Vivo Y21G: ಭಾರತದಲ್ಲಿ ಕೇವಲ 13,990 ರೂಪಾಯಿಗೆ ಲಾಂಚ್​ ಆಗಿದೆ ವಿವೋ Y21G ಸ್ಮಾರ್ಟ್​​ಫೋನ್

ಪ್ರಸಿದ್ಧ ವಿವೋ ಕಂಪನಿ ಇದೀಗ ದೇಶದಲ್ಲಿ ತನ್ನ ಹೊಸ ವಿವೋ ವೈ21ಜಿ (Vivo Y21G) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಬಜೆಟ್-ಸ್ನೇಹಿ ಸ್ಮಾರ್ಟ್‌ಫೋನ್ ಕಂಪನಿಯ Y-ಸರಣಿ ಶ್ರೇಣಿಗೆ ಸೇರ್ಪಡೆಯಾಗಿದೆ.

Vivo Y21G: ಭಾರತದಲ್ಲಿ ಕೇವಲ 13,990 ರೂಪಾಯಿಗೆ ಲಾಂಚ್​ ಆಗಿದೆ ವಿವೋ Y21G ಸ್ಮಾರ್ಟ್​​ಫೋನ್
Vivo Y21G
Follow us
TV9 Web
| Updated By: Vinay Bhat

Updated on: Apr 08, 2022 | 1:45 PM

ಭಾರತದಲ್ಲಿ ತಿಂಗಳಿಗೆ ಒಂದರಂತೆ ಹೊಸ ಹೊಸ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಭದ್ರವಾಗಿ ನೆಲೆಯೂರುತ್ತಿರುವ ಪ್ರಸಿದ್ಧ ವಿವೋ ಕಂಪನಿ ಇದೀಗ ದೇಶದಲ್ಲಿ ತನ್ನ ಹೊಸ ವಿವೋ ವೈ21ಜಿ (Vivo Y21G) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಬಜೆಟ್-ಸ್ನೇಹಿ ಸ್ಮಾರ್ಟ್‌ಫೋನ್ ಕಂಪನಿಯ Y-ಸರಣಿ ಶ್ರೇಣಿಗೆ ಸೇರ್ಪಡೆಯಾಗಿದೆ. ಮೀಡಿಯಾಟೆಕ್‌ MT6769 ಪ್ರೊಸೆಸರ್‌ ಬಲವನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್‌ 6.51 ಇಂಚಿನ LCD ಡಿಸ್‌ಪ್ಲೇ, 13-ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. 4GB RAM ನೊಂದಿಗೆ ಜೋಡಿಸಲಾಗಿದ್ದು ಮೆಮರಿ 1GBಯನ್ನು ವಿಸ್ತರಿಸಲು Extended RAM ವೈಶಿಷ್ಟ್ಯವನ್ನು ಬೆಂಬಲಿಸುತ್ತದೆ. ಬಲಿಷ್ಠವಾದ ಬ್ಯಾಟರಿಯನ್ನು ಕೂಡ ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಭಾರತದಲ್ಲಿ ವಿವೋ Y21G ಸ್ಮಾರ್ಟ್‌ಫೋನ್‌ ಏಕೈಕ ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 13,990 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಡೈಮಂಡ್ ಗ್ಲೋ ಮತ್ತು ಮಿಡ್‌ನೈಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ವಿವೋ ಪ್ರಕಾರ ರಿಟೇಲ್ ಅಂಗಡಿಗಳಿಂದ ಖರೀದಿಸಲು ಲಭ್ಯವಿದೆ.‌

ಏನು ವಿಶೇಷತೆ?:

ವಿವೋ Y21G ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ರಚನೆಯ ಅನುಪಾತ 20:9 ರಷ್ಟಿದೆ. ಇದು 270ppi ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಮೀಡಿಯಾಟೆಕ್‌ MT6769 ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ ಫನ್‌ಟೌಚ್‌ OS 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ವಿಸ್ತೃತ RAM ಫೀಚರ್ಸ್‌ ಅನ್ನು ಹೊಂದಿದ್ದು, ಬಳಕೆಯಾಗದ ಸ್ಟೋರೇಜ್‌ ಬಳಸಿಕೊಂಡು 1GB ವರೆಗೆ ಮೆಮೊರಿಯನ್ನು ವಿಸ್ತರಿಸಲು ಬಳಕೆದಾರರಿಗೆ ಅವಕಾಶ ನೀಡುತ್ತದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದು 18W ವೇಗದ ಚಾರ್ಜಿಂಗ್‌ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ v5 ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇತರ ಸೆನ್ಸರಗಳಲ್ಲಿ ಅಕ್ಸೆಲೆರೊಮೀಟರ್, ಆಂಬಿಯಂಟ್‌ ಲೈಟ್‌ ಸೆನ್ಸರ್, ಪ್ರಾಕ್ಸಿಮೀಟರ್, ಇ-ಕಂಪಾಸ ಮತ್ತು ಗೈರೊಸ್ಕೋಪ್ ಸೇರಿವೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸ್ಮಾರ್ಟ್​ಫೋನ್​ ಫಿಂಗರ್ಪ್ರಿಂಟ್ ಸಂವೇದಕವನ್ನು ಹೊಂದಿದೆ.

Realme GT 2 Pro: ಭಾರತದಲ್ಲಿ ರಿಯಲ್‌ ಮಿ GT 2 ಪ್ರೊ ಫೋನ್ ಬಿಡುಗಡೆ: ಖರೀದಿಸಲು ಕ್ಯೂ ಗ್ಯಾರಂಟಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ