ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್‌ನಲ್ಲಿ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ (Amazon Great Indian Festival sale) ಇನ್ನೂ ನಡೆಯುತ್ತಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್ಸ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಗಳನ್ನು ನೀಡಲಾಗಿದೆ. ಅಲ್ಲದೆ ಸ್ಮಾರ್ಟ್‌ಫೋನ್‌ಗಳನ್ನು (Smartphone) ಹೆಚ್ಚುವರಿ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ. ಅಕ್ಟೋಬರ್ 3ಕ್ಕೆ ಆರಂಭವಾಗಿರುವ ಈ ಮೇಳ ಈ ತಿಂಗಳ ಅಂತ್ಯದ ವರೆಗೆ ನಡೆಯಲಿದೆ. ಕೇವಲ ಸ್ಮಾರ್ಟ್‌ಫೋನ್ ಮಾತ್ರವಲ್ಲದೆ ಲ್ಯಾಪ್‌ಟಾಪ್ (Laptop), ಸ್ಮಾರ್ಟ್‌ವಾಚ್ (Smart Watch) ಸೇರಿದಂತೆ ಹಲವು ಸ್ಮಾರ್ಟ್‌ಡಿವೈಸ್‌ಗಳ ಮೇಲೆ ರಿಯಾಯಿತಿ ದೊರೆಯುತ್ತಿದೆ. ಅದರಂತೆ ಸದ್ಯ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಬೃಹತ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ (Battery Life Smartphones) ಬಗ್ಗೆ ವಿವರ ಇಲ್ಲಿದೆ ನೋಡಿ.
ಟೆಕ್ನೋ ಪೊವಾ 2 ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ ಕೇವಲ 10,999 ರೂ. ಬೆಲೆಯಲ್ಲಿ ಲಭ್ಯವಿದೆ. ಇದು 7000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಸಾಮರ್ಥ್ಯ ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ. ಇದನ್ನು 18W ಫಾಸ್ಟ್ ಚಾರ್ಜರ್ ಮೂಲಕ ಟಾಪ್ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.9-ಇಂಚಿನ ಬೃಹತ್ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಮೆರಾ ಹೊಂದಿದೆ.
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಕೂಡ ಅಮೆಜಾನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ನಲ್ಲಿ ಮಾರಾಟವಾಗುತ್ತಿದೆ. ಇದರ 6GB RAM ಮತ್ತು 128GB ಆಯ್ಕೆಗೆ 14,499 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಇಂಚಿನ LCD ಪ್ಯಾನಲ್ ಅನ್ನು 90Hz ರಿಫ್ರೆಶ್ ದರವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ 88 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಜೊತೆಗೆ 6000mAh ಬ್ಯಾಟರಿಯನ್ನು ಹೊಂದಿದೆ.
ಪೋಕೋ X3 ಪ್ರೊ ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಕೇವಲ 18,990 ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಗನ್ 860 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 5160mAh ಬ್ಯಾಟರಿ 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ.
ಬರೋಬ್ಬರಿ 6000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ, 18W ಚಾರ್ಜಿಂಗ್ ಬೆಂಬಲಿಸುವ ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್ 6.53-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊದಿದೆ. ಈ ಫೋನ್. ಸದ್ಯ ಅಮೆಜಾನ್‌ನಲ್ಲಿ ಈ ಫೋನ್ 10,499ರೂ.ಗಳಿಗೆ ಮಾರಾಟವಾಗುತ್ತಿದೆ.
WhatsApp backup: ಸದ್ಯದಲ್ಲೇ ಗೂಗಲ್ ಡ್ರೈವ್‌ನಲ್ಲಿ ವಾಟ್ಸ್ಆ್ಯಪ್ ಬ್ಯಾಕಪ್ ಸ್ಥಗಿತ: ತಕ್ಷಣವೇ ಹೀಗೆ ಮಾಡಿರಿ
5G Smartphone: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ ಬೆಸ್ಟ್ 5G ಸ್ಮಾರ್ಟ್ಫೋನ್ಗಳು ಇಲ್ಲಿದೆ ನೋಡಿ
(these phones will ensure you have enough power to keep going for well over a full day)