Vivo Y73t: ಬರೋಬ್ಬರಿ 6,000mAh ಬ್ಯಾಟರಿ: ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ

ವಿವೋ ಕಂಪನಿ ಇದೀಗ ತನ್ನ ವೈ ಸರಣಿಯಡಿಯಲ್ಲಿ ಹೊಸ ವಿವೋ ವೈ72ಟಿ (Vivo Y73t) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳನ್ನು ಒಳಗೊಂಡಿದೆ.

Vivo Y73t: ಬರೋಬ್ಬರಿ 6,000mAh ಬ್ಯಾಟರಿ: ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ
Vivo Y73t 5G
Follow us
TV9 Web
| Updated By: Vinay Bhat

Updated on:Sep 30, 2022 | 12:32 PM

ಪ್ರಸಿದ್ಧ ವಿವೋ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನುಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ವಿವೋ ವೈ16 (Vivo Y16) ಸ್ಮಾರ್ಟ್‌ಫೋನ್‌ ಅನಾವರಣ ಮಾಡಿದ್ದ ಕಂಪನಿ ಇದೀಗ ತನ್ನ ವೈ ಸರಣಿಯಡಿಯಲ್ಲಿ ಹೊಸ ವಿವೋ ವೈ72ಟಿ (Vivo Y73t) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ 6,000mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್​ ಬಗ್ಗೆ ಮಾಹಿತಿ ಇಲ್ಲಿದೆ.

ವಿವೊ Y73t ಸ್ಮಾರ್ಟ್‌ಫೋನ್‌ ಸದ್ಯಕ್ಕೆ ವಿದೇಶದಲ್ಲಿ ಮೂರು ಮಾದರಿಯ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 8GB RAM + 128GB ವೇರಿಯಂಟ್‌ ಬೆಲೆಯು CNY 1,399, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 16,000 ರೂ. ಎನ್ನಬಹುದು. ಅಂತೆಯೆ 8GB RAM + 256GB ವೇರಿಯಂಟ್‌ ಬೆಲೆಯು CNY 1,599 (ಭಾರತದಲ್ಲಿ ಅಂದಾಜು 18,500 ರೂ.) 12GB RAM + 256GB ವೇರಿಯಂಟ್‌ ಬೆಲೆಯು 1,799 (ಭಾರತದಲ್ಲಿ ಅಂದಾಜು 21,000 ರೂ.) ಆಗಿದೆ. ಈ ಫೋನ್ ಭಾರತದಲ್ಲೂ ಲಾಂಚ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರೀಫ್ರೇಶ್ ರೇಟ್​ನಿಂದ ಕೂಡಿದ್ದು ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 12 ಆಧಾರಿತ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ
Image
JIO: ಪ್ರತಿದಿನ 2GB ಡೇಟಾ: ಜಿಯೋ ನೀಡುತ್ತಿದೆ ಆಕರ್ಷಕ ಬೆಲೆಗೆ ಭರ್ಜರಿ ಪ್ಲಾನ್
Image
Moto G72: ಫೋಟೋಗ್ರಫಿಗೆ ಮೋಟೋ ಸಿದ್ಧಪಡಿಸಿದೆ ಆಕರ್ಷಕ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?
Image
Breaking News: ಮುಂದಿನ ವರ್ಷದಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್‌ಗಳು ನಿಯಮ ಜಾರಿಗೆ ಬರಲಿದೆ: ನಿತಿನ್ ಗಡ್ಕರಿ
Image
Xiaomi 12T: 200MP ಕ್ಯಾಮೆರಾದ ಶವೋಮಿ 12T ಸರಣಿ ಬಿಡುಗಡೆಗೆ ದಿನಾಂಕ ಫಿಕ್ಸ್: ಯಾವಾಗ?, ಬೆಲೆ ಎಷ್ಟು?

ವಿವೋ Y73t ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಆ ಪೈಕಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್​ನಲ್ಲಿ ನೈಟ್ ಮೋಡ್, ಪೋರ್ಟ್ರೇಟ್ ಲೈಟ್ ಎಫೆಕ್ಟ್, ವಿಡಿಯೋ ಫೇಸ್ ಬ್ಯೂಟಿ, ಸೇರಿದಂತೆ ಅನೇಕ ಎಡಿಟಿಂಗ್ ಆಯ್ಕೆಗಳನ್ನು ನೀಡಿರುವುದು ವಿಶೇಷ.

ದೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 44W ಫ್ಲ್ಯಾಶ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಜೊತೆಗೆ ಬ್ಲೂಟೂತ್ 5.0, 4ಜಿ ಎಲ್ ಟಿಇ, ವೈ-ಫೈ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.

Published On - 12:31 pm, Fri, 30 September 22

ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ