Vivo Y55 5G: ಜನವರಿಯಲ್ಲಿ 4 ಫೋನ್ ಬಿಡುಗಡೆ ಮಾಡಿರುವ ವಿವೋ: ಇದೀಗ 5ನೇ ಸ್ಮಾರ್ಟ್​ಫೋನ್​ ರಿಲೀಸ್​ಗೆ ರೆಡಿ

ವಿವೋ ಕಂಪನಿ ಈ ಫೋನಿನ ವಿಶೇಷತೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ಮೂಲಗಳ ಪ್ರಕಾರ ವಿವೋ Y55 5G ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 12 ಆಧಾರಿತ ಫನ್‌ಟಚ್‌OS UI ನಲ್ಲಿ ಕಾರ್ಯನಿರ್ವಹಿಸುತ್ತದೆ ಎನ್ನಲಾಗಿದೆ. ಜೊತೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ ಜೊತೆಗೆ ಬಜೆಟ್ ಬೆಲೆಯಿಂದ ಕೂಡಿರಲಿದೆ ಎನ್ನಲಾಗಿದೆ.

Vivo Y55 5G: ಜನವರಿಯಲ್ಲಿ 4 ಫೋನ್ ಬಿಡುಗಡೆ ಮಾಡಿರುವ ವಿವೋ: ಇದೀಗ 5ನೇ ಸ್ಮಾರ್ಟ್​ಫೋನ್​ ರಿಲೀಸ್​ಗೆ ರೆಡಿ
Vivo Y55 5G
Edited By:

Updated on: Jan 21, 2022 | 3:33 PM

ಪ್ರಸಿದ್ಧ ವಿವೋ (Vivo) ಕಂಪನಿ ಭಾರತೀಯ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡುತ್ತಿದೆ. ವರ್ಷದ ಆರಂಭದಲ್ಲಿ ಬಜೆಟ್ ಬೆಲೆಯ ವಿವೋ ವೈ21ಟಿ ಫೋನ್ ಮತ್ತು ವಿವೋ 23 5G ಹಾಗೂ ವಿವೋ ವಿ23 ಪ್ರೊ 5ಜಿ ಫೋನನ್ನು ಅನಾವರಣ ಮಾಡಿತ್ತು. ಇದರ ಬೆನ್ನಲ್ಲೇ ವಿವೋ ವೈ33ಟಿ (Vivo Y33T) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿತ್ತು. ಹೀಗೆ ಈ ತಿಂಗಳು ವಿವೋ ಕಂಪನಿ ಭಾರತದಲ್ಲಿ ಬಿಡುಗಡೆ ಮಾಡಿರುವ ಫೋನ್ ಒಟ್ಟು ನಾಲ್ಕು. ಇದೀಗ ತನ್ನ 5ನೇ ಫೋನ್ ಲಾಂಚ್ ಮಾಡಲು ತಯಾರಿ ಆರಂಭಿಸಿದೆ. ಹೌದು, ಇದೀಗ ತನ್ನ ಜನಪ್ರಿಯ ವಿವೋ ‘Y’ ಸರಣಿಯ ಅಡಿಯಲ್ಲಿ ಮತ್ತೊಂದು ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ವಿವೋ ವೈ55 5ಜಿ (VIvo Y55 5G) ಎಂದು ಹೆಸರಿಸಲಾಗಿದೆ. ಇದೇ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ ಈ ಫೋಣ್ ಅನಾವರಣಗೊಳ್ಳಲಿದೆಯಂತೆ.

ವಿವೋ ಕಂಪನಿ ಈ ಫೋನಿನ ವಿಶೇಷತೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ಮೂಲಗಳ ಪ್ರಕಾರ ವಿವೋ Y55 5G ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 12 ಆಧಾರಿತ ಫನ್‌ಟಚ್‌OS UI ನಲ್ಲಿ ಕಾರ್ಯನಿರ್ವಹಿಸುತ್ತದೆ ಎನ್ನಲಾಗಿದೆ. ಜೊತೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ ಜೊತೆಗೆ ಬಜೆಟ್ ಬೆಲೆಯಿಂದ ಕೂಡಿರಲಿದೆ ಎನ್ನಲಾಗಿದೆ.

ವಿವೋ Y55 5G ಸ್ಮಾರ್ಟ್‌ಫೋನ್‌ 2408×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ HD + LCD ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಈ ಡಿಸ್‌ಪ್ಲೇ 20:9ರಚನೆಯ ಅನುಪಾತ ಹೊಂದಿರಲಿದೆ ಎಂದು ಹೇಳಲಾಗಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್‌ ಬಲವನ್ನು ಅಳವಡಿಸಲಾಗಿದೆಯಂತೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ-SD ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವ ಸಾಧ್ಯತೆ ಇದೆ. ಇದು ವೇಗದ ಚಾರ್ಜಿಂಗ್‌ ಅನ್ನು ಕೂಡ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ 5.1, GPS, BEIDOU, GLONASS, GALILEO, QZSS, ಮತ್ತು USB ಟೈಪ್-C ಪೋರ್ಟ್ ಇರಲಿದೆ ಎಂಬ ಮಾಹಿತಿಯಷ್ಟೆ ಹೊರಬಿದ್ದಿದೆ.

iQoo 9 Pro: ಭಾರತದಲ್ಲಿ ರಿಲೀಸ್​ಗೆ ರೆಡಿಯಾದ ಮತ್ತೊಂದು 120W ಫಾಸ್ಟ್ ಚಾರ್ಜಿಂಗ್ ಸ್ಮಾರ್ಟ್​ಫೋನ್

Tecno Pova Neo: ಬಜೆಟ್ ಪ್ರಿಯರು ಫುಲ್ ಶಾಕ್: ಈ ಫೋನ್​ನಲ್ಲಿ ಇಷ್ಟು ಕಡಿಮೆ ಬೆಲೆಗೆ ಎಷ್ಟೊಂದು ಫೀಚರ್ಸ್