AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Down: ಭಾರತ ಸೇರಿದಂತೆ ವಿಶ್ವದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ

Twitter: ಇದೀಗ ಭಾರತ ಸೇರಿದಂತೆ ವಿಶ್ವದ ಕೆಲ ಭಾಗಗಳಲ್ಲಿ ಟ್ವಿಟರ್ ಡೌನ್ ಆಗಿದೆ. ಭಾರತ, ಅಮೆರಿಕ ಸೇರಿ ಜಗತ್ತಿನ ಬಹುತೇಕ ದೇಶಗಳಲ್ಲಿ ಟ್ವಿಟರ್‌ ಡೌನ್‌ ಆಗಿದ್ದು, ಸಾವಿರಾರು ಜನರಿಗೆ ಸೈಟ್‌ ರಿಫ್ರೆಶ್‌ ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ.

Twitter Down: ಭಾರತ ಸೇರಿದಂತೆ ವಿಶ್ವದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ
ಎಲಾನ್ ಮಸ್ಕ್ ಮತ್ತು ಟ್ವಿಟರ್ ಲೋಗೊ
Follow us
TV9 Web
| Updated By: Vinay Bhat

Updated on: Dec 29, 2022 | 8:35 AM

ಕಳೆದ ಕೆಲವು ತಿಂಗಳುಗಳಿಂದ ಪ್ರಸಿದ್ಧ ಸಾಮಾಜಿಕ ಜಾಲತಾಣ ಟ್ವಿಟರ್ (Twitter) ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಟೆಸ್ಲಾ ಸಿಎಒ ಎಲಾನ್ ಮಸ್ಕ್ (Elon Musk) ಅವರು ಟ್ವಿಟರ್ ಅನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡ ಬಳಿಕ ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ. ಇದೀಗ ಭಾರತ ಸೇರಿದಂತೆ ವಿಶ್ವದ ಕೆಲ ಭಾಗಗಳಲ್ಲಿ ಟ್ವಿಟರ್ ಡೌನ್ ಆಗಿದೆ. ಬಳಕೆದಾರರು ಎಷ್ಟೇ ಪ್ರಯತ್ನಿಸಿದರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಡೌನ್​ಡಿಟೆಕ್ಟರ್ ಮಾಹಿತಿ ನೀಡಿದೆ. ಭಾರತ, ಅಮೆರಿಕ ಸೇರಿ ಜಗತ್ತಿನ ಬಹುತೇಕ ದೇಶಗಳಲ್ಲಿ ಟ್ವಿಟರ್‌ ಡೌನ್‌ (Twitter Down) ಆಗಿದ್ದು, ಸಾವಿರಾರು ಜನರಿಗೆ ಸೈಟ್‌ ರಿಫ್ರೆಶ್‌ ಆಗುತ್ತಿಲ್ಲ ಎಂದು ದೂರುತ್ತಿದ್ದಾರೆ.

ಅನೇಕ ಭಾಗದಲ್ಲಿ ಟ್ವಿಟರ್ ಡೌನ್ ಆಗಿದ್ದರ ಕುರಿತು ಅಲ್ಲಿನ ಬಳಕೆದಾರರು ಮಾಹಿತಿ ಹಂಚಿಕೊಂಡಿದ್ದರು. ಟ್ವಿಟರ್​ನಲ್ಲಿ ಪ್ರಸ್ತುತ ಟ್ವಿಟರ್ ಡೌನ್ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ. ಬಳಕೆದಾರರು ಮೀಮ್​ಗಳನ್ನು ಹರಿಬಿಡುತ್ತಿದ್ದು, ಟ್ವಿಟರ್ ಡೌನ್ ಆಗಿರುವುದೋ, ನಮ್ಮ ಇಂಟರ್​ನೆಟ್ಟೋ ತಿಳಿಯುತ್ತಿಲ್ಲ ಎಂದು ಟ್ವೀಟ್ ಮಾಡುತ್ತಿದ್ದಾರೆ. ಡೌನ್ ಡಿಟೆಕ್ಟರ್ ವೆಬ್‌ಸೈಟ್ ಪ್ರಕಾರ ದೆಹಲಿ, ನಾಗ್ಪುರ, ಮುಂಬೈ, ಹೈದರಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾ ಸೇರಿದಂತೆ ಹಲವಾರು ನಗರಗಳಲ್ಲಿ ಡೌನ್ ಆಗಿರುವ ಬಗ್ಗೆ ವರದಿ ಮಾಡಲಾಗಿದೆ.

Tech Tips: ಪೇಟಿಯಂ ಆ್ಯಪ್ ಮೂಲಕ ರೈಲು ಎಲ್ಲಿದೆ ಎಂದು ಟ್ರ್ಯಾಕ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್

ಇದನ್ನೂ ಓದಿ
Image
Call Before You Dig: 5G ಚಾಲನೆಗೆ ಮುನ್ನ CBUD ಆಪ್ ಕಡ್ಡಾಯವಾಗಿ ಬಳಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
Image
Tech Tips: ವಾಟ್ಸ್​ಆ್ಯಪ್​ನಲ್ಲಿ ಹೆಚ್ಚುತ್ತಿದೆ ಸ್ಕ್ಯಾಮ್: ಫೇಕ್ ಮೆಸೇಜ್​ಗಳನ್ನು ಈಗ ನೀವೇ ಕಂಡುಹಿಡಿಯಿರಿ
Image
Twitter Data: ಸುಂದರ್ ಪಿಚೈ, ಸಲ್ಮಾನ್ ಖಾನ್ ಸೇರಿ 40 ಕೋಟಿ ಟ್ವಿಟರ್ ಬಳಕೆದಾರರ ವೈಯಕ್ತಿಕ ವಿವರ ಡಾರ್ಕ್​ವೆಬ್​ನಲ್ಲಿ ಮಾರಾಟಕ್ಕೆ; ವರದಿ
Image
Infinix Zero Ultra: 200MP ಕ್ಯಾಮೆರಾದ ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?

ಅಮೆರಿಕ ಕಾಲಮಾನ ಬುಧವಾರ ರಾತ್ರಿ 7. 40 ರ ಸಮಯದಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ 10,000 ಕ್ಕೂ ಹೆಚ್ಚು ಬಳಕೆದಾರರು ಟ್ವಿಟರ್​ನಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಅದೇ ರೀತಿ, ಭಾರತದಲ್ಲೂ ಸಹ ಗುರುವಾರ ಬೆಳಗ್ಗೆ 6.30 ರ ಸುಮಾರಿನಿಮದ ವೆಬ್‌ ಆವೃತ್ತಿ ಅಥವಾ ಡೆಸ್ಕ್‌ಟಾಪ್‌ ಆವೃತ್ತಿಗೆ ಸೈನ್ ಇನ್ ಮಾಡುವಲ್ಲಿ ಅನೇಕ ತೊಂದರೆಗಳನ್ನು ಎದುರಿಸಿದ ಕಾರಣ ಹಲವಾರು ಬಳಕೆದಾರರಿಗೆ ಡೌನ್ ಆಗಿದೆ. ಈ ಬಗ್ಗೆ ಟ್ವಿಟರ್ ಇನ್ನೂ ಮಾಹಿತಿ ನೀಡಿಲ್ಲ. ಟ್ವಿಟರ್ ಮೊಬೈಲ್ ಆವೃತ್ತಿಯಲ್ಲಿ ಯಾವುದೇ ತೊಂದರೆ ಇಲ್ಲದೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದುಬಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ