Vivo Y16: ಬಜೆಟ್ ಪ್ರಿಯರು ಫುಲ್ ಫಿದಾ: ಭಾರತದಲ್ಲಿ ಹೊಸ ವಿವೋ Y16 ಸ್ಮಾರ್ಟ್‌ಫೋನ್ ಬಿಡುಗಡೆ
ವಿವೋ ಕಂಪನಿ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ವಿವೋ ವೈ16 (Vivo Y16) ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್ಗಳನ್ನು ಒಳಗೊಂಡಿದೆ.

ವಿವೊ ಸ್ಮಾರ್ಟ್‌ಫೋನ್ (ಸಾಂದರ್ಭಿಕ ಚಿತ್ರ)
ಪ್ರಸಿದ್ಧ ವಿವೋ (Vivo) ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್ಫೋನುಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ವಿವೋ ವಿ75 ಎಂಬ ಆಕರ್ಷಕ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದ್ದ ಕಂಪನಿ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ವಿವೋ ವೈ16 (Vivo Y16) ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಬಗ್ಗೆ ಮಾಹಿತಿ ಇಲ್ಲಿದೆ.
- ಭಾರತದಲ್ಲಿ ವಿವೋ Y16 ಸ್ಮಾರ್ಟ್‌ಫೋನ್ ಭಾರತದಲ್ಲಿ ಸದ್ಯಕ್ಕೆ ಒಂದು ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ 12,499ರೂ. ನಿಗದಿ ಮಾಡಲಾಗಿದೆ.
- ಈ ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51ಇಂಚಿನ IPS LCD HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
- ಮೀಡಿಯಾಟೆಕ್ ಹೆಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ.
- ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
- ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಕ್ಯಾಮೆರಾದಲ್ಲಿ ಪನೋರಮಾ, ಫೇಸ್ ಬ್ಯೂಟಿ, ಲೈವ್ ಫೋಟೋ, ಟೈಮ್–ಲ್ಯಾಪ್ಸ್ ಫೀಚರ್ಸ್ ಸೇರಿಸಲಾಗಿದೆ.
- ವಿವೋ Y16 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೈರ್ಡ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18 ಗಂಟೆಗಳವರೆಗೆ ವೀಡಿಯೊ ಸ್ಟ್ರೀಮಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ, ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್–ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಸ್ಕ್ರಾಚ್–ರೆಸಿಸ್ಟೆಂಟ್ ರಿಯರ್ ಪ್ಯಾನಲ್ ಅನ್ನು ಅಳವಡಿಸಲಾಗಿದೆ.
ಇದನ್ನೂ ಓದಿ
TECNO POVA Neo 5G smartphone: ಮಾರುಕಟ್ಟೆಗೆ ಇಂದು ಅಗ್ಗದ ಬೆಲೆಯಲ್ಲಿ ಲಗ್ಗೆ ಇಡಲಿದೆ ಹೊಸ ಮೊಬೈಲ್; ಬೆಲೆ, ವೈಶಿಷ್ಟ್ಯಗಳು ಹೀಗಿವೆ
Flipkart-Amazon: ಇಂದಿನಿಂದ ಅಮೆಜಾನ್-ಫ್ಲಿಪ್ಕಾರ್ಟ್ನಲ್ಲಿ ವರ್ಷದ ಅತಿ ದೊಡ್ಡ ಸೇಲ್: ಗ್ರಾಹಕರಿಗೆ ಆಫರ್ಗಳ ಸುರಿಮಳೆ
Flipkart’s Big Billion Days sale: ಕೇವಲ 30,000 ರೂ. ಒಳಗೆ ಸಿಗುತ್ತಿದೆ ನಥಿಂಗ್ ಫೋನ್, ಗೂಗಲ್ ಪಿಕ್ಸೆಲ್ ಫೋನ್: ಈ ಆಫರ್ ಮತ್ತೆ ಬರಲ್ಲ
Amazon Great Indian Festival Sale: ಪ್ರೈಮ್ ಸದಸ್ಯರಿಗೆ ಅಮೆಜಾನ್ನಲ್ಲಿ ಬಹುನಿರೀಕ್ಷಿತ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಆರಂಭ: ಏನಿದೆ ಆಫರ್?