AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸ್ಮಾರ್ಟ್​ಫೋನ್ ಮೇಲೆ ಸ್ಕ್ರಾಚ್​ಗಳಿದ್ದರೆ ಈ ಟ್ರಿಕ್ ಫಾಲೋ ಮಾಡಿ

ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ಫೋನ್ ಸ್ಕ್ರಾಚ್ ಆದರೂ ಸಹ ನಿಮ್ಮ ಫೋನ್‌ ಸ್ಕ್ರಾಚ್ ಅನ್ನು ಹೇಗೆ ತೆಗೆಯಬಹುದು ಎಂದು ನಾವು ಲೇಖನದಲ್ಲಿ ತಿಳಿಸಲಾಗಿದೆ.

ನಿಮ್ಮ ಸ್ಮಾರ್ಟ್​ಫೋನ್ ಮೇಲೆ ಸ್ಕ್ರಾಚ್​ಗಳಿದ್ದರೆ ಈ ಟ್ರಿಕ್ ಫಾಲೋ ಮಾಡಿ
Smartphone Scratch
TV9 Web
| Updated By: Vinay Bhat|

Updated on: Sep 06, 2021 | 3:19 PM

Share

ಈಗಂತು ಸ್ಮಾರ್ಟ್‌ಫೋನ್ (Smartphone) ಖರೀದಿಸುವುದಕ್ಕಿಂತ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವುದು ಹೆಚ್ಚು ಕಷ್ಟ ಎಂದೇ ಹೇಳಬಹುದು. ಸಂಪೂರ್ಣ ದೊಡ್ಡ ಡಿಸ್‌ಪ್ಲೇ ಹೊಂದಿರುವ ಇಂದಿನ ಸ್ಮಾರ್ಟ್‌ಫೋನ್‌ಗಳನ್ನು ಹೇಗೆ ಕಾಪಾಡಿಕೊಂಡರೂ ಸಹ ಕೆಲವೊಮ್ಮೆ ಹಾನಿಯಾಗುತ್ತದೆ. ಇದಕ್ಕಾಗಿ ನೀವು ಮೊಬೈಲ್ ಬೀಳಿಸಬೇಕಾಗಿ ಏನು ಇಲ್ಲ. ಸತತವಾಗಿ ಉಪೊಯೋಗ ಮಾಡಿದರೂ ಸಾಕು ಹಾನಿಯಾಗುತ್ತದೆ. ಡಿಸ್ ಪ್ಲೇಗೆ ಸ್ಕ್ರೀನ್ ಕವರ್ ಹಾಕಿದ್ದರೂ ಅದು ಉಪಯೋಗಕ್ಕೆ ಬರೋದಿಲ್ಲ.

ಹಾಗಾಗಿ, ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ಫೋನ್ ಸ್ಕ್ರಾಚ್ ಆದರೂ ಸಹ ನಿಮ್ಮ ಫೋನ್‌ ಸ್ಕ್ರಾಚ್ ಅನ್ನು ಹೇಗೆ ತೆಗೆಯಬಹುದು ಎಂದು ನಾವು ಲೇಖನದಲ್ಲಿ ತಿಳಿಸಲಾಗಿದೆ.

ಮೊಟ್ಟೆಯ ಬಿಳಿಭಾಗ: ಹೌದು, ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಫೋನ್‌ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಮತ್ತು ಈ ಮಿಶ್ರಣದಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.

ಬೇಕಿಂಗ್ ಸೋಡಾ: ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ನಿವಾರಣೆ ಮಾಡಿ.

ಸ್ಕ್ರಾಚ್ ರಿಮೂವಲ್ ಕ್ರೀಮ್‌: ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಿ.

ಬೇಬಿ ಪೌಡರ್: ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗದಲ್ಲಿ ಹಚ್ಚಿರಿ.

ಸ್ಮಾರ್ಟ್​ಫೋನ್ ಪ್ರಿಯರಿಗೆ ಭರ್ಜರಿ ಸುದ್ದಿ: ರಿಯಲ್ ಮಿ X7, X7 ಪ್ರೊ ಫೋನ್​ಗೆ 3000 ರೂ. ಡಿಸ್ಕೌಂಟ್

WhatsApp: ವಾಟ್ಸ್​ಆ್ಯಪ್ ಮೇಲೆ ಬಿದ್ದಿದೆ ಹ್ಯಾಕರ್​​ಗಳ ಕಣ್ಣು: ಮಾಹಿತಿ ಕದಿಯಲು ಬಿಡುವ ʼಬಗ್ʼ ಬಗ್ಗೆ ಎಚ್ಚರ

(Tips and Tricks Here is the tricks to remove scratches from your smartphone)

ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್