ಭಾರತದಲ್ಲಿ ವಿವೋ T3 5G ಬಿಡುಗಡೆಗೆ ಡೇಟ್ ಫಿಕ್ಸ್: ಯಾವಾಗ?, ಏನಿದೆ ಫೀಚರ್ಸ್?

Vivo T3 5G India Launch Date: ಮುಂಬರುವ ವಿವೋ T3 5G ಭಾರತದಲ್ಲಿ ಮಾರ್ಚ್ 21 ರಂದು ಮಧ್ಯಾಹ್ನ 12 PM IST ಕ್ಕೆ ಬಿಡುಗಡೆಯಾಗಲಿದೆ ಎಂದು ವಿವೋ ಬಹಿರಂಗಪಡಿಸಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತ ಚಿಲ್ಲರೆ ಅಂಗಡಿಗಳಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿರುತ್ತದೆ.

ಭಾರತದಲ್ಲಿ ವಿವೋ T3 5G ಬಿಡುಗಡೆಗೆ ಡೇಟ್ ಫಿಕ್ಸ್: ಯಾವಾಗ?, ಏನಿದೆ ಫೀಚರ್ಸ್?
Vivo T3 5G
Follow us
Vinay Bhat
|

Updated on: Mar 16, 2024 | 12:56 PM

ಚೀನಾ ಮೂಲದ ಪ್ರಸಿದ್ಧ ವಿವೋ ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಮತ್ತೊಂದು ಹೊಸ ಫೋನ್ ರಿಲೀಸ್ ಮಾಡುವ ಕುರಿತು ಮಾಹಿತಿ ಹಂಚಿಕೊಂಡಿದೆ. ಭಾರತದಲ್ಲಿ ವಿವೋ T3 5G (Vivo T3 5G) ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಕಂಪನಿ ದೃಢಪಡಿಸಿದೆ. ಈ ಹ್ಯಾಂಡ್‌ಸೆಟ್ ಇದೇ ಮಾರ್ಚ್ ತಿಂಗಳು ಭಾರತದಲ್ಲಿ ಅನಾವರಣಗೊಳ್ಳಲಿದೆ. 120Hz AMOLED ಡಿಸ್ಪ್ಲೇ, ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC, ಆಂಡ್ರಾಯ್ಡ್ 14 ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಈ ಫೋಣ್ ಆವೃತ್ತವಾಗಿದೆ.

ವಿವೋ T3 5G ಭಾರತ ಬಿಡುಗಡೆ ದಿನಾಂಕ, ಲಭ್ಯತೆ

ಮುಂಬರುವ ವಿವೋ T3 5G ಭಾರತದಲ್ಲಿ ಮಾರ್ಚ್ 21 ರಂದು ಮಧ್ಯಾಹ್ನ 12 PM IST ಕ್ಕೆ ಬಿಡುಗಡೆಯಾಗಲಿದೆ ಎಂದು ವಿವೋ ಬಹಿರಂಗಪಡಿಸಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತ ಚಿಲ್ಲರೆ ಅಂಗಡಿಗಳಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿರುತ್ತದೆ.

ಫೋನ್​ನಲ್ಲಿ ಡಿಲೀಟ್ ಆದ ಫೋಟೋ-ವಿಡಿಯೋಗಳನ್ನು ರಿಕವರಿ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್ಸ್

ವಿವೋ T3 5G ಬಿಡುಗಡೆ ದಿನಾಂಕದ ಚಿತ್ರವು ಫೋನ್‌ನ ಫ್ಲಾಟ್ ಡಿಸ್ಪ್ಲೇ ಮತ್ತು ಫ್ರೇಮ್ ಅನ್ನು ಬಹಿರಂಗಪಡಿಸುತ್ತದೆ. ಫೋನಿನ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್ ಜೊತೆಗೆ ನೀಡಲಾಗಿದೆ. ಈ ಫೋನ್ ಕಾಸ್ಮಿಕ್ ಬ್ಲೂ ಮತ್ತು ಕ್ರಿಸ್ಟಲ್ ಫ್ಲೇಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ವಿವೋ T3 5G ಫೀಚರ್ಸ್ (ವದಂತಿ)

ವಿವೋ T3 5G 6.67-ಇಂಚಿನ FHD + AMOLED ಡಿಸ್ಪ್ಲೇಯೊಂದಿಗೆ 120Hz ರಿಫ್ರೆಶ್ ರೇಟ್ ಮತ್ತು 1800 nits ವರೆಗಿನ ಬ್ರೈಟ್​ನೆಸ್ ಒಳಗೊಂಡಿರುವ ನಿರೀಕ್ಷೆಯಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ ಸರಣಿಯ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ ಎಂದು ದೃಢಪಡಿಸಲಾಗಿದೆ. ಆದರೆ ಕಂಪನಿಯು ನಿರ್ದಿಷ್ಟ ಮಾದರಿಯನ್ನು ಬಹಿರಂಗಪಡಿಸಿಲ್ಲ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಯನ್ನು ಹೊಂದಿರಬಹುದು ಎಂದು ಊಹಾಪೋಹಗಳಿವೆ.

ಮೆಮೊರಿಯ ವಿಷಯದಲ್ಲಿ, ಈ ಸ್ಮಾರ್ಟ್‌ಫೋನ್ 8GB RAM ಅನ್ನು 128GB ಅಥವಾ 256GB ಯ ಶೇಖರಣಾ ಆಯ್ಕೆಗಳೊಂದಿಗೆ ಬರಬಹುದು. ವರದಿಗಳ ಪ್ರಕಾರ, ಇದು 50MP ಸೋನಿ IMX882 ಮುಖ್ಯ ಕ್ಯಾಮೆರಾ, 2MP ಬೊಕೆ ಲೆನ್ಸ್ ಜೊತೆಗೆ ಫ್ಲಿಕರ್ ಸಂವೇದಕವನ್ನು ಹೊಂದಿರಬಹುದು. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ 16MP ಮುಂಭಾಗದ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಊಹಿಸಲಾಗಿದೆ.

10,000 ರೂ. ಒಳಗಿನ ಸೂಪರ್ ಸ್ಮಾರ್ಟ್​ಫೋನ್ಸ್: ಈ ಆಫರ್ ಮಿಸ್ ಮಾಡ್ಬೇಡಿ

ವಿವೋ T3 5G 44W ಫ್ಲ್ಯಾಶ್‌ಚಾರ್ಜ್ ತಂತ್ರಜ್ಞಾನಕ್ಕೆ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಹೊಂದುವ ನಿರೀಕ್ಷೆಯಿದೆ. ಇತರ ನಿರೀಕ್ಷಿತ ವೈಶಿಷ್ಟ್ಯಗಳಲ್ಲಿ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, IP54 ರೇಟಿಂಗ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮತ್ತು ಹೆಚ್ಚಿನವು ಸೇರಿವೆ. ಭಾರತದಲ್ಲಿ ವಿವೋ T3 5G ಬೆಲೆಯು ಸೋರಿಕೆಯ ಆಧಾರದ ಮೇಲೆ ಸುಮಾರು 20,000 ರೂ ಎಂದು ಊಹಿಸಲಾಗಿದೆ. ಮಾರ್ಚ್ 21 ರಂದು ಬಿಡುಗಡೆಯ ಸಮಯದಲ್ಲಿ ಈ ಫೋನ್‌ನ ಅಧಿಕೃತ ಬೆಲೆ ಮತ್ತು ಫೀಚರ್ಸ್ ಬಹಿರಂಗಗೊಳ್ಳಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ