Vivo Y33e 5G: ಸದ್ದಿಲ್ಲದೆ ಬಜೆಟ್ ಬೆಲೆಗೆ ಬಿಡುಗಡೆ ಆಗಿದೆ ವಿವೋ Y33e 5G ಸ್ಮಾರ್ಟ್‌ಫೋನ್: ಏನು ವಿಶೇಷತೆ?
ವಿವೋ Y33e 5G ಸ್ಮಾರ್ಟ್‌ಫೋನ್ ಚೀನಾದಲ್ಲಿ ಒಂದು ಮಾದರಿಯಲ್ಲಿ ಮಾತ್ರ ಬಿಡುಗಡೆಯಾಗಿದೆ. 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ CNY 1,299, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 15,000 ರೂ. ಎನ್ನಬಹುದು.
ಪ್ರಸಿದ್ಧ ವಿವೋ (Vivo) ಕಂಪನಿ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಈ ವರ್ಷ ಒಂದರ ಹಿಂದೆ ಒಂದರಂತೆ ಹೊಸ ಹೊಸ ಫೋನಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಸದ್ಯ ಇದೀಗ ಸದ್ದಿಲ್ಲದೆ ತನ್ನ ಹೊಸ ವಿವೋ ವೈ23ಇ 5ಜಿ (Vivo Y33e 5G) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಮೊದಲು ಚೀನಾ ಮಾರುಕಟ್ಟೆಲ್ಲಿ ಅನಾವರಣಗೊಂಡಿರುವ ಈ ಸ್ಮಾರ್ಟ್‌ಫೋನ್ ಸದ್ಯದಲ್ಲೇ ಭಾರತಕ್ಕೂ ಕಾಲಿಡಲಿದೆ ಎಂದು ಹೇಳಲಾಗಿದೆ. ಬಜೆಗ ಬೆಲೆಯ ಈ ಸ್ಮಾರ್ಟ್‌ಫೋನ್ ಮಿಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿರುವುದು ವಿಶೇಷ. ಜೊತೆಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಇದರ ಬೆಲೆ ಎಷ್ಟು?, ಏನೆಲ್ ಫೀಚರ್ಸ್ ಇವೆ ಎಂಬುದನ್ನು ನೋಡೋಣ.
- ವಿವೋ Y33e 5G ಸ್ಮಾರ್ಟ್‌ಫೋನ್ ಚೀನಾದಲ್ಲಿ ಒಂದು ಮಾದರಿಯಲ್ಲಿ ಮಾತ್ರ ಬಿಡುಗಡೆಯಾಗಿದೆ. 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯಕ್ಕೆ CNY 1,299, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 15,000 ರೂ. ಎನ್ನಬಹುದು. ಈ ಸ್ಮಾರ್ಟ್‌ಫೋನ್ ಫ್ಲೋರೈಟ್ ಬ್ಲಾಕ್ ಮತ್ತು ಮ್ಯಾಜಿಕ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.
- 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51 ಇಂಚಿನ LCD ಸ್ಕ್ರೀನ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್, 20:9 ರಚನೆಯ ಅನುಪಾತ ಮತ್ತು 88.99% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.
- ಈ ಸ್ಮಾರ್ಟ್‌ಫೋನ್ ಮಿಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಒರಿಜಿನ್ ಓಷನ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
- ವಿವೋ Y33e 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
- ಈ ಫೋನಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ v5.1 ವೈರ್‌ಲೆಸ್ ಸಂಪರ್ಕವನ್ನು ಬೆಂಬಲಿಸುತ್ತದೆ. ಇದು ಫೇಸ್ ವೇಕ್ ಫೀಚರ್ಸ್ ಅನ್ನು ಹೊಂದಿದ್ದು, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ನೀಡಲಾಗಿದೆ.
ಇದನ್ನೂ ಓದಿ