Vivo V25e
ಪ್ರಸಿದ್ಧ ವಿವೋ ಕಂಪನಿಯ V ಸರಣಿಯ ಸ್ಮಾರ್ಟ್ಫೋನ್ಗಳಿಗೆ (Smartphone) ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಈ ಸರಣಿಯಡಿಯಲ್ಲಿ ಈಗಾಗಲೇ ಅನೇಕ ಫೋನ್ಗಳು ಬಿಡುಗಡೆ ಮಾಡಿದ್ದು ಯಶಸ್ಸು ಕೂಡ ಸಾಧಿಸಿದೆ. ಇತ್ತೀಚೆಗಷ್ಟೆ ಭಾರತದಲ್ಲಿ ವಿವೋ ಕಂಪನಿ ವಿವೋ V25 ಪ್ರೊ (Vivo V25 Pro) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಇದರ ಬೆನ್ನಲ್ಲೇ ಕಂಪನಿ ವಿ ಸರಣಿಯಲ್ಲಿ ಮತ್ತೊಂದು ಫೋನನ್ನು ಬಿಡುಗಡೆ ಮಾಡಿದೆ. ಅದುವೇ ವಿವೋ V25ಇ (Vivo V25e) ಸ್ಮಾರ್ಟ್‌ಫೋನ್. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್ಗಳಿಂದ ಕೂಡಿದೆ. 64 ಮೆಗಾಫಿಕ್ಸೆಲ್ ಕ್ಯಾಮೆರಾ, ಬೊಂಬಾಟ್ ಬ್ಯಾಟರಿ, ಫಾಸ್ಟ್ ಚಾರ್ಜರ್ ಸೇರಿದಂತೆ ಅತ್ಯುತ್ತಮ ಆಯ್ಕೆಗಳಿವೆ. ಹಾಗಾದರೆ ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಬಗೆಗಿನ ಮಾಹಿತಿ ಇಲ್ಲಿದೆ.
- ವಿವೋ V25e ಸ್ಮಾರ್ಟ್‌ಫೋನ್ ಸದ್ಯಕ್ಕೆ ಮಲೇಷ್ಯಾದಲ್ಲಿ ಮಾತ್ರ ರಿಲೀಸ್ ಆಗಿದೆ. ಇದರ 8GB RAM + 256GB ಸ್ಟೋರೇಜ್ಗೆ RM 1,399, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 24,915ರೂ. ಎನ್ನಬಹುದು.
- ಈ ಸ್ಮಾರ್ಟ್‌ಫೋನ್ 6.44-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 2404*1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ.
- ಮೀಡಿಯಾ ಟೆಕ್ ಹೀಲಿಯೊ G99 6nmಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನ ಫನ್‌ಟಚ್ OS 12 ಬೆಂಬಲವನ್ನು ಪಡೆದುಕೊಂಡಿದೆ.
- ಈ ಸ್ಮಾರ್ಟ್ಫೋನ್ನಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ನೀಡಲಾಗಿದೆ. ಜೊತೆಗೆ LED ಫ್ಲ್ಯಾಸ್ ಕೂಡ ಇದೆ.
- ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೊ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ.
- ಮುಂಭಾಗ ಕೂಡ ಆಕರ್ಷಕವಾದ 32-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದು f/2.0 ಪಾರ್ಚರ್ನೊಂದಿಗೆ ಬರುತ್ತದೆ.
- 44W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಅತ್ಯಂತ ವೇಗವಾಗಿ ಮೊಬೈಲ್ ಅನ್ನು ಚಾರ್ಜ್ ಮಾಡುತ್ತದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್–ಬ್ಯಾಂಡ್ Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.