬಹುದಾಗಿದೆ.

ಏನು ವಿಶೇಷತೆ?:

ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಮತ್ತು 600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸಸ್​ನಿಂದ ಕೂಡಿದೆ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ರಿಯಲ್‌ಮಿ UI 2.0 ಜೊತೆಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ವರ್ಚುವಲ್ ಮೆಮೊರಿಯಾಗಿ ಬಳಸಿಕೊಳ್ಳುವ ಮೂಲಕ ಲಭ್ಯವಿರುವ ಮೆಮೊರಿಯನ್ನು 11GB ವರೆಗೆ ವಿಸ್ತರಿಸಲು ಡೈನಾಮಿಕ್ RAM ವಿಸ್ತರಣೆ ವೈಶಿಷ್ಟ್ಯವನ್ನು ಸಹ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಈ ಫೋನಿನ ಕ್ಯಾಮೆರಾ ಭರ್ಜರಿ ಆಗಿದ್ದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ಡಾರ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕೇವಲ 70 ನಿಮಿಷಗಳಲ್ಲಿ 0-100% ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ ಮತ್ತು GPS ನಿಂದ ಕೂಡಿದೆ.

iPhone 13: ಐಫೋನ್ 13 ಖರೀದಿಗೆ ಕ್ಯೂ ನಿಂತ ಜನರು: ಏನಿದೆ ಗೊತ್ತೇ ಅಂತಹ ಆಫರ್?, ಇಲ್ಲಿದೆ ನೋಡಿ

Samsung Galaxy S22 Series: 12 ಗಂಟೆಗಳಲ್ಲಿ 70 ಸಾವಿನ ಬುಕ್ಕಿಂಗ್: ಊಹಿಸಲಾಗದ ಮಟ್ಟಿನಲ್ಲಿ ಗ್ಯಾಲಕ್ಸಿಯ ಈ ಫೋನ್​ಗೆ ಬೇಡಿಕೆ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ